ಜನಸಂಖ್ಯೆ ಹೆಚ್ಚಳದಿಂದ ಅರ್ಥ ವ್ಯವಸ್ಥೆ ಬುಡಮೇಲು
ಬ್ಯಾಡಗಿ: ವಂಶವಾಹಿನಿ ಮುಂದುವರೆಸಲು ದಾಂಪತ್ಯ ಜೀವನ ಒಂದೆಡೆ ಸಹಕಾರಿಯಾದರೇ, ಅತಿಯಾಗಿ ಬೆಳೆಯುತ್ತಿರುವ ಜನಸಂಖ್ಯೆಯು ಇನ್ನೊಂದೆಡೆ ದೇಶದ ಅರ್ಥ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದೆ ಎಂದು ಹಾವನೂರಿನ ಶಿವಕುಮಾರಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದರು.
ಶ್ರೀ ವೀರಭದ್ರೇಶ್ವರ ಹಾಗೂ ಕಲ್ಮೇಶ್ವರ ಜಾತ್ರಾಮಹೋತ್ಸವ ಅಂಗವಾಗಿ ಪಟ್ಟಣದಲ್ಲಿ ಏರ್ಪಡಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನ್ನಿದ್ಯ ವಹಿಸಿ ಮಾತನಾಡಿದರು.
ದೇಶದ ಜನಸಂಖ್ಯೆ 125 ಕೋಟಿ ಮೀರಿದೆ. ಆದರೆ, ಜನಸಂಖ್ಯೆಗೆ ಅನುಗುಣವಾಗಿ ವಸತಿ, ಶಿಕ್ಷಣ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರಗಳು ಹರಸಾಹಸ ಪಡುತ್ತಿವೆ ಎಂದರು.
ವಿಧಾನ ಪರಿಷತ್ ಸದಸ್ಯ ಶಿವರಾಜ ಸಜ್ಜನ ಮಾತನಾಡಿ, ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಒಂದು ಭಾಗವಾಗಿರುವ ಸಾಮೂಹಿಕ ವಿವಾಹಗಳು ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಲಿವೆ ಎಂದರು. ಜಿಪಂ ಸದಸ್ಯ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ಸಾಮೂಹಿಕ ವಿವಾಹಗಳಿಂದ ಸಮಾಜದಲ್ಲಿ ಭಾವೈಕ್ಯತೆ ಮೂಡಲು ಸಾಧ್ಯ ಸಾರ್ವಜನಿಕ ಸೇವೆಯಲ್ಲಿ ತೊಡಗಿದ ಸಂಘ-ಸಂಸ್ಥೆಗಳು ಹೆಚ್ಚು ಆದ್ಯತೆ ನೀಡಬೇಕಾಗಿದೆ ಎಂದರು.
ಪುರಸಭೆ ಮಾಜಿ ಸದಸ್ಯ ಎಸ್.ಆರ್. ಪಾಟೀಲ ಮಾತನಾಡಿ, ನೂತನ ದಂಪತಿಗಳು ಒಬ್ಬರನ್ನೊಬ್ಬರು ಅರಿತು ಸಾಮರಸ್ಯದ ಬದುಕು ನಡೆಸಿದಾಗ ಮಾತ್ರ, ಸಾಮೂಹಿಕ ವಿವಾಹಗಳಿಗೆ ನಿಜವಾದ ಅರ್ಥ ಬರಲಿದೆ ಎಂದರು.
ಮಾಜಿ ಶಾಸಕ ಸುರೇಶಗೌಡ ಮಾತನಾಡಿ, ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಸಮಿತಿ ಪ್ರತಿವರ್ಷ ಸಾಮೂಹಿಕ ವಿವಾಹಗಳನ್ನು ಏರ್ಪಡಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದರು.
ಸಾಮೂಹಿಕ ವಿವಾಹ ಮಹೋತ್ಸವದಲ್ಲಿ 26 ಜೋಡಿ ವಧು-ವರರು ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ವೇದಿಕೆಯಲ್ಲಿ ರಾಚಯ್ಯ ಓದಿಸೋಮಠ, ಕುಮಾರಗೌಡ್ರ ಪಾಟೀಲ, ಚಂದ್ರಣ್ಣ ಮುಚ್ಚಟ್ಟಿ, ಶಂಕರಗೌಡ ಪಾಟೀಲ, ರಾಮಣ್ಣ ಉಕ್ಕುಂದ, ಸಿ.ಆರ್. ಆಲದಗೇರಿ, ಎಂ.ಬಿ. ಹುಚ್ಚಗೊಂಡರ, ಎನ್.ಎಂ. ಕಲ್ಮಠ, ಎಸ್.ಎಸ್. ಶೆಟ್ಟರ, ಎಸ್.ಜಿ. ಶಿರೂರ, ಎಂ.ಎಸ್. ಹೊಸಂಗಡಿ, ಜಿ.ಜಿ. ತಿಳವಳ್ಳಿ, ಎಸ್.ಎಂ. ಬಣಕಾರ, ಇನ್ನಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

