ಹಾವೇರಿ

ಪೋಲಿಯೋ ಲಸಿಕೆಗೆ ಸಕಲ ಸಿದ್ಧತೆ: ಶ್ರೀವರ

Published On :

ಕನ್ನಡಪ್ರಭ ವಾರ್ತೆ, ಹಾವೇರಿ, ಫೆ. 22
ಪ್ರಸಕ್ತ ಸಾಲಿನ 2ನೇ ಸುತ್ತಿನ ಪಲ್ಸ್ ಪೋಲೀಯೋ ಕಾರ್ಯಕ್ರಮ ಫೆ. 24ರಂದು ಜರುಗಲಿದೆ ಎಂದು ಜಿಲ್ಲಾಧಿಕಾರಿ ಎಚ್.ಜಿ. ಶ್ರೀವರ ತಿಳಿಸಿದ್ದಾರೆ.
ಈ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 1,90,543 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಬೇಕಾಗಿದೆ. ಈ ಕಾರ್ಯಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಪಾಲಕರು ತಮ್ಮ 5 ವರ್ಷದೊಳಗಿನ ಮಕ್ಕಳನ್ನು ಅಂದು ಖುದ್ದಾಗಿ ಲಸಿಕಾ ಕೇಂದ್ರಗಳಿಗೆ ಕರೆತಂದು ಲಸಿಕೆ ಹಾಕಿಸಿಕೊಳ್ಳಬೇಕೆಂದು ಮನವಿ ಮಾಡಿದರು.
ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಡಿ.ಬಿ. ಮೂಲಿಮನಿ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಬಾರಿಯ ಪಲ್ಸ್ ಪೋಲೀಯೋ ಕಾರ್ಯಕ್ರಮದಲ್ಲಿ ಶೇ. 101ರಷ್ಟು ಸಾಧನೆಗೈಯಲಾಗಿದೆ. ಈ ಬಾರಿಯೂ ಸಂಘಟಿತ ಪ್ರಯತ್ನದ ಮೂಲಕ ಉತ್ತಮ ಸಾಧನೆ ಮಾಡಬೇಕು.
ಫೆ. 24ರಂದು ಬೂತ್‌ಮಟ್ಟದಲ್ಲಿ ಲಸಿಕೆ ನೀಡಿಕೆ ನಂತರ, ಫೆ. 25, 26 ಹಾಗೂ 27ರಂದು 3 ದಿನಗಳ ಕಾಲ ಜಿಲ್ಲೆಯಾದ್ಯಂತ ಇಲಾಖಾ ಸಿಬ್ಬಂದಿ ಮನೆಮನೆ ಭೇಟಿ ನೀಡಿ, ಲಸಿಕೆ ಹಾಕುವರು ಎಂದ ಮಾಹಿತಿ ನೀಡಿದರು.
ಆರೋಗ್ಯ ಇಲಾಖೆ ಜಿಲ್ಲಾ ನೋಡಲ್ ಅಧಿಕಾರಿ ಡಾ. ಎ.ವಿ. ದೇಶಪಾಂಡೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಎಸ್. ರಾಘವೇಂದ್ರಸ್ವಾಮಿ, ಪೊಲೀಸ್ ಅಧೀಕ್ಷಕ ಡಾ. ಚೇತನಸಿಂಗ್ ರಾಠೋಡ್, ಜಿಪಂ ಸಹಾಯಕ ಕಾರ್ಯದರ್ಶಿ ಎಂ.ಎಸ್. ಕುರ್ತಕೋಟಿ, ಆರೋಗ್ಯ ಇಲಾಖೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ರೋಟರಿ ಅಧ್ಯಕ್ಷ ಎಸ್.ವಿ. ಹಿರೇಗೌಡರ ಹಾಗೂ ಕಾರ್ಯದರ್ಶಿ ವಿ.ಸಿ. ಮೊಗಲಿಶೆಟ್ಟರ್, ಆರೋಗ್ಯ ಇಲಾಖೆಯ ತಾಲೂಕು ನೋಡಲ್ ಅಧಿಕಾರಿಗಳು, ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.