ಹಾವೇರಿ

ಬಂದ್‌ಗೆ ನೀರಸ ಪ್ರತಿಕ್ರಿಯೆ

Published On :

ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಫೆ.20
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಬುಧವಾರ ಕರೆ ನೀಡಿದ್ದ ಭಾರತ ಬಂದ್‌ಗೆ ಪಟ್ಟಣದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.
ರಾಷ್ಟ್ರೀಕೃತ ಬ್ಯಾಂಕುಗಳು ಹಣಕಾಸು ವಹಿವಾಟು ಸ್ಥಗಿತಗೊಳಿಸಿದ್ದನ್ನು ಬಿಟ್ಟರೆ ಇನ್ನುಳಿದಂತೆ ಸಾರ್ವಜನಿಕರ ಜೀವನ ಎಂದಿನಂತೆ ಸಾಗಿತು. ವಾಣಿಜ್ಯ ಮಳಿಗೆ, ಹೊಟೇಲ್, ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಸಾರಿಗೆ ಸಂಸ್ಥೆ ಬಸ್‌ಗಳು, ಆಟೋ ಹಾಗೂ ಇನ್ನಿತರ ಖಾಸಗಿ ವಾಹನಗಳು ಎಂದಿನಂತೆ ಸಂಚರಿಸಿದವು.
ಪಟ್ಟಣದ ಎಪಿಎಂಸಿ ಯಾರ್ಡ್‌ನಲ್ಲಿ ಮೆಣಸಿನಕಾಯಿ ವ್ಯಾಪಾರ, ವಹಿವಾಟು ಕೂಡ ಎಂದಿನಂತೆ ಸಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಹಾವೇರಿ ಜಿಲ್ಲಾಧಿಕಾರಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ತಾಲೂಕಾದ್ಯಂತ ಶಾಲಾ-ಕಾಲೇಜುಗಳು ಬುಧವಾರ ಕಾರ್ಯನಿರ್ವಹಿಸಲಿಲ್ಲ.
ಪೂರ್ವ ನಿಗದಿಯಾಗಿದ್ದ ಶ್ರೀ ವೀರಭದ್ರೇಶ್ವರ ಹಾಗೂ ಕಲ್ಮೇಶ್ವರ ಜಾತ್ರಾ ಮಹೋತ್ಸವಕ್ಕೆ ಪಟ್ಟಣದಲ್ಲಿ ಯಾವುದೇ ಅಡೆತಡೆಯಾಗದೇ ವಿಜೃಂಭಣೆಯಿಂದ ನೆರವೇರಿತು. ಪೆಟ್ರೋಲ್ ಪಂಪ್ ಎಂದಿನಂತೆ ಕಾರ್ಯನಿರ್ವಹಿಸಿದವಾದರೂ, ಬಂದ್ ಎಂಬ ಕಾರಣಕ್ಕೆ ಗ್ರಾಹಕರ ಸಂಖ್ಯೆಯಲ್ಲಿ ಸ್ವಲ್ಪಮಟ್ಟಿಗೆ ಇಳಿಮುಖವಾಗಿತ್ತು. ಮುಂಜಾಗ್ರತಾ ಕ್ರಮವಾಗಿ ರಕ್ಷಣಾ ಇಲಾಖೆಯು ಆಯಕಟ್ಟಿನ ಸ್ಥಳಗಳಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ನಿಯೋಜಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.