ಹಾವೇರಿ

ಗುಣಮಟ್ಟ ಕಾಮಗಾರಿ ಕೈಗೊಳ್ಳಿ: ಬಣಕಾರ

Published On :

ಹಿರೇಕೆರೂರು: ಗ್ರಾಮೀಣ ಪ್ರದೇಶದ ಬಾಲಕಿಯರ ಶಿಕ್ಷಣದ ಅನುಕೂಲಕ್ಕಾಗಿ ಸರ್ಕಾರ ನೂತನವಾಗಿ ಬಾಲಕಿಯರ ವಸತಿ ನಿಲಯ ಮಂಜೂರು ಮಾಡಿದ್ದು, ಈ ಕಟ್ಟಡ ಕಾಮಗಾರಿ ಗುಣಮಟ್ಟದಲ್ಲಿ ನಿರ್ಮಾಣ ಮಾಡುವ ಮೂಲಕ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿನಿಯರ ಶೈಕ್ಷಣಿಕ ಅಭಿವೃದ್ಧಿಗೆ ಅನುಕೂಲ ಕಲ್ಪಿಸಬೇಕು ಎಂದು ಶಾಸಕ ಯು.ಬಿ. ಬಣಕಾರ ನುಡಿದರು.
ಪಟ್ಟಣದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ನಿರ್ಮಿತಿ ಕೇಂದ್ರ ಆಶ್ರಯದಡಿ ಪಟ್ಟಣದಲ್ಲಿ ರು. 2.83 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಬಾಲಕಿಯರ ವಸತಿ ನಿಲಯ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ತಾಲೂಕಿನ ಬಾಲಕಿಯರಿಗೆ ನೂತನವಾಗಿ ಮಂಜೂರಾಗಿರುವ ವಸತಿ ನಿಲಯ ಗುಣಮಟ್ಟದಿಂದ ಕೂಡಿರಬೇಕು. ಈ ಮೂಲಕ ಗ್ರಾಮೀಣ ಪ್ರದೇಶದ ಬಾಲಕಿಯರಿಗೆ ಅನುಕೂಲ ಕಲ್ಪಿಸಿಕೊಡಬೇಕು, ತ್ವರಿತಗತಿಯಲ್ಲಿ ಕಾಮಗಾರಿ ಪೂರೈಸಿ ಇಲಾಖೆಗೆ ಹಸ್ತಾಂತರಿಸಬೇಕು ಎಂದು ತಿಳಿಸಿದರು.
ಜಿಪಂ ಅಧ್ಯಕ್ಷ ಶಂಕ್ರಣ್ಣ ಮಾತನವರ, ಶಾಂತಾ ಹಾದಿಮನಿ, ಸುಜಾತಾ ಕೊಟಗಿಮನಿ, ಬಸಮ್ಮ ಅಬಲೂರು, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಚಂದ್ರು ಅಣ್ಣಪ್ಪನವರ, ತಾಪಂ ಸದಸ್ಯ ಆರ್.ಎನ್. ಗಂಗೋಳ, ಮಲ್ಲೇಶಪ್ಪ ಹೊರಪೇಟೆ, ಡಿ. ಮಂಜಪ್ಪ, ತಾಪಂ ಇಒ ಎಂ.ಎನ್. ಮಾಳಿಗೇರ, ಎಂ.ಎಚ್. ರಾಜಕುಮಾರ, ಮಹೇಶ ಗುಬ್ಬಿ, ಮಹೇಂದ್ರ ಬಡಳ್ಳಿ, ಮುಜೀಬ ರಿಕಾರ್ಟಿ, ಪ್ರಭು ಮಳವಳ್ಳಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.