ಮಕ್ಕಳನ್ನು ಮರಳಿ ಶಾಲೆಗೆ ಕರೆತನ್ನಿ
ಕನ್ನಡಪ್ರಭ ವಾರ್ತೆ, ಹಾನಗಲ್ಲ, ಜು. 9
ಶಿಕ್ಷಕರು ಮತ್ತು ಪಾಲಕರು ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ಸಾಲಿಮಠ ಹೇಳಿದರು.
ತಾಲೂಕಿನ ಬೆಳಗಾಲಪೇಟೆ ಸರ್ಕಾರಿ ಹಿರಿಯ ಹೆಣ್ಣು ಮಕ್ಕಳ ಶಾಲೆಯಲ್ಲಿ ನಡೆದ ಅರಳೇಶ್ವರ ಮತ್ತು ಬೆಳಗಾಲಪೇಟೆ ಕ್ಲಸ್ಟರ್ನ ಸಮಾಲೋಚನ ಸಭೆಯಲ್ಲಿ ಮಾತನಾಡಿದ ಅವರು, ಶಿಕ್ಷಕ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದರೆ ಸಮಾಜ ಅವರನ್ನು ಗೌರವಿಸುತ್ತದೆ. ಸರ್ಕಾರ ಶಿಕ್ಷಣಕ್ಕಾಗಿ ನೂತನ ಕಾನೂನು ಜಾರಿಗೊಳಿಸುತ್ತಿದೆ. ಇದಕ್ಕೆ ತಪ್ಪಿದಲ್ಲಿ ಶಿಕ್ಷಕರೂ ಶಿಕ್ಷೆಗೆ ಗುರಿಯಾಗುವ ಸಾಧ್ಯತೆಗಳಿವೆ. ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ನೂರಾರು ಕೋಟಿ ರು. ಅನುದಾನ ಬಿಡುಗಡೆಗೊಳಿಸುತ್ತದೆ. ಗುಣಮಟ್ಟದ ಶಿಕ್ಷಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇವೆಲ್ಲ ಮಕ್ಕಳನ್ನು ಪ್ರಾಮಾಣಿಕವಾಗಿ ತಲುಪಿದರೆ ಮಾತ್ರ ಸರ್ಕಾರದ ಶ್ರಮ ಸಾರ್ಥಕವಾಗುತ್ತದೆ. ಸರ್ಕಾರ ಬಿಡುಗಡೆಗೊಳಿಸಿದ ಅನುದಾನವನ್ನು ಪಾರದರ್ಶಕವಾಗಿ ಸದ್ವಿನಿಯೋಗಪಡಿಸಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಸಭೆಯಲ್ಲಿ ಭಾಗವಹಿಸಿದ ಎಲ್ಲ ಶಿಕ್ಷಕರು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ಸಾಲಿಮಠ ಅವರ ಸಮ್ಮುಖದಲ್ಲಿ ಶಾಲೆ ಬಿಟ್ಟ ಯಾವುದೇ ಮಗುವೂ ಶಾಲೆಯಿಂದ ಹೊರಗುಳಿಯದಂತೆ ಶ್ರಮವಹಿಸಿ ಶಾಲೆಗೆ ಕರೆ ತರುತ್ತೇವೆ ಎಂದು ಪ್ರತಿಜ್ಞೆ ಮಾಡಿದರು.
ಸಂಪನ್ಮೂಲ ವ್ಯಕ್ತಿಗಳಾದ ಸುರೇಶಬಾರ್ಕಿ, ಪಿ.ಎಂ. ಚಲವಾದಿ, ಶಿಕ್ಷಕ ಟಿ. ಶಿವಕುಮಾರ್, ಜೆ.ಎಸ್. ಶಿಡ್ಲಾಪುರ, ಎಸ್.ಕೆ. ದೊಡ್ಡಮನಿ, ಎಸ್.ಬಿ. ಸಣ್ಣಿಂಗಮ್ಮನವರ್, ಗಿರೀಶ್ ನೆಲ್ಲಿಕೊಪ್ಪ, ಅನಿಲ್ಕುಮಾರ್ ಗೊಣೆಣ್ಣನವರ್, ಪ್ರಭಾ ಪಾಂಡುರಂಗ, ಎನ್.ಎಸ್. ಮುಶಣ್ಣನವರ್, ಶ್ರೀನಿವಾಸ್ ದಿಕ್ಷೀತ್, ಎಸ್.ಎಸ್. ಕೊಪ್ಪದ, ಗೀತಾ ಚಿಕ್ಕಣ್ಣನವರ್, ಸಿ.ಜಿ. ದೊಡ್ಡಗೌಡರ, ಎಲ್.ಪಿ. ಬೇವಿನಮರದ, ಗೀತಾ ನಾಗನಗೌಡರ, ಗೀತಾ ಚಕ್ರಸಾಲಿ, ಎಂ.ಎನ್. ಮಂಜುಳಾ, ಎಸ್.ಕೆ. ದೊಡ್ಡಮನಿ, ಆನಂದ ಚನ್ನಗಿರಿ ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

