ಹಾವೇರಿ

ಬಿಸಿಯೂಟ ಸಿಬ್ಬಂದಿ ಕಾಯಂಗೊಳಿಸಿ: ಪ್ರತಿಭಟನೆ

Published On :




ಹಾನಗಲ್ಲ: ರಾಜ್ಯ ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಸಿಯೂಟದ ಸಿಬ್ಬಂದಿಯನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ಪ್ರತಿಭಟನೆ ನಡೆಸಿತು.
ಗುರುವಾರ ಪಟ್ಟಣದ ಕುಮಾರೇಶ್ವರ ವಿರಕ್ತಮಠದದಿಂದ ಪ್ರಾರಂಭಗೊಂಡ ಪ್ರತಿಭಟನೆ ಮಹಾತ್ಮಾ ಗಾಂಧಿ ವೃತ್ತದವರೆಗೆ ತೆರಳಿ ಕೆಲಕಾಲ ರಸ್ತೆ ತಡೆ ನಡೆಸಿತು. ಬಳಿಕ ತಹಸೀಲ್ದಾರ್ ಕಚೇರಿಗೆ ತರಳಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಹಲವು ವರ್ಷಗಳಿಂದ ರಾಜ್ಯಾದ್ಯಂತ ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಪ್ರಾಮಾಣಿಕವಾಗಿ ಬಿಸಿಯೂಟದ ಕಾರ್ಯನಿರ್ವಹಿಸುತ್ತಿರುವ ಲಕ್ಷಾಂತರ ಸಿಬ್ಬಂದಿ ಜೀವನಕ್ಕೆ ಭದ್ರತೆ ಇಲ್ಲದಂತಾಗಿದೆ. ಸರ್ಕಾರಿ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಯನ್ನು ಸರ್ಕಾರದ ನೌಕರರಾಗಿ ಪರಿಗಣಿಸಲಾಗಿದೆ. ಅದೇ ಮಾದರಿಯಲ್ಲಿ ಇವರನ್ನು ಕನಿಷ್ಠ ಡಿ. ದರ್ಜೆ ನೌಕರರನ್ನಾಗಿ ಸರಕಾರ ಪರಿಗಣಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿರುವ ಸಂಘಟನೆಯ ಪದಾಧಿಕಾರಿಗಳು ದಿನಗೂಲಿ ವೇತನ ಪಡೆಯುತ್ತಿರುವ ಸಿಬ್ಬಂದಿಗೆ ಪ್ರತಿದಿನ ರು. 30 ವೇತನ ಲಭ್ಯವಾಗುತ್ತಿದೆ ಎಂದು ದೂರಿದರು.
ಪ್ರತಿಭಟನಾ ಮೆರವಣಿಗೆಗೆ ಹೋತನಹಳ್ಳಿ ಸಿದ್ಧಾರೂಢ ಮಠದ ಶಂಕರಾನಂದ ಶ್ರೀ ಚಾಲನೆ ನೀಡಿದರು. ಸಂಘಟನೆ ಅಧ್ಯಕ್ಷ ರಾಮು ಯಳ್ಳೂರ, ನಿರ್ಮಲಾ ಬಂಕಾಪುರಮಠ, ಶ್ರೀಕಾಂತ ಕೊಂಚಿಗೇರಿ, ಸುಭಾಸ ಬೆಂಗಳೂರು, ಸಂಜಯಗಾಂಧಿ ಸಂಜೀವಣ್ಣನವರ, ಸಿದ್ದು ಮುಂಡಾಸದ, ಯಲ್ಲಪ್ಪ ಮಾಳಗಿ, ಮಾಲತೇಶ ಮಾಳಿ, ಬಸವರಾಜ ಬೆಳವತ್ತಿ, ಸಂದೀಪ ಹುಲಗೂರು, ಶ್ರೀಧರ ಕಟ್ಟಿಮನಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.