ಪ್ರಾದೇಶಿಕ ಪಕ್ಷಗಳ ಯುಗ ಆರಂಭ: ಕೆಜೆಪಿ ಅಧ್ಯಕ್ಷ ಶೆಟ್ಟರ್ ಬಣ್ಣನೆ
ಬ್ಯಾಡಗಿ: ಬದಲಾದ ರಾಜಕೀಯ ಸನ್ನಿವೇಶದಲ್ಲಿ ಪ್ರಾದೇಶಿಕ ಪಕ್ಷಗಳ ಅನಿವಾರ್ಯತೆ ಎದುರಾಗಿದೆ ಎಂದು ಕೆಜೆಪಿ ತಾಲೂಕು ಘಟಕದ ಅಧ್ಯಕ್ಷ ಮುರಿಗೆಪ್ಪ ಶೆಟ್ಟರ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಮುಪ್ಪಿನೇಶ್ವರ ಮಠದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಕೆಜೆಪಿ ಕಾರ್ಯಕರ್ತರ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
ಅಭಿವೃದ್ಧಿ ದೃಷ್ಟಿಯಿಂದ ರಾಜ್ಯವನ್ನು ಕಲ್ಯಾಣ ಕರ್ನಾಟಕ ಮಾಡಬೇಕೆಂದು ಬಿ.ಎಸ್. ಯಡಿಯೂರಪ್ಪ ತೆಗೆದುಕೊಂಡ ನಿರ್ಧಾರವನ್ನು ಸ್ವಾಗತಿಸಿದ ಸ್ಥಳೀಯ ಶಾಸಕರು, ಅವರನ್ನು ಬೆಂಬಲಿಸಿ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ. ಬ್ಯಾಡಗಿ ಪುರಸಭೆಯನ್ನು ರಾಜ್ಯದಲ್ಲಿಯೇ ಮಾದರಿಯಾಗಿ ಮಾಡಬೇಕೆನ್ನುವುದು ಪಕ್ಷದ ನಿಲುವಾಗಿದ್ದು, ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಕೆಜೆಪಿಗೆ ಸೇರ್ಪಡೆ: ರಾಜ್ಯ ರೈತ ಸಂಘ ಹಸಿರು ಸೇನೆ ಅಧ್ಯಕ್ಷ ಗಂಗಣ್ಣ ಎಲಿ, ಕಾಂಗ್ರೆಸ್ ಮುಖಂಡ, ಪುರಸಭೆ ಮಾಜಿ ಅಧ್ಯಕ್ಷ ಅಜೀಜ್‌ಸಾಬ್ ಬಳ್ಳಾರಿ, ಮಾಜಿ ಉಪಾಧ್ಯಕ್ಷ ಬಾಬುಸಾಬ್ ಬಡಿಗೇರ, ಮಹ್ಮದಲಿ ಜಿನ್ನಾ ಹಲಗೇರಿ ಕೆಜೆಪಿ ಸೇರಿದರು. ವೇದಿಕೆಯಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಕನ್ನಪ್ಪ ಕೊಪ್ಪದ, ಎಪಿಎಂಸಿ ಅಧ್ಯಕ್ಷ ರವೀಂದ್ರ ಪಟ್ಟಣಶೆಟ್ಟಿ, ಸುರೇಶ ಯತ್ನಳ್ಳಿ, ಶಂಭಣ್ಣ ಬಿದರಿ, ಬಸವರಾಜ ಸಂಕಣ್ಣನವರ, ಮೃತ್ಯುಂಜಯ ಮನೋಳಿಮಠ, ಪರಶುರಾಮ ಉಜ್ಜಿನಿಕೊಪ್ಪ, ಅರುಣ ಪಾಟೀಲ, ವಿದ್ಯಾಶೆಟ್ಟಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

