ಹಾವೇರಿ

ಜಾನಪದ ತಂಡಗಳಿಂದ ಅರ್ಜಿ ಆಹ್ವಾನ

Published On :

ಹಾವೇರಿ: ಪ್ರಸಕ್ತ ವರ್ಷ ವಾರ್ತಾ ಇಲಾಖೆಯಿಂದ ಹಮ್ಮಿಕೊಳ್ಳುವ ಗ್ರಾಮ ಸಂಪರ್ಕ ಕಾರ್ಯಕ್ರಮಕ್ಕಾಗಿ ಜಿಲ್ಲೆಯಲ್ಲಿ ಇರುವ ಜಾನಪದ ಕಲಾ ತಂಡಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರತಿಯೊಂದು ಬೀದಿ ಜಾನಪದ ಕಲಾ ತಂಡದಲ್ಲಿ ಕನಿಷ್ಠ 5 ಜನ ಕಲಾವಿದರು ಇರಬೇಕು. ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳ ಹಾಗೂ ಕಾರ್ಯಕ್ರಮಗಳನ್ನು ಈ ತಂಡಗಳು ತಮ್ಮ ಕಲೆ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ ಮುಟ್ಟಿಸಬೇಕಾಗುತ್ತದೆ.
ತಂಡಗಳನ್ನು ಆಯ್ಕೆ ಮಾಡುವಾಗ ಸರ್ಕಾರದ ಯೋಜನೆಗಳ ಹಾಗೂ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡುವ ತಂಡಗಳಿಗೆ ಪ್ರಾಶಸ್ತ್ಯ ನೀಡಲಾಗುವುದು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಚಿಸುವ ತಂಡದ ಮುಖ್ಯಸ್ಥರು ಸಹಾಯಕ ನಿರ್ದೇಶಕರು, ವಾರ್ತಾ ಇಲಾಖೆ, ಹಾವೇರಿ ಇವರಿಂದ ನಿಗದಿತ ಅರ್ಜಿ ನಮೂನೆ ಪಡೆದು ಜು. 15ರೊಳಗೆ ಅರ್ಜಿ ಭರ್ತಿ ಮಾಡಿ ಸಲ್ಲಿಸಬೇಕು. ತಂಡವು ಆಯ್ಕೆ ಸಮಿತಿ ಮುಂದೆ ಹಾಜರಾಗಿ ಪ್ರಾಯೋಗಿಕ ಕಾರ್ಯಕ್ರಮ ನೀಡಬೇಕಾಗುತ್ತದೆ. ಆಯ್ಕೆಗೆ ಬರುವ ಸಂದರ್ಭದಲ್ಲಿ ಕಲಾವಿದರು ತಮ್ಮ ಸ್ವಂತ ಖರ್ಚಿನಲ್ಲಿಯೇ ಬರಬೇಕು. ಹೆಚ್ಚಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕರು, ವಾರ್ತಾ ಇಲಾಖೆ, ಹಾವೇರಿ ಇವರಿಂದ (ದೂರವಾಣಿ: 08375- 233092) ಮಾಹಿತಿ ಪಡೆಯಬಹುದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.