ಸೌಲಭ್ಯ ಸದುಪಯೋಗವಾಗಲಿ
ಕನ್ನಡಪ್ರಭ ವಾರ್ತೆ, ರಾಣಿಬೆನ್ನೂರು, ಜು. 8
ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಪಡೆಯಲು ಸಹಕಾರಿಯಾಗಲೆಂದು ಸರ್ಕಾರ ವಿವಿಧ ಯೋಜನೆಗಳ ಹೆಸರಿನಲ್ಲಿ ಹಲವಾರು ರೀತಿ ಸೌಲಭ್ಯಗಳನ್ನು ನೀಡಿದ್ದು, ಸೌಲಭ್ಯ ಸದುಪಯೋಗಪಡಿಸಿಕೊಳ್ಳಬೇಕೆಂದು ಸಮರ್ಪಣ ಸಂಸ್ಥೆ ಅಧ್ಯಕ್ಷ ರಮೇಶ ಬಿಸಲಹಳ್ಳಿ ಹೇಳಿದರು.
ಗ್ರಾಮೀಣ ಪ್ರದೇಶದಲ್ಲಿನ ಪ್ರಾಥಮಿಕ ಶಾಲೆಗಳಲ್ಲಿ ಓದುವ ಮಕ್ಕಳಿಗೆ ತಮ್ಮ ಸಂಸ್ಥೆಯಿಂದ ಕಲಿಕೆಗೆ ಸಹಕಾರ ನೀಡುವುದಕ್ಕಾಗಿ ತಾಲೂಕಿನ ಗೋಡಿಹಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 50 ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಿ ಮಾತನಾಡಿದರು.
ಕಲಿಕೆ ಗುಣಮಟ್ಟ ಹೆಚ್ಚಳಕ್ಕಾಗಿ ಸರ್ಕಾರ ನೀಡುವ ಸೌಲಭ್ಯದ ಜತೆಗೆ ತಮ್ಮ ಸಂಸ್ಥೆಯ ಅಳಿಲು ಸೇವೆಯನ್ನು ಬಳಸಿಕೊಳ್ಳುವುದರೊಂದಿಗೆ ಗುಣಮಟ್ಟದ ಶಿಕ್ಷಣ ಪಡೆಯಲು ಮುಂದಾಗಬೇಕೆಂದು ವಿದ್ಯಾರ್ಥಿಗಳಿಗೆ ರಮೇಶ ಬಿಸಲಹಳ್ಳಿ ಕರೆ ನೀಡಿದರು.
ಸಮರ್ಪಣಾ ಸಂಸ್ಥೆ ಕಾರ್ಯದರ್ಶಿ ಲಿಂಗನಗೌಡ ಪಾಟೀಲ ಮಾತನಾಡಿ, ಪ್ರಸಕ್ತ ಸ್ಪರ್ಧಾತ್ಮಕ ಯುಗದಲ್ಲಿ ಪಾಲಕರು ತಮ್ಮ ಮಕ್ಕಳನ್ನು ಅಧ್ಯಯನದ ಕಡೆಗೆ ಹೆಚ್ಚು ಗಮನಕೊಡುವಂತೆ ನೋಡಿಕೊಂಡಲ್ಲಿ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ಪಾಸಾಗಲು ಸಾಧ್ಯವಾಗುತ್ತದೆ ಎಂದರು.
ಎಸ್‌ಡಿಎಂಸಿ ಅಧ್ಯಕ್ಷ ನಾಗಪ್ಪ ನಂದಿಹಳ್ಳಿ, ಉಪಾಧ್ಯಕ್ಷ ಹಾಲಪ್ಪ ಮಾಗನೂರು, ಮುಖ್ಯ ಗುರುಗಳಾದ ಜಿ.ವಿ. ಮಾಲತೇಶ, ಸಮರ್ಪಣಾ ಸಂಸ್ಥೆಯ ಸುನೀಲ್ ಎಸ್.ಪಿ., ಪ್ರಕಾಶ ಅಂಗಡಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

