25ರಂದು ಗುರುತಿನ ಚೀಟಿ ವಿತರಣೆ
ಹಾವೇರಿ: ಭಾರತ ಚುನಾವಣಾ ಆಯೋಗದ ಆದೇಶದಂತೆ ಜ. 16ರಂದು ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ಆಯಾ ಮತಗಟ್ಟೆಗಳಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಚ್.ಜಿ. ಶ್ರೀವರ ತಿಳಿಸಿದ್ದಾರೆ. ಜ. 1ನ್ನು ಮತದಾರರ ಪಟ್ಟಿಯ ಅರ್ಹತಾ ದಿನಾಂಕವೆಂದು ಆಯೋಗ ಸೂಚಿಸಿರುವ ಹಿನ್ನೆಲೆಯಲ್ಲಿ, ಈ ದಿನಾಂಕಕ್ಕೆ ಮತದಾರರ ಪಟ್ಟಿ ಅಂತಿಮಗೊಳಿಸಲಾಗಿದೆ. ಜ. 16ರಂದು ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಆಯಾ ಮತಗಟ್ಟೆಗಳಲ್ಲಿನ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಪ್ರಸಕ್ತವೂ ರಾಷ್ಟ್ರೀಯ ಮತದಾರರ ದಿನಾಚರಣೆ ದಿನದಂದು ಆಯಾ ಮತಗಟ್ಟೆಗಳಲ್ಲಿ, ಮತದಾರರ ಭಾವಚಿತ್ರಯುಳ್ಳ ಗುರುತಿನ ಚೀಟಿ ವಿತರಿಸಲಾಗುವುದು. ಜ. 25ರಂದು ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ನೂತನವಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾದ ಯುವ ಮತದಾರರಿಗೆ ಎಪಿಕ್ ಕಾರ್ಡ್ ವಿತರಿಸುವ ಮೂಲಕ ಆಯಾ ಮತಗಟ್ಟೆಗಳಲ್ಲಿ ಆಚರಿಸಲಾಗುವುದು. ಈ ಕಾರ್ಯಕ್ರಮವನ್ನು ಮತಗಟ್ಟೆ ಮಟ್ಟದ ಅಧಿಕಾರಿ, ಗ್ರಾಮ ಲೆಕ್ಕಿಗರು ಮತ್ತು ಗ್ರಾಪಂ ಕಾರ್ಯದರ್ಶಿಗಳು ಏರ್ಪಡಿಸುವರು.ಮತದಾರರ ದಿನಾಚರಣೆ ಅಂಗವಾಗಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಹಾವೇರಿ ಜಿಲ್ಲಾ ಕೇಂದ್ರ ಮತ್ತು ತಾಲೂಕು ಕೇಂದ್ರ ಸ್ಥಾನಗಳಲ್ಲಿ ತಹಸೀಲ್ದಾರರು ಏರ್ಪಡಿಸುವ ಕಾರ್ಯಕ್ರಮದಲ್ಲಿ ಹೊಸದಾಗಿ ಪಟ್ಟಿಗೆ ಸೇರ್ಪಡೆಗೊಂಡ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

