ಕೆಂಗೊಂಡ: ಮಹಿಳೆ ಕಾಣೆ
ಬ್ಯಾಡಗಿ: ಮನೆಯವರಿಗೆ ತಿಳಿಸದೇ ತಾಲೂಕಿನ ಕೆಂಗೊಂಡ ಗ್ರಾಮದ ಮಹಿಳೆಯೊಬ್ಬಳು ಕಾಣೆಯಾದ ಘಟನೆ ನಡೆದಿದೆ. ಮಹಿಳೆಯನ್ನು ಗಂಗವ್ವ ಶಿವಾನಂದಪ್ಪ ಹುರಿಗೆಜ್ಜಿ (50) ಎಂದು ಗುರುತಿಸಲಾಗಿದ್ದು, ಕಳೆದ ಜ. 6ರಂದು ಮನೆಯಿಂದ ಹೋದವಳು ತಿರುಗಿ ಬಂದಿಲ್ಲ. ಈ ಕುರಿತು ಸಂಬಂಧಿಕರು ಹಾಗೂ ಪರಿಚಯಸ್ಥರ ಬಳಿ ವಿಚಾರಿಸಲಾಗಿ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಜು. 1ರಂದು ಪತಿ ಶಿವಾನಂದಪ್ಪ ಹುರಿಗೆಜ್ಜಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಕೊಂಡಿದ್ದು, ಕಾಣೆಯಾದ ಮಹಿಳೆ 5 ಅಡಿ ಎತ್ತರವಿದ್ದು, ಕಪ್ಪು ಮೈಬಣ್ಣ, ಕೋಲು ಮುಖ ಹೊಂದಿರುತ್ತಾಳೆ. ನೀಲಿ ಬಣ್ಣದ ಸೀರೆ ಧರಿಸಿದ್ದು, ಕನ್ನಡ ಭಾಷೆ ಬಲ್ಲವಳಾಗಿದ್ದಾಳೆ. ಮಹಿಳೆ ಸುಳಿವು ಸಿಕ್ಕಲ್ಲಿ ಬ್ಯಾಡಗಿ ಪೊಲೀಸ್ ಠಾಣೆಗೆ ಖುದ್ದಾಗಿ ಅಥವಾ 08375-228633 ದೂರವಾಣಿ ಸಂಖ್ಯೆಗೆ ಸಂಪರ್ಕಿಸುವಂತೆ ಕೋರಿದ್ದಾರೆ.
11ರಂದು ಕೆಡಿಪಿ ಸಭೆ
ಹಾವೇರಿ: ಪ್ರಸಕ್ತ ಸಾಲಿನ ಮೊದಲನೇ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಜು. 11ರಂದು ಬೆಳಗ್ಗೆ 11ಕ್ಕೆ ಜಿಪಂ ಸಭಾಂಗಣದಲ್ಲಿ ಜರುಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಪ್ರಕಾಶ ಹುಕ್ಕೇರಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ ಕುಸುಗಲ್ಲ ತಿಳಿಸಿದ್ದಾರೆ.
ತರಬೇತಿಗೆ ಅರ್ಜಿ ಆಹ್ವಾನ
ಹಾವೇರಿ: ಕರ್ನಾಟಕ ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದಿಂದ ರಾಣಿಬೆನ್ನೂರು ನ್ಯಾಯಾಲಯ ಕಟ್ಟಡದ ಹಿಂಭಾಗದಲ್ಲಿರುವ ಕುರಿ ಮತ್ತು ಉಣ್ಣೆ ಅಭಿವೃದ್ಧಿ ಯೋಜನೆ ಅಧೀಕ್ಷಕ ಕಚೇರಿಯಲ್ಲಿ ಆರು ತಿಂಗಳ ಕಾಲ ಉಣ್ಣೆ ವಸ್ತುಗಳ ತಯಾರಿಕೆ ಕುರಿತು ತರಬೇತಿ ಹಮ್ಮಿಕೊಳ್ಳಲಾಗಿದೆ. ಆಸಕ್ತ ನಿರುದ್ಯೋಗಿ ಯುವಕ ಹಾಗೂ ಯುವತಿಯರು ಒಂದು ಬಿಳಿ ಹಾಳೆಯಲ್ಲಿ ಹೆಸರು, ವಿಳಾಸ, ಜಾತಿ ಹಾಗೂ ವಿದ್ಯಾಭ್ಯಾಸದ ಬಗ್ಗೆ ಮಾಹಿತಿಯುಳ್ಳ ಅರ್ಜಿಯನ್ನು ಜುಲೈ 20ರೊಳಗಾಗಿ ಅಧೀಕ್ಷಕರು, ಕುರಿ ಮತ್ತು ಉಣ್ಣೆ ಅಭಿವೃದ್ಧಿ ಯೋಜನೆ, ರಾಣಿಬೆನ್ನೂರು ಅವರಿಗೆ ಸಲ್ಲಿಸಬೇಕು. ಒಂದು ತರಬೇತಿಗೆ 25 ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರು. 1500 ಸ್ಟೈಫಂಡ್ ನೀಡಲಾಗುವುದು. ಬೇರೆ ತಾಲೂಕಿನ ಅಭ್ಯರ್ಥಿಗಳಿಗೆ ವಸತಿ ಸೌಕರ್ಯ ಸಹ ಕಲ್ಪಿಸಲಾಗುವುದು ಎಂದು ಕುರಿ ಮತ್ತು ಉಣ್ಣೆ ಅಭಿವೃದ್ಧಿ ಯೋಜನೆ ಅಧೀಕ್ಷಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ: 08373-266170 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

