ಬ್ಯಾಡಗಿ: ಜಿಲ್ಲಾ ಮಟ್ಟದ ವೃತ್ತಿ ಶಿಕ್ಷಣ ಹಾಗೂ ವಸ್ತು ಪ್ರದರ್ಶನ ಕಾರ್ಯಕ್ರಮ ಮೋಟೆಬೆನ್ನೂರಿನ ಬಳ್ಳಾರಿ ರುದ್ರಪ್ಪ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಜ. 30ರ ಬೆಳಗ್ಗೆ 10 ಗಂಟೆಗೆ ಜರುಗಲಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವೃತ್ತಿ ಶಿಕ್ಷಕರ ಸಂಘದ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಸುರೇಶಗೌಡ ವಹಿಸಲಿದ್ದು, ಮಾಜಿ ಸಚಿವ ಸಿ.ಎಂ. ಉದಾಸಿ ವಸ್ತು ಪ್ರದರ್ಶನ ಉದ್ಘಾಟಿಸುವರು. ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಅತಿಥಿಗಳಾಗಿ ಸಂಸದರಾದ ಶಿವಕುಮಾರ ಉದಾಸಿ, ಧಾರವಾಡ ಸಂಸದ ಪ್ರಹ್ಲಾದ್ ಜೋಶಿ, ನೆಹರು ಓಲೇಕಾರ, ಜಿ. ಶಿವಣ್ಣ, ಬಿ.ಸಿ. ಪಾಟೀಲ, ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಬಸವರಾಜ ಹೊರಟ್ಟಿ, ಶಿವರಾಜ ಸಜ್ಜನ, ಸೋಮಣ್ಣ ಬೇವಿನಮರದ, ಹಾವೇರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಶಂಕ್ರಣ್ಣ ಮಾತನವರ, ಸದಸ್ಯ ವಿರೂಪಾಕ್ಷಪ್ಪ ಬಳ್ಳಾರಿ, ತಾಪಂ ಅಧ್ಯಕ್ಷೆ ಚಿನ್ನವ್ವ ಪಾಸಿ, ಉಪಾಧ್ಯಕ್ಷ ಚಂದ್ರಣ್ಣ ಮುಚ್ಚಟ್ಟಿ ಮತ್ತಿತರ ಗಣ್ಯರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.