ಇಂದಿನಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ
ಹಾವೇರಿ: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಜುಲೈ 3ರಿಂದ 12ರ ವರೆಗೆ ನಡೆಯಲಿದ್ದು, ಹಾವೇರಿ ಜಿಲ್ಲೆಯಲ್ಲಿ 2031 ವಿದ್ಯಾರ್ಥಿಗಳು ಹಾಗೂ 1,145 ವಿದ್ಯಾರ್ಥಿನಿಯರು ಸೇರಿ ಒಟ್ಟು 3185 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಜಿಲ್ಲೆಯ ಏಳು ತಾಲೂಕುಗಳಲ್ಲಿ ಎಂಟು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ ಎಂದು ಪದವಿಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಆರ್. ಕೊಣ್ಣೂರು ತಿಳಿಸಿದ್ದಾರೆ.
ಪರೀಕ್ಷೆಯನ್ನು ಸುಗಮನವಾಗಿ ನಡೆಸಲು ಜಿಲ್ಲಾಮಟ್ಟದಲ್ಲಿ ಮೂರು ವೀಚಕ್ಷಣಾ ತಂಡಗಳನ್ನು ರಚಿಸಲಾಗಿದೆ ಎಂದರು.
ಪರೀಕ್ಷಾ ಕೇಂದ್ರಗಳು: ಹಾವೇರಿ- ಜಿ.ಎಚ್. ಕಾಲೇಜು. ಶಿಗ್ಗಾಂವಿ- ಎಸ್ಬಿಬಿಎಂ ಕಾಲೇಜು, ಬ್ಯಾಡಗಿ- ಎಸ್ಜೆಜೆಎಂ ಸರ್ಕಾರಿ ಕಾಲೇಜು, ರಾಣಿಬೆನ್ನೂರು- ಎಚ್.ಎಸ್. ಪದವಿಪೂರ್ವ ಕಾಲೇಜು ಹಾಗೂ ಬಿ.ಕೆ. ಗುಪ್ತಾ ಪದವಿಪೂರ್ವ ಕಾಲೇಜು, ಸವಣೂರು- ಸರ್ಕಾರಿ ಮಜೀದ್ ಪದವಿಪೂರ್ವಕಾಲೇಜು, ಹಿರೇಕೆರೂರು-ಕೆ.ಎಚ್. ಪಾಟೀಲ ಪದವಿಪೂರ್ವ ಕಾಲೇಜು ಹಾಗೂ ಹಾನಗಲ್ಲ-ನ್ಯೂ ಕಾಂಪೋಜಿಟ್ ಪದವಿಪೂರ್ವ ಕಾಲೇಜು.
ನಿರ್ಬಂಧ: ಜಿಲ್ಲೆಯಲ್ಲಿ ಜು. 3ರಿಂದ 12ರ ವರೆಗೆ ಜರುಗಲಿರುವ ದ್ವಿತೀಯ ಪೂರಕ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರವೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಹಾಗೂ ಗುಂಪುಗಳ ಪ್ರವೇಶ ನಿಷೇಧಿಸಲಾಗಿದೆ. ಸದರಿ ಪ್ರದೇಶದಲ್ಲಿ ಬರುವ ಝರಾಕ್ಸ್ ಹಾಗೂ ಟೈಪಿಂಗ್ ಸೆಂಟರ್ಗಳನ್ನು ಮುಚ್ಚಲು ಆದೇಶಿಸಿದೆ ಹಾಗೂ ಮೊಬೈಲ್ ಬಳಕೆ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

