ಹಾವೇರಿ

ಬಸ್‌ಗಾಗಿ ದಿಢೀರ್ ರಸ್ತೆ ತಡೆ

Published On :

ಬ್ಯಾಡಗಿ: ಬಸ್ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪಟ್ಟಣದ ಹೌಸಿಂಗ್ ಬೋರ್ಡ್ ಬಳಿ ಶುಕ್ರವಾರ ಸಂಜೆ ಹಠಾತ್ ರಸ್ತೆ ತಡೆ ನಡೆಸಿ, ತಾಸಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು.
ಹೆಚ್ಚುವರಿ ಬಸ್‌ಗಾಗಿ ವಿದ್ಯಾರ್ಥಿಗಳು ಬುಧವಾರವಷ್ಟೇ ಪ್ರತಿಭಟನೆ ನಡೆಸಿದ್ದರೂ ಎಚ್ಚೆತ್ತುಕೊಳ್ಳದ ಸಾರಿಗೆ ಇಲಾಖೆ ವೈಖರಿ ಖಂಡಿಸಿ ಮತ್ತೆ ರಸ್ತೆಗಿಳಿದರು. ಸಾರಿಗೆ ಘಟಕ ವ್ಯವಸ್ಥಾಪಕರ ವಿರುದ್ಧ ಘೋಷಣೆ ಕೂಗಿದರು. ಹೆಚ್ಚುವರಿ ಬಸ್ ಬಿಡುವ ವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಬಿಗಿಪಟ್ಟು ಹಿಡಿದು ರಸ್ತೆಯ ಮಧ್ಯೆ ಕುಳಿತಿದ್ದರಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು. ಬನ್ನಿಹಟ್ಟಿ, ಬಿಸಲಹಳ್ಳಿ, ಆಣೂರು, ಕೊಲ್ಲಾಪುರ ಮಾರ್ಗದಲ್ಲಿ ಜನರು ಪ್ರಯಾಣಿಸಲು ಸಾಕಷ್ಟು ತೊಂದರೆಯಿದೆ. ವಿದ್ಯಾರ್ಥಿಗಳು ಖಾಸಗಿ ವಾಹನಗಳನ್ನು ನೆಚ್ಚುವಂತಾಗಿದೆ. ದುಬಾರಿ ಹಣ ತೆತ್ತು ಕೊಂಡಿರುವ ಪಾಸ್ ಇದ್ದೂ ಉಪಯೋಗ ಇಲ್ಲದಂತಾಗಿದೆ ಎಂದು ಆರೋಪಿಸಿದರು. ನಾಲ್ಕು ಬಾರಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರೂ ಬಸ್ ಸೌಕರ್ಯ ಕಲ್ಪಿಸಿಲ್ಲ. ಒಂದೇ ಬಸ್‌ನಲ್ಲಿ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಯಾಣಿಸುವಂತಾಗಿದೆ. ಆದರೂ ಘಟಕ ವ್ಯವಸ್ಥಾಪಕರು ಕ್ಯಾರೇ ಎನ್ನುತ್ತಿಲ್ಲ ಎಂದು ಆರೋಪಿಸಿದರು. ಪ್ರತಿಭಟನೆ ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸ್ ಸಿಬ್ಬಂದಿ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಪರಿಸ್ಥಿತಿ ವಿವರಿಸಿ, ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳ ಮನವೊಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.