ಹಾವೇರಿ

ನಾಳೆ ರಾಜ್ಯ ಸರ್ಕಾರ ಪತನ: ಸುರೇಶಗೌಡ

Published On :

ಬ್ಯಾಡಗಿ: ಅಲ್ಪ ಮತಕ್ಕೆ ಕುಸಿದಿರುವ ಬಿಜೆಪಿ ನೇತೃತ್ವದ ಪ್ರಥಮ ಸರ್ಕಾರ ಫೆ. 25ರಂದು ವಿಸರ್ಜನೆಯಾಗಲಿದೆ ಎಂದು ಮಾಜಿ ಶಾಸಕ ಸುರೇಶಗೌಡ ಭವಿಷ್ಯ ನುಡಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಲು ಸಾಲಾಗಿ ಶಾಸಕರು ರಾಜಿನಾಮೆ ನೀಡುವ ಮೂ ಲಕ ಬಿಜೆಪಿ ತೊರೆದು ಬೇರೆ ಪಕ್ಷಗಳತ್ತ ಮುಖ ಮಾಡಿದ್ದಾರೆ. ಬಿಜೆಪಿ ಮುನ್ನಡೆಸಲು ರಾಜ್ಯದಲ್ಲಿ ನಾಯಕರಿಲ್ಲ. ವಿಚಲಿತರಾದಂತೆ ಕಂಡು ಬಂದ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮಹತ್ವದ ಬೆಳವಣಿಗೆಯೊಂದರಲ್ಲಿ ಸರ್ಕಾರ ವಿಸರ್ಜಿಸಲು ಮುಂದಾಗಿದ್ದಾಗಿ ತಿಳಿಸಿದರು. ಬಿಎಸ್‌ವೈ ನಾಯಕತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಯಿತು. ಮುಂದಿನ ದಿನಗಳಲ್ಲಿ ಅಧಿಕಾರ ಬಿಜೆಪಿಗಿನ್ನು ಕೇವಲ ಕನಸು. ರಾಜ್ಯದಲ್ಲಿ ಹೊಸ ರಾಜಕೀಯ ಮನ್ವಂತರ ಆರಂಭವಾಗಿದ್ದು, ರಾಷ್ಟ್ರೀಯ ಪಕ್ಷಗಳ ಹೈಕಮಾಂಡ್ ಸಂಸ್ಕೃತಿಯಿಂದ ಬೇಸತ್ತ ರಾಜ್ಯದ ಜನತೆ ರಾಜ್ಯದಲ್ಲಿ ಬಲಿಷ್ಠವಾದ ಪ್ರಾದೇಶಿಕ ಪಕ್ಷವೊಂದರ ಕಲ್ಪನೆಯಲ್ಲಿದ್ದಾರೆ. ಹೀಗಾಗಿ ಬರುವ ದಿನಗಳಲ್ಲಿ ಕೆಜೆಪಿ ಬೆಂಬಲಿಸಲಿದ್ದಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.