ಹಾವೇರಿ

ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತೆ ಕಾರ್ಯಾಗಾರ

Published On :

ಹಾವೇರಿ: ಕರ್ನಾಟಕ ಬಾಲವಿಕಾಸ ಅಕಾಡೆಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆ ಕುರಿತು ಒಂದು ದಿನದ ಕಾರ್ಯಾಗಾರ ಸವಣೂರಿನ ಲಲಾಟೇಶ್ವರ ಕಲ್ಯಾಣ ಮಂಟಪದಲ್ಲಿ ಜರುಗಿತು.ಹೊಸಳ್ಳಿ ಸರ್ಕಾರಿ ಪ್ರೌಢಶಾಲೆ ಮುಖ್ಯಾಧ್ಯಾಪಕ ವೀರಭದ್ರಪ್ಪ ಕಾರ್ಯಾಗಾರ ಉದ್ಘಾಟಿಸಿ, ಉನ್ನತ ಸಾಧನೆಯೊಂದಿಗೆ ವಿದ್ಯಾರ್ಥಿಗಳು ಬರೆಯುವ ಕೌಶಲ ಅಳವಡಿಸಿಕೊಳ್ಳಬೇಕು. ಈ ಕುರಿತ ಮಾದರಿಗಳು ಶಾಲೆಗಳಲ್ಲಿ ಲಭ್ಯವಿದ್ದು, ಅವುಗಳನ್ನು ನೋಡಿ ಕಲಿತುಕೊಳ್ಳಿ. ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಎಂದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭಾರತಿ ಬಣಕಾರ ಅಧ್ಯಕ್ಷತೆ ವಹಿಸಿದ್ದರು.  ಅತಿಥಿಗಳಾಗಿ ಗುತ್ತಲ, ಎಸ್.ಟಿ.ಲಮಾಣಿ, ಅಮಾತಿ ಪಾಲ್ಗೊಂಡಿದ್ದರು. ಸಮಾಜ ವಿಜ್ಞಾನ ಕುರಿತು ಬ್ಯಾಡಗಿ ತಾಲೂಕು ಬಿಸಲಹಳ್ಳಿ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಎಸ್.ಟಿ. ಲಮಾಣಿ ಮಾಹಿತಿ ನೀಡಿದರು. ಪರೀಕ್ಷೆ ಒಂದು ಕಲೆ. ಸಮಯವನ್ನು ಸದ್ಬಳಕೆ ಮಾಡಿಕೊಂಡು ಅಂಕಗಳ ಆಧಾರದಲ್ಲಿ ನಿಖರ ಉತ್ತರ ಮಾತ್ರ ಬರೆಯಬೇಕು. ಒಂದು ಪ್ರಶ್ನೆಗೆ ಸಂಪೂರ್ಣ ಉತ್ತರ ಬರೆದು ಮುಂದಿನ ಪ್ರಶ್ನೆಗೆ ಸಾಗಬೇಕು. ಪರೀಕ್ಷೆಯಲ್ಲಿ ಶುದ್ಧ ಬರವಣಿಗೆ ಮುಖ್ಯ ಎಂದು ಮಾಹಿತಿ ನೀಡಿದರು. ಮಂತ್ರೋಡಿ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ಸಿ.ವಿ. ಗುತ್ತಲ ಗಣಿತ ಪ್ರಶ್ನೆಪತ್ರಿಕೆ ಬಿಡಿಸುವ ವಿಧಾನ ಕಲಿಸಿಕೊಟ್ಟರು. ಸವಣೂರು ಬಿಇಎಸ್ ಪ್ರೌಢಶಾಲೆ ಶಿಕ್ಷಕ ಬಿ.ಎಂ. ಅಮಾತಿ ಇಂಗ್ಲಿಷ್ ಕುರಿತು ತಿಳಿಸಿದರು. ಕಾರ್ಯಾಗಾರದಲ್ಲಿ ತಾಲೂಕಿನ ಎಲ್ಲ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು, ಇಲಾಖೆಯ ಮೇಲ್ವಿಚಾರಕಿಯರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.