ಹಾವೇರಿ

ಯುವಕರಿಂದಲೇ ದೇಶಕ್ಕೆ ಭವಿಷ್ಯ: ಸ್ವಾಮೀಜಿ

Published On :

ಹಿರೇಕೆರೂರು: ಯುವ ಜನಾಂಗದ ಮೇಲೆ ದೇಶದ ಭವಿಷ್ಯ ನಿಂತಿದೆ. ಶಕ್ತಿಯೇ ಜೀವನ, ದೌರ್ಬಲ್ಯವೇ ಮರಣ ಎಂಬುದನ್ನು ವಿದ್ಯಾರ್ಥಿಗಳು ಅರಿತು ಸ್ವಾಮಿ ವಿವೇಕಾನಂದರ ಹಾಗೂ ನೇತಾಜಿ ಅವರ ತತ್ವಾದರ್ಶ ಅಳವಡಿಸಿಕೊಂಡು, ಅವರ ಸ್ಫೂರ್ತಿಯ ನುಡಿಗಳ ಆಶಯದಂತೆ ಬದುಕಬೇಕು ಎಂದು ರಾಣಿಬೆನ್ನೂರು ರಾಮಕೃಷ್ಣಾಶ್ರಮದ ಪ್ರಕಾಶಾನಂದ ಸ್ವಾಮೀಜಿ ತಿಳಿಸಿದರು.
ಇಲ್ಲಿನ ತರಳಬಾಳು ಸಾಂಸ್ಕೃತಿಕ ಭವನದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಬುಧವಾರ ನಡೆದ ಸ್ವಾಮಿ ವಿವೇಕಾನಂದರ ಹಾಗೂ ನೇತಾಜಿ ಸುಭಾಶ್ಚಂದ್ರ ಬೋಸರ ಜಯಂತ್ಯುತ್ಸವ ಮತ್ತು ತಾಲೂಕು ಯುವ ಜಾಗೃತಿ ಸಮ್ಮೇಳನದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸುವುದೇ ದೊಡ್ಡ ಸಾಧನೆ ಎಂದುಕೊಂಡಿದ್ದಾರೆ. ಸಮಯ ಪ್ರಜ್ಞೆ, ದೇಶಪ್ರೇಮ, ಹಿರಿಯರ ಮೇಲೆ ಗೌರವ ಹಾಗೂ ಸಮಾಜ ಸೇವೆಯಂತಹ ಗುಣಗಳನ್ನು ಬೆಳೆಸಿಕೊಳ್ಳಬೇಕಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಎಬಿವಿಪಿ ನಗರ ಘಟಕ ಅಧ್ಯಕ್ಷ ಆರ್.ಬಿ. ಹೊಸಗೌಡ್ರ, ಜಿಲ್ಲಾ ಶಾರೀರಿಕ ಪ್ರಮುಖ ಗುರುರಾಜ ಕುಲಕರ್ಣಿ, ದೇವರಾಜ ಹಂಚಿನಮನಿ ಮಾತನಾಡಿದರು. ನಗರ ಕಾರ್ಯದರ್ಶಿ ಮಲ್ಲಿಕಾರ್ಜುನ ಕಲ್ಯಾಣಿ ಹಾಗೂ ವಿದ್ಯಾರ್ಥಿಗಳು, ಎಬಿವಿಪಿ ಕಾರ್ಯಕರ್ತರು ಉಪಸ್ಥಿತರಿದ್ದರು. ಪ್ರವೀಣ ಕುರುವತ್ತೇರ ಸ್ವಾಗತಿಸಿ. ಅಜಯ ಕಲ್ಯಾಣಿ, ವಿಜಯ ಮುದಿಗೌಡ್ರ ನಿರ್ವಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.