ರಾಗ ಬದಲಿಸಿದ ಸುರೇಶಗೌಡ
ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಫೆ. 23
ಪುರಸಭೆಯ 4ನೇ ವಾರ್ಡ್ನಿಂದ ಸ್ಪರ್ಧಿಸುವುದಾಗಿ ಘೋಷಿಸಿ ಮತ್ತೊಮ್ಮೆ ಅಚ್ಚರಿ ಮೂಡಿಸಿದ್ದ ಮಾಜಿ ಶಾಸಕ ಸುರೇಶಗೌಡ, ಇದೀಗ ರಾಗ ಬದಲಿಸಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಯಾವುದೇ ವಾರ್ಡ್ನಿಂದಲೂ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಎಲ್ಲ ಕುತೂಹಲಗಳಿಗೆ ತೆರೆ ಎಳೆದರು.
ಈ ಕುರಿತು ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಉದಾಸಿ ಸಂಬಂದಿಯೊಬ್ಬರು ಅದೇ ವಾರ್ಡ್ನಿಂದ ಸ್ಪರ್ಧಿಸುವುದಾಗಿ ಒತ್ತಡ ತಂದ ಹಿನ್ನೆಲೆಯಲ್ಲಿ 4ನೇ ವಾರ್ಡ್ನ್ನು ತ್ಯಜಿಸಿರುವುದಾಗಿ ತಿಳಿಸಿದರು.
ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಒಟ್ಟಾರೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂಬ ವಿಷಯ ಸ್ಪಷ್ಟಪಡಿಸಿದರು. ಪ್ರಸಕ್ತ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟವಾಗಲಿದೆ ಎಂದು ಭವಿಷ್ಯ ನುಡಿದರು. 23 ವಾರ್ಡ್ಗಳಲ್ಲಿ ಕೆಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿದ್ದು, ಈ ಬಾರಿ 16ರಿಂದ 17 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಅಧಿಕಾರದ ಗದ್ದುಗೆ ಏರಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

