ಜನಪ್ರತಿನಿಧಿಗಳು ಜನಪರ ಕಾರ್ಯ ಮಾಡಿ
ಕನ್ನಡಪ್ರಭ ವಾರ್ತೆ, ಹಿರೇಕೆರೂರು ಜ.24
ನಾವು ಮಾಡಿದ ಕೆಲಸಗಳು ನಮ್ಮನ್ನು ಗುರುತಿಸುವಂತಾಗಬೇಕು. ಜನಪ್ರತಿನಿದಿಗಳು ತಮ್ಮ ಕರ್ತವ್ಯ ನಿಷ್ಠೆಯಿಂದ ನಿಭಾಯಿಸಿ, ಜನತೆ ಮೆಚ್ಚುವಂತಹ ಜನಪರ ಕೆಲಸಗಳನ್ನು ಮಾಡಬೇಕೆಂದು ಶಾಸಕ ಬಿ.ಸಿ. ಪಾಟೀಲ ತಿಳಿಸಿದರು.
ತಾಲೂಕಿನ ಅಬಲೂರು ಗ್ರಾಮದಲ್ಲಿ 'ನಮ್ಮ ಗ್ರಾಮ ನಮ್ಮ ರಸ್ತೆ' ಅಡಿಯಲ್ಲಿ ರು. 115.06 ಲಕ್ಷ ವೆಚ್ಚದಲ್ಲಿ 3.40 ಕಿ.ಮೀ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ಅರಳಿಕಟ್ಟಿ ಗ್ರಾಮದಲ್ಲಿ 2010-11ನೇ ಸಾಲಿನ ನರೇಗಾ ಅಡಿಯಲ್ಲಿ ನಿರ್ಮಾಣಗೊಂಡ ಭಾರತ್ ನಿರ್ಮಾಣ ರಾಜೀವ್ ಗಾಂಧಿ ಸೇವಾಕೇಂದ್ರ ಕಟ್ಟಡದ ಉದ್ಘಾಟನೆ, 2012-13ನೇ ಸಾಲಿನ ತಾಂಡಾ ಅಭಿವೃದ್ಧಿ ನಿಗಮದಿಂದ ಭಾವಾಪುರ ಗ್ರಾಮದಲ್ಲಿ ಕಾಂಕ್ರಿಟ್ ರಸ್ತೆ ಕಾಮಗಾರಿ ಶಂಕುಸ್ಥಾಪನೆ ಹಾಗೂ ಜಿಪಂ ಅಭಿವೃದ್ಧಿ ಅನುದಾನದಲ್ಲಿ ರಂಗಮಂದಿರ ಕಟ್ಟಡ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
ಆರ್ಥಿಕ ಸಬಲರಾಗಿ: ತಾಲೂಕಿನ ಎಲ್ಲ ಗ್ರಾಮಗಳನ್ನು ಒಂದೇ ಸಾರಿ ಅಭಿವೃದ್ಧಿಪಡಿಸಲು ಸಾಧ್ಯವಿಲ್ಲ. ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುವುದು. ಕೇಂದ್ರ ಸರ್ಕಾರ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿಗೊಳಿಸದೆ ಹೋಗಿದ್ದರೆ ಎಲ್ಲ ಗ್ರಾಪಂಗಳಲ್ಲಿ ವಿದ್ಯುತ್ ಬಿಲ್ ಸಹ ಪಾವತಿಸಲು ಸಾಧ್ಯವಾಗುತ್ತಿರಲಿಲ್ಲ. ಮಹಿಳೆಯರು ಆರ್ಥಿಕ ಸಬಲರಾಗಬೇಕು. ರಾಜಕೀಯ ಕ್ಷೇತ್ರದಲ್ಲಿ ಕಾನೂನಿನ ಅರಿವು ತಿಳಿದು ಸಬಲತೆ ಹೊಂದಬೇಕೆಂದರು.
ಖಾತ್ರಿ ಕೆಲಸ ಸಫಲವಾಗಲಿ: ಜಿಪಂ ಅಭಿವೃದ್ಧಿ ಅನುದಾನದಲ್ಲಿ ರಂಗಮಂದಿರ ಕಟ್ಟಡದ ಕಾಮಗಾರಿಗೆ ಚಾಲನೆ ನೀಡಿದ ಜಿಪಂ ಸದಸ್ಯೆ ಬಸಮ್ಮ ಅಬಲೂರು ಮಾತನಾಡಿ, ಎಲ್ಲ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳಿಗೆ ಸರ್ವಾಧಿಕಾರ ನೀಡಲಾಗಿದೆ. ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ನರೇಗಾ ಯೋಜನೆ ಬಳಸಿಕೊಂಡು ಕ್ರೀಯಾ ಯೋಜನೆ ರೂಪಿಸಿ ಉತ್ತಮ ಅಭಿವೃದ್ಧಿ ಕೆಲಸಗಳನ್ನು ಮಾಡಿಸಿಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಪಂ ಉಪಾಧ್ಯಕ್ಷೆ ರೂಪಾ ಆಡೂರ, ಸದಸ್ಯರಾದ ನಾಗರತ್ನ ಕಂಕನವರ, ಆರ್.ಎನ್. ಗಂಗೋಳ, ಜಿಪಂ ಮಾಜಿ ಸದಸ್ಯ ಬಿ.ಎನ್. ಬಣಕಾರ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷೆ ಲಲಿತಾ ಹನುಮಾಪುರ, ಉಪಾಧ್ಯಕ್ಷ ಕಾಂತೇಶ ಹದಗಲ್, ಗ್ರಾಪಂ ಸದಸ್ಯರು, ತಾಪಂ ಅಧ್ಯಕ್ಷೆ ಗದಿಗೆವ್ವ ಬಿದರಿ, ತಾಪಂ ಕಾರ್ಯನಿರ್ವಹಣಾಧಿಕಾರಿ ಎಂ.ಎನ್. ಮಾಳಗೇರ, ಮುಖಂಡರಾದ ದೊಡ್ಡಗೌಡ ಪಾಟೀಲ, ಎಪಿಎಂಸಿ ಸದಸ್ಯ ಪರಮೇಶಪ್ಪ ಗವಿಯಪ್ಪನವರ ಹಾಗೂ ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು.
ಗ್ರಾಪಂ ಸದಸ್ಯ ಪುಟ್ಟೇಶ ಗೊರವರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಿ.ಎಂ. ಬಸಲಿಹಳ್ಳಿ, ಗ್ರಾಪಂ ಅಭಿವೃದ್ಧಿ ಅಧಿಕಾರಿ ನೀಲಪ್ಪ ಕಜ್ಜರಿ ನಿರ್ವಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

