ಹಾವೇರಿ

ವರದಕ್ಷಿಣೆ ಕಿರುಕುಳ ಶಿಕ್ಷಕಿ ಆತ್ಮಹತ್ಯೆ

Published On :

ಹಾವೇರಿ: ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಕರ್ಜಗಿ-ಹಾವೇರಿ ರೇಲ್ವೆ ಮಾರ್ಗ ಮಧ್ಯೆ ಸಂಭವಿಸಿದೆ. ಮೃತಳನ್ನು ಶೈಲಜಾ ಗುರುಶಾಂತಯ್ಯ ಹಿರೇಮಠ(33) ಎಂದು ಗುರುತಿಸಲಾಗಿದೆ. ಶೈಲಜಾ ರಾಮಾಪುರ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈಕೆಯನ್ನು ಕೊಣನ ತಂಬಗಿಯ ಗುರುಶಾಂತಯ್ಯ ಹಿರೇಮಠ ಅವರೊಂದಿಗೆ ಕಳೆದ ಐದುವರೆ ವರ್ಷಗಳ ಹಿಂದೆ ವಿವಾಹ ಮಾಡಿಕೊಡಲಾಗಿತ್ತು. ಮದುವೆ ಸಂದರ್ಭ 40 ಗ್ರಾಂ ಚಿನ್ನ, ರು. 3 ಲಕ್ಷ ನಗದು ಹಾಗೂ ಒಂದು ನಿವೇಶನ ವರದಕ್ಷಿಣೆ ರೂಪದಲ್ಲಿ ನೀಡಲಾಗಿತ್ತು. ವಿವಾಹ ನಂತರವೂ ಪತಿ ಗುರುಶಾಂತಯ್ಯ ದೈಹಿಕ, ಮಾನಸಿಕ ಕಿರುಕುಳ ನೀಡುತ್ತಿದ್ದನೆಂದು ತಿಳಿದು ಬಂದಿದೆ. ಇದರಿಂದ ಬೇಸತ್ತ ಶೈಲಜಾ ರೈಲು ಹಳಿಗೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತಂತೆ ಶೈಲಜಾಳ ಸಹೋದರ ಶಂಕ್ರಯ್ಯ, ಸಹೋದರಿ ಅಕ್ಕ ಮಹಾದೇವಿ ದೂರು ಸಲ್ಲಿಸಿದ್ದು, ಹುಬ್ಬಳ್ಳಿಯ ರೇಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.