ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಳ: ಕಳವಳ
ಹಾವೇರಿ: ಪ್ರಾಚೀನ ಕಾಲದಿಂದ ಮನುಷ್ಯ ಮನುಷ್ಯನನ್ನು ನಡೆಸಿಕೊಂಡ ರೀತಿಯೇ ವಿಚಿತ್ರವಾಗಿದೆ. ಆದರೆ, ಪ್ರಸ್ತುತ ನಾಗರಿಕ ಸಮಾಜದಲ್ಲಿ ಎಲ್ಲರೂ ತಿಳಿವಳಿಕೆಯುಳ್ಳವರೇ ಆಗಿದ್ದರೂ ನಮ್ಮೊಂದಿಗೆ ವಾಸಿಸುವ ಇತರರ ಪ್ರಾಣ, ಮಾನಗಳಿಗೆ ಧಕ್ಕೆ ಬಾರದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಧಾರವಾಡ ಕವಿವಿ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಸಿ.ಎಸ್. ಪಾಟೀಲ ನುಡಿದರು.
ಅವರು ಇಲ್ಲಿನ ಹುಕ್ಕೇರಿಮಠದ ಶಿವಲಿಂಗೇಶ್ವರ ಮಹಿಳಾ ಕಾಲೇಜಿನಲ್ಲಿ ವಿಜಾಪುರ ಮಹಿಳಾ ವಿವಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಮಾನವ ಹಕ್ಕುಗಳು-ಸಿದ್ಧಾಂತ ಮತ್ತು ಆಚರಣೆ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ವಿಶ್ವದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿರುವುದನ್ನು ಅರಿತು ವಿಶ್ವಸಂಸ್ಥೆ ಮಾನವ ಹಕ್ಕುಗಳನ್ನು ಜಾರಿಗೆ ತಂದಿದೆ. ಆದರೆ, ಇದು ಪೂರ್ಣಪ್ರಮಾಣದಲ್ಲಿ ಜಾರಿಯಾಗುತ್ತಿಲ್ಲ. ಜಗತ್ತಿನಾದ್ಯಂತ ಮಾನವ ಹಕ್ಕುಗಳ ರಕ್ಷಣೆಗಾಗಿ ಹತ್ತು ಹಲವು ಹೋರಾಟಗಳು ನಡೆಯುತ್ತಿವೆ. ಆದರೂ ಸಹ ಕೆಲವು ದೇಶಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು. ನ್ಯಾಯವಾದಿ ರೆಹನಾ ಚನ್ನಪಟ್ಟಣ ಮಾತನಾಡಿ, ದೈಹಿಕ, ಮಾನಸಿಕ, ಆರ್ಥಿಕ ಹಾಗೂ ಭಾವನಾತ್ಮಕ ಹಿಂಸೆಯೂ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಕೌಟುಂಬಿಕ ರಕ್ಷಣಾ ಕಾಯ್ದೆ ಜಾರಿಯಲ್ಲಿದ್ದರೂ ಮಹಿಳೆಯರಿಗೆ ಸುರಕ್ಷತೆ ಇಲ್ಲವಾಗಿದೆ. ಮಹಿಳೆಯರು ತಮ್ಮನ್ನೇ ತಾವು ರಕ್ಷಣೆ ಮಾಡಿಕೊಳ್ಳಬೇಕಿದೆ ಎಂದರು.
ಹುಕ್ಕೇರಿಮಠದ ಸದಾಶಿವ ಶ್ರೀಸಾನ್ನಿಧ್ಯ ವಹಿಸಿದ್ದರು. ಪಿ.ಡಿ. ಶಿರೂರ ಅಧ್ಯಕ್ಷತೆ ವಹಿಸಿದ್ದರು. ಭಾರತಿ ನೇಕಾರ ಪ್ರಾಸ್ತಾವಿಕ ಮಾತನಾಡಿದರು. ಡಾ. ಕಮಲಾಕ್ಷಿ ತಡಸದ, ಡಾ. ವಿಜಯಕುಮಾರ ಬೆಟಗಾರ, ಎಸ್.ಎಸ್. ಹಿರೇಮಠ, ಎಸ್.ಎಸ್. ಮುಷ್ಠಿ, ವೀರಣ್ಣ ಅಂಗಡಿ, ಸಿ.ಎಂ. ಪಟ್ಟಣಶೆಟ್ಟಿ, ಬಿ. ಬಸವರಾಜಪ್ಪ, ಟಿ.ಎಂ. ಗೀತಾ ಉಪಸ್ಥಿತರಿದ್ದರು. ಡಾ. ಸವಿತಾ ಹಿರೇಮಠ ಸ್ವಾಗತಿಸಿ, ಪುಷ್ಪಾ ಶೆಲವಡಿಮಠ ನಿರ್ವಹಿಸಿದರು. ಹಿರೇತನದ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

