ಹಾವೇರಿ

ಕೆಜೆಪಿಗೆ ಟಾಕನಗೌಡ ಆಯ್ಕೆ (ಸುದ್ದಿ ಸಂಕ್ಷೇಪ)

Published On :

ಶಿಗ್ಗಾಂವಿ: ಕರ್ನಾಟಕ ಜನತಾ ಪಕ್ಷದ ತಾಲೂಕು ಅಧ್ಯಕ್ಷರನ್ನಾಗಿ ಟಾಕನಗೌಡ ವಿರೂಪಾಕ್ಷಗೌಡ ಪಾಟೀಲ ಇವರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಮೈಲಪ್ಪ ಗುಡಗೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುವ ವಿಜ್ಞಾನಿ ಪ್ರಶಸ್ತಿಗೆ ಅರ್ಜಿ ಆಹ್ವಾನ
ಹಾವೇರಿ: ರಾಜ್ಯ ವಿಜ್ಞಾನ ಪರಿಷತ್ತು 2012-13ನೇ ವರ್ಷದ ಯುವ ವಿಜ್ಞಾನಿ ಪ್ರಶಸ್ತಿಗಾಗಿ ಅರ್ಹ ಪ್ರೌಢಶಾಲಾ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳಿಂದ ಮಾ. 10ರೊಳಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಪ್ರಶಸ್ತಿ ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಪ್ರಾಯೋಜಕತ್ವದಲ್ಲಿ ಸ್ಥಾಪಿಸಲಾಗಿದ್ದು, ವೈಜ್ಞಾನಿಕ ಕಾರ್ಯಕ್ರಮ ಹಾಗೂ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳ ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶ ಹೊಂದಿದೆ. ಇಂತಹ ಚಟುವಟಿಕೆಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ತೋರಿದ ಆಯ್ದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನಗಳನ್ನು ನೀಡಿ ಗೌರವಿಸಲಾಗುವುದೆಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಗೌರವ ಕಾರ್ಯದರ್ಶಿ ತಿಳಿಸಿದ್ದಾರೆ. ಅರ್ಹ ವಿದ್ಯಾರ್ಥಿಗಳು ನಿಗದಿತ ಅರ್ಜಿಯಲ್ಲಿ ವಿವರಗಳನ್ನು ಭರ್ತಿಗೊಳಿಸಿ ತಮ್ಮ ಮುಖ್ಯೋಪಾಧ್ಯಾಯರು ಹಾಗೂ ಪ್ರಾಂಶುಪಾಲರ ಮೂಲಕ ಸಲ್ಲಿಸಬೇಕು. ಅರ್ಜಿಯನ್ನು ಮೊದಲು ಜಿಲ್ಲಾ ಹಂತದಲ್ಲಿ ನಂತರ ರಾಜ್ಯಮಟ್ಟದಲ್ಲಿ ಪರಿಶೀಲಿಸಿ ಅತ್ಯುತ್ತಮವೆಂದು ಪರಿಗಣಿಸಲ್ಪಟ್ಟವರನ್ನು ಯುವವಿಜ್ಞಾನಿಯಾಗಿ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 14ರಿಂದ 18ವರ್ಷದೊಳಗಿನ ಪ್ರೌಢಶಾಲಾ, ಪದವಿ ಪೂರ್ವ ವಿದ್ಯಾರ್ಥಿಗಳಾಗಿರಬೇಕು. ಅಂದರೆ, ವಯೋವುತಿ 2013ನೇ ಏಪ್ರಿಲ್ 10ಕ್ಕೆ 18 ವರ್ಷ ಮೀರಿರಬಾರದು. ಆಯ್ಕೆಯಾದ ಯುವ ವಿಜ್ಞಾನಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ರು. 3000, ದ್ವಿತೀಯ ರು. 2000 ಮತ್ತು ತೃತೀಯ ರು. 1 ಸಾವಿರ ಹಾಗೂ ರಾಜ್ಯಮಟ್ಟದಲ್ಲಿ ಪ್ರಥಮ ರು. 10 ಸಾವಿರ, ದ್ವಿತೀಯ ರು. 7 ಸಾವಿರ ಹಾಗೂ ತೃತೀಯ ರು. 5 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರಗಳಿಂದ ಪುರಸ್ಕರಿಸಲಾಗುವುದು. ನಿಗದಿತ ಅರ್ಜಿ ನಮೂನೆಯಲ್ಲಿ ತುಂಬಿ, ಅಗತ್ಯ ದಾಖಲೆಗಳೊಂದಿಗೆ ಮಾ. 10ರೊಳಗಾಗಿ ಡಿಡಿಪಿಐ ಅವರಿಗೆ ದ್ವಿಪ್ರತಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ಮತ್ತು ಅರ್ಜಿ ನಮೂನೆಯನ್ನು ಗೌರವ ಕಾರ್ಯದರ್ಶಿ, ಕರಾವಿಪ, ವಿಜ್ಞಾನ ಭವನ, ಬನಶಂಕರಿ 2ನೇ ಹಂತ, ಬೆಂಗಳೂರು, ದೂರವಾಣಿ 080-26718939 ಅವರಿಂದ ಪಡೆದುಕೊಳ್ಳಬೇಕೆಂದು ಪ್ರಕಟಣೆ ತಿಳಿಸಿದೆ.
ಇಂದು ಧರ್ಮ ಜಾಗೃತಿ ಸಭೆ, ಸನ್ಮಾನ ಕಾರ್ಯಕ್ರಮ
ಹಾವೇರಿ: ತಾಲೂಕಿನ ಕಬ್ಬೂರ ಗ್ರಾಮದ ಮಾಲತೇಶ ಸ್ವಾಮಿ ಶಿಬಾರದ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ವಿವಾಹಗಳು ಫೆ. 24ರಂದು ನಡೆಯಲಿದೆ. 24ರಂದು ಬೆಳಗ್ಗೆ 10.30ಕ್ಕೆ ಧರ್ಮ ಜಾಗೃತಿ ಸಭೆ ಮತ್ತು ಗಣ್ಯರಿಗೆ ಸನ್ಮಾನ ಜರುಗಲಿದೆ. ಮಧ್ಯಾಹ್ನ 12.44ಕ್ಕೆ ಸಾಮೂಹಿಕ ವಿವಾಹಗಳು ನಡೆಯಲಿವೆ. ವಿವಿಧ ಮಠಾಧೀಶರು, ಸಚಿವರು, ಶಾಸಕರು ಮುಂತಾದವರು ಆಗಮಿಸಲಿದ್ದಾರೆ.
ಮಾ. 4ರಂದು ಚುನಾವಣಾ ಸಿಬ್ಬಂದಿಗೆ ತರಬೇತಿ
ಹಾವೇರಿ: ರಾಜ್ಯ ಚುನಾವಣಾ ಆಯೋಗದ ಸೂಚನೆಯಂತೆ ಜಿಲ್ಲಾಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಲಿರುವ ಮತಗಟ್ಟೆ ಸಿಬ್ಬಂದಿ ಹಾಗೂ ವಿದ್ಯುನ್ಮಾನ ಮತಯಂತ್ರಗಳ ಸಿದ್ಧತೆ ಮತ್ತು ಪರಿಶೀಲನೆಗಾಗಿ ಮಾ. 4ರಂದು ಒಂದು ದಿನದ ತರಬೇತಿಯನ್ನು ಆಯಾ ತಾಲೂಕು ಕೇಂದ್ರಗಳಲ್ಲಿ ವ್ಯವಸ್ಥೆಗೊಳಿಸಿದ್ದಾರೆ. ರಾಣಿಬೆನ್ನೂರಿನಲ್ಲಿ ಮಾತ್ರ ಈ ತರಬೇತಿ ಅಂದು ತಾಪಂ ಕಚೇರಿಯಲ್ಲಿ ಜರುಗಲಿದೆ. ಈ ತರಬೇತಿಗೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಒಟ್ಟು 254 ಮತಗಟ್ಟೆಗಳಿಗೆ ಪ್ರತಿ ಮತಗಟ್ಟೆಗೆ 4 ಜನರಂತೆ ನೇಮಕಗೊಂಡ 1016 ಸಿಬ್ಬಂದಿ ಹಾಗೂ ಶೇ.10ರಷ್ಟು ಹೆಚ್ಚುವರಿ ಅಂದರೆ 102 ಸಿಬ್ಬಂದಿ ಸೇರಿ ಒಟ್ಟು 1118 ಮತಗಟ್ಟೆ ಅಧಿಕಾರಿ ಮತ್ತು ಪೊಲಿಂಗ್ ಸಿಬ್ಬಂದಿಗಳು ಹಾಜರಾಗುವರೆಂದು ಜಿಲ್ಲಾಧಿಕಾರಿ ಎಚ್.ಜಿ. ಶ್ರೀವರ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.