ಕನ್ನಡಕ್ಕೇ ಪ್ರಾಶಸ್ತ್ಯ ನೀಡಿ: ಸುಶಮೀಂದ್ರ ಶ್ರೀಗಳು
ಹಾವೇರಿ: ವಿಶ್ವದ ಎಲ್ಲೆಡೆಯೂ ಮಾತೃಭಾಷೆಗೆ ಪ್ರಥಮ ಪ್ರಾಶಸ್ತ್ಯವಿದೆ. ಆದರೆ ನಮ್ಮವರಿಗೆ ಅದೇನಾಗಿದೆಯೋ ಅರ್ಥವೇ ಆಗುತ್ತಿಲ್ಲ. ಎಲ್ಲರೂ ಕನ್ನಡ ಶಾಲೆಗಳಿಗೆ ಮಕ್ಕಳನ್ನು ಸೇರಿಸಲೇಬೇಕು. ಕನ್ನಡಕ್ಕೆ ಪ್ರಾಶಸ್ತ್ಯ ನೀಡಬೇಕು ಎಂದು ಮಂತ್ರಾಲಯದ ಸುಶಮೀಂದ್ರ ಶ್ರೀಗಳು ಹೇಳಿದರು.
ಹೊಸರಿತ್ತಿಯಲ್ಲಿ ನಡೆದ 7ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದರು. ಸ್ವಾತಂತ್ರ್ಯ ಪೂರ್ವದಲ್ಲಿಯೇ ಕನ್ನಡ ಭಾಷೆ ಉತ್ತಮವಾಗಿತ್ತು, ಆನಂತರದ ದಿನಗಳಲ್ಲಿ ಎಲ್ಲವೂ ಇಂಗ್ಲಿಷ್ಮಯವಾಗಿ ಮಮ್ಮಿ-ಡ್ಯಾಡಿ ಸಂಸ್ಕೃತಿ ಬೆಳೆದು ಪರಸ್ಪರ ಗೌರವಿಸುವುದನ್ನೇ ಮರೆತಿದ್ದಾರೆ. ನೈತಿಕ ಶಿಕ್ಷಣವೇ ಇಲ್ಲದಾಗಿದೆ. ಅಮ್ಮ ಅಪ್ಪ ಎಂಬ ಮನಃಪೂರ್ವಕವಾದ ಭರವಸೆಯ ಮಾತುಗಳಿಂದ ದೂರವಾಗುತ್ತಿದ್ದೇವೆ ಎಂದು ವಿಷಾದಿಸಿದರು. ಶರಣ ಸಾಹಿತ್ಯದಿಂದ ದಾಸವಾಣಿ ವರೆಗೂ ಭಾಷೆಯ ಮೂಲಕ ಸಾಮಾಜಿಕ ಮೌಲ್ಯಗಳನ್ನು ಪ್ರತಿಪಾದಿಸಿದ ಕೀರ್ತಿ ಕನ್ನಡ ಸಾಹಿತ್ಯಕ್ಕೆ ಸಲ್ಲುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು. ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಗ್ರಾಮೀಣ ಭಾಗಗಳಲ್ಲಿ ಆಯೋಜಿಸುವ ಮೂಲಕ ಗ್ರಾಮೀಣ ಮಟ್ಟದಲ್ಲಿ ಕನ್ನಡ ಕುರಿತಂತೆ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಕನ್ನಡ ಭಾಷೆಗೆ ಗಟ್ಟಿ ನೆಲೆ, ನಿಲುವು, ನೈತಿಕ ಸ್ಥೈರ್ಯಗಳನ್ನು ನೀಡುವಲ್ಲಿ ಶರಣರು, ದಾರ್ಶನಿಕರು ಶ್ರಮಿಸಿದ್ದಾರೆ. ಇದೊಂದು ಅಪೂರ್ವ ಸಂಗಮ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

