ಹಾವೇರಿ

ಬಿಜೆಪಿ ಸಾಧನೆ ಪರಿಗಣಿಸಿ

Published On :

ಕನ್ನಡಪ್ರಭ ವಾರ್ತೆ, ಬ್ಯಾಡಗಿ ಫೆ. 21
ಹಣದ ಆಮಿಷ ನೀಡಿ ಚುನಾವಣೆಯಲ್ಲಿ ಗೆಲ್ಲುವ ದಿನಗಳು ದೂರಾಗಿವೆ. ಪ್ರಭುದ್ಧ ಮತದಾರರು ಬಿಜೆಪಿ ಸರ್ಕಾರದ ಸಾಧನೆ ಪರಿಗಣಿಸಿ ಮತ ಚಲಾಯಿಸಲಿದ್ದಾರೆ ಎಂದು ಎಪಿಎಂಸಿ ಸದಸ್ಯ ಶಂಕರಗೌಡ ಪಾಟೀಲ ಹೇಳಿದರು. ತಹಸೀಲ್ದಾರ್ ಕಚೇರಿಯಲ್ಲಿ ಗುರುವಾರ ಬಿಜೆಪಿ ಅಭ್ಯರ್ಥಿ ಪ್ರೇಮ ಸಂಕಣ್ಣನವರ ನಾಮಪತ್ರ ಸಲ್ಲಿಸಿ ಬಳಿಕ ಪತ್ರಿಕೆಯೊಂದಿಗೆ ಮಾತನಾಡಿದರು. ಹಣದ ಆಮಿಷ ನೀಡುವ ಮೂಲಕ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಯಶಸ್ವಿಯಾಗುತ್ತಿದ್ದ ಕಾಂಗ್ರೆಸ್‌ಗೆ, ಅಭಿವೃದ್ಧಿ ಎಂಬುದೇ ಗೊತ್ತಿಲ್ಲ. ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳು ಇಡೀ ಯೋಜನೆಗಳನ್ನು ನುಂಗಿ ಹಾಕುವ ಮೂಲಕ ಕಳೆದ 60 ವರ್ಷಗಳಿಂದ ದೇಶವನ್ನು ಬಡತನ ಬೇಗೆಯಲ್ಲಿರುವಂತೆ ಮಾಡಿದ್ದಾರೆ ಎಂದರು. ತಾಲೂಕು ಘಟಕದ ಅಧ್ಯಕ್ಷ ಚಂದ್ರಣ್ಣ ಮುಚ್ಚಟ್ಟಿ ಮಾತನಾಡಿದರು. ನಾಮಪತ್ರ ಸಲ್ಲಿಸಿದ ಪ್ರೇಮಾ ಸಂಕಣ್ಣನವರ ಮಾತನಾಡಿ, ಈ ಬಾರಿ ಬಿಜೆಪಿಯಿಂದ 7ನೇ ವಾರ್ಡ್‌ಗೆ ಸ್ಪರ್ಧಿಸುತ್ತಿದ್ದೇನೆ. ಒಂದು ಬಾರಿ ಸದಸ್ಯೆಯಾಗಿ ಅನುಭವವಿರುವ ನನಗೆ ವಾರ್ಡ್‌ನಲ್ಲಿರುವ ಎಲ್ಲ ನಾಗರಿಕರ ಹತ್ತಿರದ ಪರಿಚಯವಿದ್ದು, ಪಟ್ಟಣದ ಅಭಿವೃದ್ಧಿಗೆ ಸದಾ ಸಿದ್ಧವಿರುವುದಾಗಿ ತಿಳಿಸಿದರು. ಈ ಸಂದರ್ಭ ಬಿಜೆಪಿ ಮುಖಂಡರಾದ ರಾಮಣ್ಣ ಉಕ್ಕುಂದ, ವೀರೇಂದ್ರ ಶೆಟ್ಟರ, ಇನ್ನಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.