ಪೂರಕ ಪರೀಕ್ಷೆ: 1068 ವಿದ್ಯಾರ್ಥಿಗಳು ಹಾಜರು
ಹಾವೇರಿ: ಜಿಲ್ಲೆಯಲ್ಲಿ ಮಂಗಳವಾರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು ಜಿಲ್ಲೆಯ ಎಂಟು ಪರೀಕ್ಷಾ ಕೇಂದ್ರಗಳಲ್ಲಿ ಸುವ್ಯವಸ್ಥಿತವಾಗಿ ಜರುಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಆರ್. ಕೊಣ್ಣೂರ ಅವರು ತಿಳಿಸಿದ್ದಾರೆ. ಒಟ್ಟು 1186 ವಿದ್ಯಾರ್ಥಿಗಳಲ್ಲಿ 1068 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 118 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿರುತ್ತಾರೆ. ಜಿಲ್ಲೆಯಲ್ಲಿ ಯಾವುದೇ ರೀತಿಯ ಪರೀಕ್ಷಾ ಅಕ್ರಮಗಳು ಜರುಗಿಲ್ಲ ಹಾಗೂ ಯಾವ ವಿದ್ಯಾರ್ಥಿಯೂ ಡಿಬಾರ್ ಆಗಿರುವುದಿಲ್ಲ ಎಂದು ತಿಳಿಸಿದ್ದಾರೆ.
ಬೈಕ್-ಬಸ್ ಡಿಕ್ಕಿ: ಇಬ್ಬರ ಸಾವು
ರಾಣಿಬೆನ್ನೂರು: ಬೈಕ್ ಮತ್ತು ಕ್ರುಸರ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ತಾಲೂಕಿನ ಚಳಗೇರಿ ಗ್ರಾಮದ ನಿವಾಸಿಗಳಾದ ಸೋಮರಡ್ಡಿ ವೆಂಕರೆಡ್ಡಿ ಕೆಂಚರಡ್ಡಿ (50) ಹಾಗೂ ಹಿಂದೆ ಕುಳಿತಿದ್ದ ಉಮೇಶ ಶಿವಾಜಿ ಭೋಸಲೆ (45) ಎಂಬುವವರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ತಾಲೂಕಿನ ಕುಮಾರಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಕವಲೆ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿಯ ಮೇಲೆ ಸೋಮವಾರ ರಾತ್ರಿ ಸಂಭವಿಸಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
ಅಪಘಾತ: ಸವಾರ ಸಾವು
ರಾಣಿಬೆನ್ನೂರು: ಬೈಕ್ ಸವಾರನೋರ್ವನಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ತಾಲೂಕಿನ ಹೊಸಹುಲಿಹಳ್ಳಿ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸೋಮವಾರ ರಾತ್ರಿ ನಡೆದಿದೆ. ಸಾವನ್ನಪ್ಪಿರುವ ಬೈಕ್ ಸವಾರನನ್ನು ದಾವಣಗೇರಿ ಜಿಲ್ಲೆಯ ಜಗಳೂರು ಗ್ರಾಮದ ಕೆ. ಜಕಣಾಚಾರಿ (40) ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಧಾವಿಸಿದ ರಾಣಿಬೆನ್ನೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

