ಹಾವೇರಿ

ವಿಕೋಪ ನಿರ್ವಹಣೆಗೆ ಸಾಮೂಹಿಕ ಜವಾಬ್ದಾರಿ ಅಗತ್ಯ

Published On :

ಬ್ಯಾಡಗಿ: ಪ್ರಕೃತಿ ವಿಕೋಪದಂತಹ ಕ್ಲಿಷ್ಟ ಸಂದರ್ಭಗಳನ್ನು ಸಮರ್ಥವಾಗಿ ನಿಭಾಯಿಸಲು ಸಮುದಾಯದ ಪಾತ್ರ ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಸಾಮೂಹಿಕ ಜವಾಬ್ದಾರಿ ಹೊರಬೇಕಾಗುತ್ತದೆ ಎಂದು ಸಂಪನ್ಮೂಲ ವ್ಯಕ್ತಿ ಪರಶುರಾಮ ಕನ್ನಪ್ಪನವರ ಹೇಳಿದರು.
ಇಲ್ಲಿನ ಸುವರ್ಣ ಸೌಧದಲ್ಲಿ ಶುಕ್ರವಾರ ಏರ್ಪಡಿಸಿದ್ದ 5 ದಿನಗಳ ಪ್ರಾತ್ಯಕ್ಷಿಕೆ ತರಬೇತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಪ್ರಕೃತಿ ವಿಕೋಪ ನಿರ್ವಹಣೆಯಲ್ಲಿ ಸಮುದಾಯ ನಿರ್ವಹಿಸಬೇಕಾದ ಪಾತ್ರ, ವಿಶೇಷ ಸಂದರ್ಭಗಳಲ್ಲಿ ಕಾರ್ಯ ನಿರ್ವಹಿಸಬೇಕಾದ ಮಾಹಿತಿ, ಭೂಕಂಪದ ಮುನ್ನೆಚ್ಚರಿಕೆ, ಹವಾಮಾನ ವೈಪರಿತ್ಯ, ಪರಿಹಾರಗಳು, ಅಗ್ನಿದುರಂತ ಸಂದರ್ಭದಲ್ಲಿ ನಿರ್ವಹಿಸಬೇಕಾದ ತಕ್ಷಣದ ಪರಿಹಾರ, ಆರೋಗ್ಯ ಇಲಾಖೆ ಸಾಂಕ್ರಾಮಿಕ ರೋಗಗಳಂತಹ ಸಮಯದಲ್ಲಿ ಅನುಸರಿಸಬೇಕಾದ ನಿಯಮಗಳ, ತಾಂತ್ರಿಕತೆ ಸಮಯದಲ್ಲಿ ಉಂಟಾದ ಸಮಸ್ಯೆಗೆ ಪರಿಹಾರ, ಇನ್ನಿತರೆ ಕಾರ್ಯಕ್ರಮಗಳ ಮಾಹಿತಿಗಳನ್ನು ಪ್ರಾತ್ಯಕ್ಷಿಕವಾಗಿ ತೋರಿಸಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಿರಿಯ ಆರೋಗ್ಯ ಸಹಾಯಕ, ಕಂದಾಯ ಇಲಾಖೆ, ಶಿಕ್ಷಣ, ಅಗ್ನಿಶಾಮಕದಳ, ಗೃಹರಕ್ಷಕ ದಳ, ಇನ್ನಿತರ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ತರಬೇತಿಯಲ್ಲಿ ಪಾಲ್ಗೊ ಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.