ಜಿಪಂ ಸದಸ್ಯ ವಿರೂಪಾಕ್ಷಪ್ಪ ಬಳ್ಳಾರಿ ಬಿಜೆಪಿ ಸೇರ್ಪಡೆ
ಬ್ಯಾಡಗಿ: ಬ್ಯಾಡಗಿ ಮತ ಕ್ಷೇತ್ರದ ಪ್ರಭಾವಿ ಮುಖಂಡ, ಜಿಲ್ಲಾ ಪಂಚಾಯಿತಿ ಸದಸ್ಯ ವಿರೂಪಾಕ್ಷಪ್ಪ ಬಳ್ಳಾರಿ ಬಿಜೆಪಿ ಜಿಲ್ಲಾಧ್ಯಕ್ಷ ಸೋಮಣ್ಣ ಬೇವಿನಮರದ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.
ಸೋಮವಾರ ಇಲ್ಲಿನ ಪಕ್ಷದ ಕಚೇರಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಬಿಜೆಪಿ ಧ್ವಜ ಪಡೆಯುವ ಮೂಲಕ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಬಳಿಕ ಮಾತನಾಡಿದ ವಿರೂಪಾಕ್ಷಪ್ಪ ಬಳ್ಳಾರಿ, ಕಳೆದ ಹಾವೇರಿ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸ್ಥಳೀಯ ಶಾಸಕರ ಕುತಂತ್ರದಿಂದಾಗಿ ಬಿಜೆಪಿಯ ಟಿಕೆಟ್ ವಂಚಿತನಾಗಿದ್ದೆ. ಇದರಿಂದಾಗಿ ಬೇಸತ್ತ ನಾನು ಮಾನಸಿಕವಾಗಿ ಬಿಜೆಪಿಯಲ್ಲಿದ್ದರೂ ಸಹ ದೈಹಿಕವಾಗಿ ಪಕ್ಷದಿಂದ ದೂರವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಜಿಪಂ ಕ್ಷೇತ್ರಕ್ಕೆ ಸ್ಪರ್ಧಿಸಿ ಆಯ್ಕೆಯಾಗಿದ್ದು, ಬಿಜೆಪಿ ಮುಖಂಡರ ಮನವಿ ಮೇರೆಗೆ ಇದೀಗ ಮತ್ತೆ ಮಾತೃಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದರು. ಫೆ. 28ರ ಬಳಿಕ ಪಟ್ಟಣದಲ್ಲಿ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಸಲಾಗುವುದು. ಮುಖ್ಯಮಂತ್ರಿ, ಪಕ್ಷದ ರಾಜ್ಯಾಧ್ಯಕ್ಷ ಸೇರಿದಂತೆ ಬಿಜೆಪಿಯ ವರಿಷ್ಠರಿಗೆ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿದ್ದು, ಸುಮಾರು 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.
ಜಿಲ್ಲಾಧ್ಯಕ್ಷ ಸೋಮಣ್ಣ ಬೇವಿನಮರದ ಮಾತನಾಡಿ, ಬ್ಯಾಡಗಿ ಮತಕ್ಷೇತ್ರದ ಮಟ್ಟಿಗೆ ಹೇಳುವುದಾದರೆ ವಿರೂಪಾಕ್ಷಪ್ಪ ಬಳ್ಳಾರಿ ಅವರು ಪಕ್ಷಕ್ಕೆ ಸೇರ್ಪಡೆಯಿಂದಾಗಿ ಪಕ್ಷಕ್ಕೆ ಬಲ ಹೆಚ್ಚಿದೆ ಎಂದರು.
ಮುಖಂಡರಾದ ಸಿದ್ಧರಾಜು ಕಲಕೋಟಿ, ಪ್ರಧಾನ ಕಾರ್ಯದರ್ಶಿರಾಮಣ್ಣ ಉಕ್ಕುಂದ, ತಾಲೂಕು ಘಟಕದ ಅಧ್ಯಕ್ಷ ಚಂದ್ರಣ್ಣ ಮುಚ್ಚಟ್ಟಿ, ವೀರೇಂದ್ರ ಶೆಟ್ಟರ್, ಪ್ರಕಾಶ ಕಾಟೇನಹಳ್ಳಿ ಹಾಗೂ ಇನ್ನಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

