ದೇಸೀ ಕ್ರೀಡೆಗಳನ್ನು ಉಳಿಸಿ, ಬೆಳೆಸಿ: ಮಲ್ಲಿಕಾರ್ಜುನ
ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಜ.26
ಏಕರೂಪ ಕ್ರೀಡಾ ನೀತಿ ಜಾರಿಗೆ ತರುವ ಮೂಲಕ ದೇಶದ ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸುವ ಕಾರ್ಯ ಆಗಬೇಕಿದೆ ಎಂದು ನವೋದಯ ವಿದ್ಯಾಸಂಸ್ಥೆ ಅಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ ಅಭಿಪ್ರಾಯ ವ್ಯಕ್ತಪಡಿಸಿದರು.
ಮೋಟೆಬೆನ್ನೂರಿನ ನವೋದಯ ವಿದ್ಯಾಸಂಸ್ಥೆಯಲ್ಲಿ ಏರ್ಪಡಿಸಿದ್ದ ಗ್ರಾಮೀಣ ಕ್ರೀಡಾ ತರಬೇತಿ ಶಿಬಿರದ ಸಮಾ ರೋಪ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕ್ರಿಕೆಟ್ ಅಬ್ಬರ ದೇಶೀ ಕ್ರೀಡೆಗಳಿಗೆ ಮಂಕು ಕವಿಯುವಂತೆ ಮಾಡಿದೆ. ಕೇಂದ್ರ ಸರ್ಕಾರ ಏಕರೂಪ ಕ್ರೀಡಾ ನೀತಿ ಜಾರಿಗೆ ತರುವ ಮೂಲಕ ಸರ್ಕಾರಿ ಸ್ವಾಮ್ಯದ ಎಲ್ಲ ಕೇಂದ್ರಗಳಲ್ಲಿ ಶೇ. 13ರಷ್ಟು ಉದ್ಯೋಗವನ್ನು ದೇಸೀ ಕ್ರೀಡೆಗಳ ಆಟಗಾರರಿಗೆ ಮೀಸಲಿಡಬೇಕು. ಇಲ್ಲದಿದ್ದರೆ ಖೋಖೋ, ಕಬಡ್ಡಿ, ಕುಸ್ತಿ ಮುಂತಾದ ದೇಸೀ ಕ್ರೀಡೆಗಳನ್ನು ಕೇವಲ ಚಿತ್ರಗಳಲ್ಲಿ ನೋಡುವ ಕಾಲ ದೂರವಿಲ್ಲ ಎಂದರು. ಜಿಪಂ ಸದಸ್ಯ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ಆಧುನಿಕತೆಯ ಭರಾಟೆಯಲ್ಲಿ ಗ್ರಾಮೀಣ ಜನತೆಗೆ ಮನರಂಜನೆ ಒದಗಿಸುತ್ತಿದ್ದ ಕ್ರೀಡೆಗಳು ಮರೆಯಾಗುತ್ತಿವೆ. ಅವುಗಳನ್ನು ಉಳಿಸಿ ಬೆಳೆಸಬೇಕಿದೆ.
ಪ್ರಾಥಮಿಕ ಹಂತದಲ್ಲೇ ಮಕ್ಕಳಿಗೆ ಗ್ರಾಮೀಣ ಕ್ರೀಡೆಗಳನ್ನು ಪರಿಚಯಿಸಬೇಕು. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕ್ರೀಡೆಗಳು ಅಗತ್ಯ. ಎಲ್ಲರೂ ಆಡುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು. ಗ್ರಾಪಂ ಅಧ್ಯಕ್ಷೆ ನೀಲಮ್ಮ ಗೊರವರ, ಉಪಾಧ್ಯಕ್ಷ ವಿಜಯ ಸವಣೂರ, ಶಂಕ್ರಣ್ಣ ಅಕ್ಕಿ, ಎಸ್.ಎಂ. ಪಾಟೀಲ, ಸಿ.ಜಿ. ಮಲ್ಲೂರ ಉಪಸ್ಥಿತರಿದ್ದರು. ಎ.ಟಿ. ಪೀಠದ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಿ.ಎಚ್. ಗೊರವರ ಸ್ವಾಗತಿಸಿದರು. ಎಂ.ಎಫ್. ಕಿಳ್ಳಿಕ್ಯಾತರ ನಿರೂಪಿಸಿದರು. ಬಿ.ವಿ. ಅವಾಜಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

