ಕಾಂಗ್ರೆಸ್ ವಕ್ತಾರ ದೇಶಪಾಂಡೆಗೆ ಸನ್ಮಾನ
ಕನ್ನಡಪ್ರಭ ವಾರ್ತೆ, ಹಾನಗಲ್ಲ, ಜ. 29
ಕಾಂಗ್ರೆಸ್ ಸಮಿತಿಯ ತಾಲೂಕು ವಕ್ತಾರರಾಗಿ ನೇಮಕಗೊಂಡ ಇಲ್ಲಿನ ನಿವೃತ್ತ ಶಿಕ್ಷಕ ಕೆ.ಎಲ್. ದೇಶಪಾಂಡೆ ಅವರನ್ನು ಅಖಿಲ ಭಾರತ ಯೋಗೀಶ್ವರ ಯಾಜ್ಞವಲ್ಕ್ಯ ಮಹಾಮಂಡಲದ ತಾಲೂಕು ಘಟಕದ ವತಿಯಿಂದ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.
ಮಹಾಮಂಡಲದ ಜಿಲ್ಲಾಧ್ಯಕ್ಷ ನಾರಾಯಣಾಚಾರ್ಯ ಚಿನ್ನಮುಳಗುಂದ ಮಾತನಾಡಿ, ಬ್ರಾಹ್ಮಣ ಸಮಾಜದ ಹಿತ ಚಿಂತಕರಾಗಿರುವ ದೇಶಪಾಂಡೆ ಅವರು ರಾಜಕೀಯ ಕ್ಷೇತ್ರದಲ್ಲಿ ಮಹತ್ವದ ಹುದ್ದೆ ಅಲಂಕರಿಸಿ ಉತ್ತಮ ಸೇವೆ ಸಲ್ಲಿಸುವುದರ ಜೊತೆಗೆ ವಿಪ್ರ ಸಮುದಾಯದ ಅಭಿವೃದ್ಧಿಗೆ ಸಹಕರಿಸಲಿ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ದೇಶಪಾಂಡೆ, ಅಧಿಕಾರ ಮತ್ತು ಹುದ್ದೆಯ ಅಕಾಂಕ್ಷಿಯಲ್ಲದ ತಮಗೆ ಈ ಹುದ್ದೆ ಸತತವಾಗಿ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದರ ಪರಿಣಾಮವಾಗಿ ಜಿಲ್ಲಾಧ್ಯಕ್ಷ ಮತ್ತು ವಿಧಾನಸಭಾ ಮಾಜಿ ಉಪಾಧ್ಯಕ್ಷ ಮನೋಹರ ತಹಸೀಲ್ದಾರ್ ಅವರಿಂದ ದೊರಕಿದ್ದು, ಕಾಂಗ್ರೆಸ್ ಪಕ್ಷದ ಹಾಗೂ ಬ್ರಾಹ್ಮಣ ಸಮುದಾಯದ ಸೇವಾ ಕಾರ್ಯದಲ್ಲಿ ಪ್ರಾಮಾಣಿಕವಾಗಿ ತೊಡಗಿಕೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷ ದಿನೇಶ ಕುಲಕರ್ಣಿ, ರವಿಚಂದ್ರ ಪುರೋಹಿತ, ಮಹೇಶ ಪಾಟೀಲ, ಮುರಳೀಧರ ಕಾಮನಹಳ್ಳಿ, ಗುರುಮೂರ್ತಿ ಬಿಜಾಪುರ, ಮುತ್ತಣ್ಣ ನಾಶಿಕ, ಪ್ರಶಾಂತ ನಾಡಿಗೇರ, ರವೀಂದ್ರ ದೇಶಪಾಂಡೆ, ಕೃಷ್ಣ ಪೂಜಾರ, ಕಿರಣ ಬಂಕನಾಳ ಸೇರಿದಂತೆ ಮುಂತಾದವರುಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

