ಸಾಹಿತ್ಯದಿಂದ ಮನುಷ್ಯ ಸಮಾಜಮುಖಿ
ಸವಣೂರು: ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಮನುಷ್ಯನನ್ನು ಸಮಾಜಮುಖಿಯಾಗಿಸುತ್ತದೆ. ಜೀವನೋತ್ಸಾಹದೊಂದಿಗೆ ಹೊಸ ಚೈತನ್ಯವನ್ನು ಬದುಕಿಗೆ ನೀಡುತ್ತದೆ ಎಂದು ತಾಪಂ ಅಧ್ಯಕ್ಷ ರುದ್ರಗೌಡ ಪಾಟೀಲ ತಿಳಿಸಿದರು. ಇಲ್ಲಿನ ತಾಪಂ ಸಭಾಂಗಣದಲ್ಲಿ ಇತ್ತೀಚೆಗೆ ಜರುಗಿದ ತಾಲೂಕು ಮಟ್ಟದ ಯುವಜನ ಮೇಳದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಸರ್ಕಾರದ ಎಲ್ಲ ಯೋಜನೆಗಳು ಯುವ ಸಮೂಹವನ್ನು ತಲುಪಬೇಕು. ತಮ್ಮಲ್ಲಿನ ಅವ್ಯಕ್ತ ಪ್ರತಿಭೆ ಸಾಮರ್ಥ್ಯಗಳನ್ನು ತೋರ್ಪಡಿಸಬೇಕು. ಕ್ರೀಡೆ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ದೇಶವನ್ನು ಇನ್ನಷ್ಟು ಬಲಪಡಿಸಬೇಕು ಎಂದರು. ನ್ಯಾಯವಾದಿ ಎಫ್.ಎನ್. ನೆಲ್ಲೂರ ಯುವಜನಮೇಳವನ್ನು ಉದ್ಘಾಟಿಸಿದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಆರ್. ಪಾಟೀಲ, ತಾಲೂಕು ಯುವ ಒಕ್ಕೂಟದ ಗೌರವಾಧ್ಯಕ್ಷ ಶಂಕ್ರಣ್ಣ ಅರಗೋಳ, ಜಾನಪದ ಕಲಾವಿದ ಚಂದ್ರಣ್ಣ ಚಾಕಲಬ್ಬಿ, ಬಿಸಿಎಂ ವಿಸ್ತರಣಾಧಿಕಾರಿ ಎಸ್.ಎ. ಹುಗ್ಗಿ ಹಾಗೂ ಎಚ್.ಎಫ್. ದ್ಯಾವನಗೌಡ್ರ, ಶಂಕ್ರಯ್ಯಾ ಹಿರೇಮಠ ಮತ್ತು ಯುವ ಒಕ್ಕೂಟದ ಮತ್ತು ವರದಾ ಯುವ ಸಂಘದ ಸದಸ್ಯರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

