ಪ್ರಕೃತಿ ವಿಕೋಪಕ್ಕೆ ಮುಂಜಾಗ್ರತೆ ಕೈಗೊಳ್ಳಿ: ಕೆ.ಬಿ. ಕೋಳಿವಾಡ
ರಾಣಿಬೆನ್ನೂರು: ತಾಲೂಕಾದ್ಯಂತ 3 ದಿನಗಳಿಂದ ಮಳೆಯಾಗುತ್ತಿದ್ದು ಪ್ರಕೃತಿಯಿಂದಾಗಲಿ ಅಥವಾ ಯಾವುದೇ ರೀತಿಯಿಂದಾಗಲಿ ಹಾನಿ ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಹಾಗೂ ವಿಕೋಪ ಸಂಭವಿಸಿದಲ್ಲಿ ತಕ್ಷಣ ಪರಿಹಾರ ಸೇರಿದಂತೆ ಇನ್ನಿತರ ಕ್ರಮ ಕೈಗೊಳ್ಳಲು ತಾಲೂಕು ಆಡಳಿತಕ್ಕೆ ಸೂಚನೆ ನೀಡಿರುವುದಾಗಿ ಶಾಸಕ ಕೆ.ಬಿ. ಕೋಳಿವಾಡ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಾಲೂಕಿನಾದ್ಯಂತ 3 ದಿನಗಳಿಂದ ಮಳೆಯಾಗುತ್ತಿದೆ. ತಾಲೂಕಿನ ಗಡಿ ಅಂಚಿನಲ್ಲಿ ಹರಿದಿರುವ ತುಂಗಭದ್ರಾ ಮತ್ತು ತಾಲೂಕಿನಲ್ಲಿ ಹರಿದಿರುವ ಕುಮದ್ವತಿ ನದಿಯ ಅಕ್ಕ-ಪಕ್ಕದಲ್ಲಿನ ಗ್ರಾಮಗಳಿಗೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸಾರ್ವಜನಿಕರಲ್ಲಿ ಪ್ರಕೃತಿ ವಿಕೋಪದ ಕುರಿತು ಮಾಹಿತಿ ನೀಡಬೇಕು. ಹಾನಿಗೊಳಗಾಗಿದ್ದಲ್ಲಿ ತಕ್ಷಣವೆ ಸೂಕ್ತ ಪರಿಹಾರ ನೀಡಲು ತಾಲೂಕು ಆಡಳಿತ ಮುಂದಾಗಬೇಕೆಂದು ತಿಳಿಸಿದ್ದು, ವಿಕೋಪ ಸಂಭವಿಸಿದಲ್ಲಿ ಸೂಕ್ತ ಪರಿಹಾರಕ್ಕಾಗಿ 35 ಗ್ರಾಮ ಪಂಚಾಯಿತಿಗೊಬ್ಬರಂತೆ ಅಧಿಕಾರಿಗಳನ್ನು ನೇಮಿಸಬೇಕೆಂದು ತಿಳಿಸಿದರು.
ದೊಡ್ಡ ಕೆರೆ ಅಭಿವೃದ್ಧಿಗೆ ಆದ್ಯತೆ: ನಗರದ ರೇಲ್ವೆ ನಿಲ್ದಾಣದ ಪಕ್ಕದಲ್ಲಿರುವ ದೊಡ್ಡ ಕೆರೆ ಅಭಿವೃದ್ಧಿ, ನಗರದ ಕ್ರೀಡಾಂಗಣ, ತ್ಯಾಜ್ಯ ನಿರ್ವಹಣೆಗಾಗಿ, ಸಮಗ್ರ ಕುಡಿವ ನೀರು ಒದಗಿಸುವ ಯೋಜನೆ ಸೇರಿದಂತೆ ತಾಲೂಕಿನ ಸಮಗ್ರ ಅಭಿವೃದ್ಧಿಯ ಹಿತದೃಷ್ಟಿಯಿಂದ ಕೈಗೊಳ್ಳಬೇಕಾಗಿರುವ ಕ್ರಮದ ಕುರಿತು ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸುವುದಕ್ಕಾಗಿ 30 ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದು, ತಕ್ಷಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದರು. ತಹಸೀಲ್ದಾರ್ ಎಚ್. ಶಿವಕುಮಾರ ಮಾತನಾಡಿ, ತಾಲೂಕಿನಾದ್ಯಂತ ಪ್ರಕೃತಿ ವಿಕೋಪ ತಡೆಗಾಗಿ ಇಲಾಖೆಯ ಸಿಬ್ಬಂದಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ತರಬೇತಿ ನೀಡಿದೆ. ವಿಕೋಪ ಸಂಭವಿಸಿದಲ್ಲಿ ಪರಿಹಾರಕ್ಕಾಗಿ ರು. 13.76 ಲಕ್ಷ ಹಣ ಕಾದಿರಿಸಿದ್ದು, ಮುಂಜಾಗ್ರತೆಗಾಗಿ ಗ್ರಾಮ ಲೆಕ್ಕಾಧಿಕಾರಿಗಳ ನೇತೃತ್ವದಲ್ಲಿ 35 ತಂಡಗಳನ್ನು ರಚಿಸಿರುವುದಾಗಿ ತಿಳಿಸಿದರು. ಉಪ ತಹಸೀಲ್ದಾರ್ ರಿತ್ತಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

