ಹಾವೇರಿ

ಬಿಜೆಪಿಗೆ ಮತದಾರರ ಮಣೆ: ಕೇಲಗಾರ

Published On :

ರಾಣಿಬೆನ್ನೂರು: ಕಳೆದ 5 ವರ್ಷಗಳಲ್ಲಿ ಬಿಜೆಪಿ ಮಾಡಿರುವ ನಗರಾಭಿವೃದ್ಧಿ ಸಾಧನೆಗಳನ್ನು ಮೆಚ್ಚಿಕೊಂಡಿರುವ ಮತದಾರ ಮಾ. 7ರಂದು ನಡೆಯಲಿರುವ ನಗರಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಮತ್ತೆ ಅಧಿಕಾರ ನೀಡಲು ಉತ್ಸುಕನಾಗಿದ್ದಾನೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಡಾ೤ ಬಸವರಾಜ ಕೇಲಗಾರ ಹೇಳಿದರು. ತಾಲೂಕು ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಚಿಹ್ನೆಯಿಂದ ಗೆದ್ದು ಅಧಿಕಾರ ಅನುಭವಿಸಿದವರು ಈಗ ಬೇರೆ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಅದರಿಂದ ಬಿಜೆಪಿ ವರ್ಚಸ್ಸಿಗೆ ಕೊಂಚ ಧಕ್ಕೆಯಾಗಿದ್ದರೂ ಪ್ರಸಕ್ತ ನಗರಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ಶತಸ್ಸಿದ್ಧ ಎಂದು ನುಡಿದರು. ಪಕ್ಷದಲ್ಲಿ ಗುರುತಿಸಿಕೊಂಡ ಎಲ್ಲ ಸದಸ್ಯರನ್ನೂ ಹಾಗೂ ಟಿಕೆಟ್ ಆಕಾಂಕ್ಷಿಗಳನ್ನು ಸಮಾಧಾನ ಪಡಿಸಲು ಸಾಧ್ಯವಾಗದಿದ್ದರೂ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿರುವ ತೃಪ್ತಿ ಇದೆ. 31 ವಾರ್ಡ್‌ಗಳಲ್ಲಿ ಕನಿಷ್ಠ 27ರಲ್ಲಿ ಬಿಜೆಪಿ ಗೆಲ್ಲಲಿದೆ ಎಂದರು. ರಾಜು ಸುರಳಿಕೇರಿಮಠ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಓಲೇಕಾರ, ಯುವ ಮೋರ್ಚಾ ಅಧ್ಯಕ್ಷ ಅರುಣಕುಮಾರ, ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಜಂಬಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಈರಣ್ಣ ಅಂಗಡಿ ಹಾಗೂ ಬಿಜೆಪಿ ಅಭ್ಯರ್ಥಿಗಳು ಉಪಸ್ಧಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.