ಹಾವೇರಿ: ಚುನಾವಣಾ ಪೂರ್ವಸಿದ್ಧತೆ ಆರಂಭ
ಹಾವೇರಿ: ಬರುವ ಸಾರ್ವತ್ರಿಕ ಚುನಾವಣೆ ಪೂರ್ವಸಿದ್ಧತೆಯ ಮೊದಲ ಹಂತದ ಕಾರ್ಯಗಳು ಜಿಲ್ಲೆಯಲ್ಲಿ ಆರಂಭಗೊಂಡಿವೆ. ಬೆಂಗಳೂರಿನ ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ನಾಲ್ವರು ವಿದ್ಯುನ್ಮಾನ ಮತಯಂತ್ರಗಳ ತಾಂತ್ರಿಕ ಪರಿಣತಿ ಹೊಂದಿರುವ ಎಂಜಿನಿಯರುಗಳ ತಂಡ ಜಿಲ್ಲೆಯ ವಿವಿಧ ರಾಜಕೀಯ ಪಕ್ಷಗಳ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಮ್ಮುಖದಲ್ಲಿ ಮತಯಂತ್ರಗಳ ಭೌತಿಕ ಪರಿಶೀಲನೆ ಆರಂಭಿಸಿದರು. ವಿದ್ಯುನ್ಮಾನ ಮತಯಂತ್ರಗಳ ಜಿಲ್ಲಾ ಮೇಲ್ವಿಚಾರಣಾಧಿಕಾರಿ ಆಗಿರುವ ಅಪರ ಜಿಲ್ಲಾಧಿಕಾರಿ ಜಿ. ಜಗದೀಶ ಮತಯಂತ್ರ ಇರಿಸಿದ್ದ ಸ್ಟ್ರಾಂಗ್ ರೂಮ್ನ್ನು ರಾಜಕೀಯ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ತೆರೆದು, ಮತಯಂತ್ರಗಳ ಭೌತಿಕ ಪರಿಶೀಲನೆಗೆ ಚಾಲನೆ ನೀಡಿದರು. ಜಿಲ್ಲೆಯಲ್ಲಿ ಬಳಕೆಗಾಗಿ ಸುಮಾರು 1,800 ಮತಯಂತ್ರ ಸಂಗ್ರಹವಿದ್ದು, 1,690 ಸೆಂಟ್ರಲ್ ಯುನಿಟ್, 2,100 ಬ್ಯಾಲಟ್ ಯುನಿಟ್ ಸೇರಿವೆ. ದಿನವೊಂದಕ್ಕೆ ನಾಲ್ಕು ತಾಂತ್ರಿಕ ಅಧಿಕಾರಿಗಳಿಂದ 400 ಮತಯಂತ್ರ ಪರಿಶೀಲನೆ ನಡೆಯಲಿದ್ದು, ಈ ಕಾರ್ಯ ಜ. 28ರ ವರೆಗೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಜಿ. ಜಗದೀಶ ತಿಳಿಸಿದರು. ಈ ಸಂದರ್ಭ ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಬಿಎಸ್ಪಿ ಹಾಗೂ ಸಿಪಿಐ(ಎಂ) ಪಕ್ಷಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾಧಿಕಾರಿ ಕಾರ್ಯಾಲಯದ ಚುನಾವಣಾ ವಿಭಾಗದ ಶಿರಸ್ತೇದಾರ ಎಚ್.ಜಿ. ನಾಯಕ, ಬಿಇಎಲ್ ಸಂಸ್ಥೆಯ ನಾಲ್ವರು ತಾಂತ್ರಿಕ ಅಧಿಕಾರಿ ಸೇರಿದಂತೆ ಮತ್ತಿತರ ಚುನಾವಣಾ ಸಿಬ್ಬಂದಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

