ಹಾವೇರಿ

ಶಿಂಗಟಾಲೂರು ಏತ ನೀರಾವರಿ ಯೋಜನೆ ಇಂದು ಲೋಕಾರ್ಪಣೆ

Published On :

ಮುಂಡರಗಿ: ತಾಲೂಕಿನ ರೈತರ ಬಹುದಿನದ ಕನಸಾಗಿರುವ ಶಿಂಗಟಾಲೂರ ಏತ ನೀರಾವರಿ ಯೋಜನೆಯ ಎಡಭಾಗದ ಯೋಜನೆಯನ್ನು ಫೆ. 20ರಂದು ಬೆಳಗ್ಗೆ 10 ಗಂಟೆಗೆ ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಲಿದ್ದಾರೆ. 20 ವರ್ಷದಿಂದ ಇದಕ್ಕಾಗಿ ಕಾಯುತ್ತಿದ್ದ ಈ ಭಾಗದ ರೈತರ ಕನಸು ನನಸಾದಂತಾಗಿದೆ. ಫೆ. 20ರಂದು ಈ ಯೋಜನೆಯ ಒಂದು ಭಾಗವಾದ ಹಮ್ಮಿಗಿ-ಮುಂಡವಾಡ ಪ್ರದೇಶದ ಹಮ್ಮಿಗಿ, ಜಾಲವಾಡಗಿ, ಮುಂಡವಾಡ, ಬಿದರಹಳ್ಳಿ, ವಿಠಲಾಪುರ ಗ್ರಾಮಗಳ 4672 ಎಕರೆ ಪ್ರದೇಶಕ್ಕೆ ನೀರನ್ನು ಒದಗಿಸುವ ಕಾಮಗಾರಿ ಪೂರ್ಣಗೊಂಡಿದ್ದು, ಸಚಿವರಿಂದ ಲೋಕಾರ್ಪಣೆಗೊಳ್ಳಲಿದೆ. ಶಾಸಕ ರಾಮಣ್ಣ ಲಮಾಣಿ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಸಚಿವ ಕಳಕಪ್ಪ ಬಂಡಿ, ಜಿಪಂ ಅಧ್ಯಕ್ಷ ಎಂ.ಎಸ್. ಪಾಟೀಲ, ಸಂಸದ ಶಿವಕುಮಾರ ಉದಾಸಿ, ಶಾಸಕ ಸಿ.ಸಿ. ಪಾಟೀಲ, ಶ್ರೀಶೈಲಪ್ಪ ಬಿದರೂರ, ವಿಪ ಸದಸ್ಯ ಬಸವರಾಜ ಹೊರಟ್ಟಿ, ಮೋಹನ ಲಿಂಬಿಕಾಯಿ, ಶಿವರಾಜ ಸಜ್ಜನರ, ಶ್ರೀನಿವಾಸ ಮಾನೆ, ತಾಪಂ ಅಧ್ಯಕ್ಷೆ ತಾರೂಬಾಯಿ ಚವ್ಹಾಣ, ಹಮ್ಮಗಿ ಗ್ರಾಪಂ ಅಧ್ಯಕ್ಷೆ ಸುಮಿತ್ರವ್ವ ತಳವಾರ, ಬಿದರಹಳ್ಳಿ ಗ್ರಾಪಂ ಅಧ್ಯಕ್ಷೆ ಪಾರ್ವತೆವ್ವ ಹಡೆಗಾರ, ತಾಪಂ ಸದಸ್ಯ ಪಿ. ರಾಮಾಂಜನೇಯ ರಾಜು ಮತ್ತು ವಿಶೇಷ ಆಹ್ವಾನಿತರಾಗಿ ಮಾಜಿ ಸಚಿವ ಎಸ್.ಎಸ್. ಪಾಟೀಲ ಆಗಮಿಸುವರು.ಮಾಜಿ ಸಚಿವ ಎಸ್.ಎಸ್. ಪಾಟೀಲರ ಕನಸಿನ ಕೂಸಾದ ಈ ಯೋಜನೆ ಮುಗಿಸುವಂತೆ ಒತ್ತಾಯಿಸಿ ಎಸ್.ಎಸ್. ಪಾಟೀಲ, ಕರಬಸಪ್ಪ ಹಂಚಿನಾಳ, ಶಿವಕುಮಾರಗೌಡ ಪಾಟೀಲ ಹಾಗೂ ವಿವಿಧ ಸಂಘಟನೆಗಳು ಹೋರಾಟ ಮಾಡಿದ್ದವು. ಬಿಜೆಪಿ ಸರ್ಕಾರ ಅಧಿಕಾರ ವಹಿಸಿಕೊಂಡ ಬಳಿಕ ಜಿಲ್ಲೆಯ ಎಲ್ಲ ಶಾಸಕರು, ಮಂತ್ರಿಗಳ ಪ್ರಾಮಾಣಿಕ ಪ್ರಯತ್ನದಿಂದ ಯೋಜನೆ ಸಾಕಾರಗೊಳ್ಳುತ್ತಿರುವುದು ರೈತರಿಗೆ ಸಂತೋಷವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.