ಹಾವೇರಿ

ಬಿಜೆಪಿ ಸರ್ಕಾರ ಭರವಸೆ ಈಡೇರಿಸಿದೆ

Published On :

ಗಜೇಂದ್ರಗಡ: ಸರ್ಕಾರದ ಮೂಲ ಸೌಲಭ್ಯಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವುದರ ಜತೆಗೆ ಸರ್ವ ಸಮುದಾಯಗಳ ಅಭಿವೃದ್ಧಿಯೇ ನಮ್ಮ ಸರ್ಕಾರದ ಮುಖ್ಯ ಧ್ಯೇಯ, ಈ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ರಾಜ್ಯ ಜನತೆಗೆ ನೀಡಿದ ಭರವಸೆಗೆ ತಕ್ಕಂತೆ ನಡೆದುಕೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಕಳಕಪ್ಪ ಬಂಡಿ ಹೇಳಿದರು.
ಅವರು ಗುರುವಾರ ಪಟ್ಟಣದ ತಮ್ಮ ನಿವಾಸದಲ್ಲಿ ಅನ್ಯ ಪಕ್ಷ ತೊರೆದ ಶರಣಪ್ಪ ರೇವಡಿ ಹಾಗೂ ಅವರ ಬೆಂಬಲಿಗರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡು ಮಾತನಾಡಿದರು. ತಾಲೂಕಿನ ಪಟ್ಟಣ ಹಾಗೂ ಗ್ರಾಮಗಳಲ್ಲಿ ಹಿಂದೆಂದು ಕಂಡರಿಯದ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಾಗಾಲೋಟದಲ್ಲಿ ಸಾಗಿವೆ. ಜತೆಗೆ ತಾಲೂಕಿನ ಕೃಷಿ ಕ್ಷೇತ್ರವನ್ನು ಶ್ರೀಮಂತಗೊಳಿಸುವ ನಿಟ್ಟಿನಲ್ಲಿ ಅಗತ್ಯವಿರುವ ಯೋಜನೆಗಳು ಪ್ರಗತಿಯಲ್ಲಿವೆ. ಪಟ್ಟಣ ಸೇರಿ ಗ್ರಾಮೀಣ ರಸ್ತೆ ಸಾರಿಗೆ, ಶಿಕ್ಷಣ ವ್ಯವಸ್ಥೆ ಕಲ್ಪಿಸುವ ಮೂಲಕ ಜನರ ಸಂಕಷ್ಟಗಳಿಗೆ ಸ್ಪಂದಿಸಿದ ತೃಪ್ತಿ ನನಗಿದೆ. ಇಂತಹ ಹತ್ತು ಹಲವು ಅಭಿವೃದ್ಧಿ ಕಾರ್ಯ ಮೆಚ್ಚಿ ಮತಕ್ಷೇತ್ರದ ಜನತೆ ಹರ್ಷಿತರಾಗಿ ವಿವಿಧ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವುದು ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿಯೇ ಮಾದರಿಯ ಮತಕ್ಷೇತ್ರವನ್ನಾಗಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.
ಶರಣಪ್ಪ ರೇವಡಿ, ಮುತ್ತಯ್ಯ ಸಾಲಿಮಠ, ಲಿಂಗಪ್ಪ ರೇವಡಿ, ರೇವಣಪ್ಪ ಮಾಳಗಿ, ಚನ್ನಪ್ಪ ಮ್ಯಾಗೇರಿ, ಮಹೇಶ ಗಡೇದವರ, ಕಳಕಪ್ಪ ಹಡಪದ, ಬುಡ್ಡಿ ಶಿಂಗ್ರಿ, ಮಂಜುನಾಥ ಯರಗೇರಿ, ಶಿವಾಜಿ ಹಾಳಕೇರಿ, ಚನ್ನಪ್ಪ ರೇವಡಿ, ಅಯ್ಯನಗೌಡ ಪಾಟೀಲ, ಸಿದ್ದಪ್ಪ ರೇವಡಿ, ಅಂಬರೀಷ್ ಬೂದಿಹಾಳ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.