ಹಾವೇರಿ

ರಾಜ್ಯ ಸರ್ಕಾರದಿಂದ ಅಭಿವೃದ್ಧಿ ಕಡೆಗಣನೆ

Published On :

ಹಾವೇರಿ: ರಾಜ್ಯ ಸರ್ಕಾರದ ದುರಾಡಳಿತ, ಭ್ರಷ್ಟಾಚಾರ, ಸ್ವ-ಜನ ಪಕ್ಷಪಾತದಿಂದಾಗಿ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ರಾಜ್ಯದ ಅಭಿವೃದ್ಧಿ ಕಡೆಗಣಿಸಿರುವ ಬಿಜೆಪಿ ಸಚಿವರು, ಶಾಸಕರು ತಮ್ಮ ಸ್ವಾರ್ಥ ಸಾಧನೆಗೆ ಹೆಚ್ಚಿನ ಒತ್ತು ನೀಡಿದ್ದರಿಂದ ರಾಜ್ಯ ಜಾಗತಿಕ ಮಟ್ಟದಲ್ಲಿ ತಲೆ ತಗ್ಗಿಸುವಂತಾಗಿದೆ ಎಂದು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ. ಹಿರೇಮಠ ಹೇಳಿದರು. ತಾಲೂಕಿನ ಕಳ್ಳಿಹಾಳ ಗ್ರಾಮದಲ್ಲಿ ನಡೆದ ಕಾಂಗ್ರೆಸ್‌ಗೆ ಬನ್ನಿ ಬದಲಾವಣೆ ತನ್ನಿ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಅವಧಿಗೆ ಮುನ್ನವೇ ಶಾಸಕರು ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಿದ್ದಾರೆ. ಜನತೆಯ ಸಮಸ್ಯೆಯನ್ನು ಕೇಳುವವರೇ ಇಲ್ಲದಂತಾಗಿದೆ. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಿದ್ದು ಜನತೆ ಕಿಲೋಮೀಟರ್ ದೂರ ಕ್ರಮಿಸಿ ನೀರು ತರುವಂತಾಗಿದೆ. ಈ ಸಮಸ್ಯೆ ಬಗ್ಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಅನೇಕ ಕಡೆ ಪ್ಲೋರೈಡ್ ನೀರಿದ್ದು, ಜನತೆ ಅನೇಕ ರೋಗಗಳಿಂದ ಬಳಲುತ್ತಿದ್ದಾರೆ. ಇದಕ್ಕೆ ಹೊಣೆ ಯಾರು ಎಂದು ಪ್ರಶ್ನಿಸಿದರು. ಬಿಜೆಪಿ ಆಡಳಿತದಿಂದ ಜನತೆ ರೋಸಿ ಹೋಗಿದ್ದಾರೆ. ಕಾಂಗ್ರೆಸ್‌ಗೆ ಈ ಭಾರಿ ಉಜ್ವಲ ಭವಿಷ್ಯವಿದೆ. ಮುಖಂಡರು ಭಿನ್ನಾಬಿಪ್ರಾಯ ಮರೆತು ಪಕ್ಷದ ಸಂಘಟನೆಗೆ ಶ್ರಮಿಸುವ ಮೂಲಕ ಪಕ್ಷ ಬಲಪಡಿಸಬೇಕೆಂದರು. ನಿವೃತ್ತ ಸೈನಿಕ ಸಿದ್ಧಲಿಂಗೇಶ ಕೋರಿ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ. ಹಿರೇಮಠ ಅವರನ್ನು ಸನ್ಮಾನಿಸಲಾಯಿತು. ಮಾಜಿ ಶಾಸಕ ರುದ್ರಪ್ಪ ಲಮಾಣಿ, ಕೊಟ್ರೇಶಪ್ಪ ಬಸೇಗಣ್ಣಿ, ಎಸ್‌ಎಫ್‌ಎನ್ ಗಾಜಿಗೌಡ್ರ, ಪರಮೇಶಪ್ಪ ಮೇಗಳಮನಿ, ಸಂಜೀವ ಕುಮಾರ ನೀರಲಗಿ, ಐ.ಯು. ಪಠಾಣ, ಶಿವಕುಮಾರ ತಾವರಗಿ, ಕೆ.ಎಸ್. ಪುರದ, ಸುರೇಶ ಹರಮಗಟ್ಟಿ, ಶಿವಜಾತಪ್ಪ ಚನ್ನೂರ, ರಮೇಶ ಕಡಕೋಳ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.