ಈದ್ ಮಿಲಾದ್: ಅದ್ಧೂರಿ ಮೆರವಣಿಗೆ
ಕನ್ನಡಪ್ರಭ ವಾರ್ತೆ, ಹಾವೇರಿ, ಜ. 27
ಜಿಲ್ಲಾದ್ಯಂತ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಪ್ರವಾದಿ ಮಹಮ್ಮದರ ಜನ್ಮದಿನದ ಅಂಗವಾಗಿ ನಗರದ ಮಸೀದಿಗಳಿಗೆ ದೀಪಾಲಂಕಾರ ಮಾಡಲಾಗಿತ್ತು. ಪ್ರಮುಖ ವೃತ್ತಗಳಲ್ಲಿ ಪೈಗಂಬರ್ ಅವರ ಸಂದೇಶ ಸಾರುವ ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್ ಅಳವಡಿಸಲಾಗಿತ್ತು. ಹಸಿರು ಧ್ವಜಗಳಿಂದ ಸಿಂಗರಿಸಲಾಗಿತ್ತು.
ಇಲ್ಲಿನ ಹಜರತ್ ಮೆಹಬೂಬ ಸುಭಾನಿ ದರ್ಗಾದಿಂದ ಆರಂಭವಾದ ಮೆರವಣಿಗೆ ಮಾನೆಗಾರ ಓಣಿ, ಗಾಂಧಿ ವೃತ್ತ ಮುಂತಾದೆಡೆ ಸಂಚರಿಸಿ, ಮರಳಿತು. ಮಹಮ್ಮದ್ ಪೈಗಂಬರರ ಸ್ಮರಣೆಯ ಹಾಡುಗಳನ್ನು ಹಾಡಿದರು. ಮೆರವಣಿಗೆಯಲ್ಲಿ ಮೆಕ್ಕಾ ಹಾಗೂ ಮದೀನಾಗಳ ಸ್ತಬ್ಧಚಿತ್ರಗಳು ಗಮನ ಸೆಳೆದವು. ಶಾಸಕ ನೆಹರು ಓಲೇಕಾರ, ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷ ಬಸವರಾಜ ಅರಬಗೊಂಡ, ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಂದ್ರ ಕಟಕೋಳ, ನಗರಸಭೆ ಅಧ್ಯಕ್ಷ ಜಗದೀಶ ಮಲಗೋಡ, ಮುಖಂಡರಾದ ಎಂ.ಎಂ. ಹಿರೇಮಠ, ಶಿವಕುಮಾರ ತಾವರಗಿ, ಜಗದೀಶ ಬೆಟಗೇರಿ, ಗಿರೀಶ ತುಪ್ಪದ, ಪ್ರಭು ಹಿಟ್ನಳ್ಳಿ, ನಾಗರಾಜ ಬಸೇಗಣ್ಣಿ, ರಾಜು ಪುಣ್ಯವಂತರ, ಅಂಜುಮನ್ ಸಮಿತಿ ಅಧ್ಯಕ್ಷ ಐ.ಯು. ಪಠಾಣ, ದರ್ಗಾದ ಮೌಲ್ವೀ ನಜೀರ ಅಹ್ಮದ ಅಫ್ತಾರ, ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಅಲಾಭಕ್ಷ ತಿಮ್ಮಾಪುರ, ಮುಖಂಡ ಸುಭಾನಿ ಚೂಡಿಗಾರ, ನಗರಸಭೆ ಸದಸ್ಯ ಬಾಬುಸಾಬ ಮೋಮಿನಗಾರ, ಅಬ್ದುಲ ರಜಾಕ ಜಮಾದಾರ, ಚೋಪದಾರ ಪಾಲ್ಗೊಂಡು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

