ಡಿಪ್ಲೊಮಾತರಬೇತಿಗೆ ಅರ್ಜಿಆಹ್ವಾನ
ಹಾವೇರಿ: ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ಯು ಕಳೆದ 16 ವರ್ಷಗಳಿಂದ ಈ ಭಾಗದ ಯುವಕರಿಗೆ ಉನ್ನತ ಕೌಶಲ್ಯಾಧಾರಿತ ತಾಂತ್ರಿಕ ತರಬೇತಿಗಳನ್ನು ನಡೆಸುತ್ತಿದೆ.
ಈ ಸಂಸ್ಥೆಯು ಪ್ರಸಕ್ತ ಸಾಲಿಗೆ ಐಟಿಐ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಗೆ 2ನೇ ವರ್ಷದ ಡಿಪ್ಲೋಮಾ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್ ಮತ್ತು ಡಿಪ್ಲೋಮಾ ಇನ್ ಪ್ರಿಶಿಷನ್ ಮ್ಯಾನುಫ್ಯಾಕ್ಚರಿಂಗ್ ಕೋರ್ಸ್ಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಈ ಕೋರ್ಸ್ಗಳಿಗೆ ಕರ್ನಾಟಕ ಸರ್ಕಾರ ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತಿನ (ಎಐಸಿಟಿಇ) ಮಾನ್ಯತೆ ಇದೆ. ಲ್ಯಾಟರಲ್ ಎಂಟ್ರಿ ಸ್ಕೀಂ ಮೂಲಕ ಪ್ರವೇಶ ಪಡೆಯುವ ಅಭ್ಯರ್ಥಿಗಳಿಗೆ ಈ ತರಬೇತಿಗಳು 21 ವರ್ಷ ಅವಧಿಯದಾಗಿರುತ್ತದೆ. ಮೊದಲ 2 ವರ್ಷ ಸಂಸ್ಥೆಯಲ್ಲಿ ತರಬೇತಿ ನೀಡಲಾಗುವುದು. 3ನೇ ವರ್ಷ, ಪ್ರತಿಷ್ಠಿತ ಕೈಗಾರಿಕೆಗಳಲ್ಲಿ ಇನ್ಪ್ಲಾಂಟ್ ಟ್ರೈನಿಂಗ್ಗಾಗಿ ಕಳುಹಿಸಲಾಗುವುದು. ಈ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಆಕರ್ಷಕ ಸ್ಟೈಫಂಡ್ ಮತ್ತು ಇನ್ನಿತರ ಸೌಲಭ್ಯಗಳನ್ನು ದೊರೆಯುತ್ತವೆ. ಈ ತರಬೇತಿಗೆ ಸೇರುವ ಅರ್ಹ ಅಭ್ಯರ್ಥಿಗಳಿಗೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಶಿಕ್ಷಣ ಸಾಲದ ಸಹಾಯ ಕೂಡ ದೊರೆಯುತ್ತದೆ. ತರಬೇತಿ ನಂತರ ಉನ್ನತ ವಿದ್ಯಾಭ್ಯಾಸದ ಅವಕಾಶಗಳೂ ಉಂಟು. ಈ ತರಬೇತಿಗಳು ಇನ್ನಿತರ ಡಿಫ್ಲೊಮಾ ಕೋರ್ಸ್ಗಳಿಗಿಂತ ವಿಭಿನ್ನವಾಗಿದ್ದು, ಆನ್ ಜಾಬ್ ತರಬೇತಿ ಹೊಂದಿರುತ್ತವೆ. ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಉದ್ಯೋಗ ದೊರಕಿಸಿಕೊಟ್ಟ ದಾಖಲೆ ಸಂಸ್ಥೆಗಿದೆ.
ಜಿಟಿಟಿಸಿಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ಇಂದು ದೇಶ, ವಿದೇಶಗಳಲ್ಲಿ ಉದ್ಯೋಗ ಮಾಡುತ್ತಿದ್ದಾರೆ.
ಸಾಕಷ್ಟು ವಿದ್ಯಾರ್ಥಿಗಳು ಸ್ವಂತ ಉದ್ಯಮ ಮುನ್ನಡೆಸುತ್ತಿದ್ದಾರೆ. ಎರಡು ವರ್ಷದ ಐಟಿಐ ಕೋರ್ಸ್ಗಳಾದ ಡ್ರಾಫ್ಟ್ಸ್ಮನ್ ಮೆಕ್ಯಾನಿಕಲ್), ಫಿಟ್ಟರ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್, ಮಶಿನಿಸ್ಟ, ಮೆಕ್ಯಾನಿಕ್ (ಮೋಟರ್ ಧಾರವಾಡದ ರಾಯಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಸರ್ಕಾರಿ ವೆಹಿಕಲ್), ಮೆಕ್ಯಾನಿಕ್ (ಮಶಿನ್ ಟೂಲ್ ಮೆಂಟೆನನ್ಸ್), ಟರ್ನರ್, ಟೂಲ್ ಡೈ ಮೇಕಿಂಗ್, ಪ್ರೊಡಕ್ಷನ್ ಮ್ಯಾನುಫ್ಯಾಕ್ಚರಿಂಗ್ ಮತ್ತು ಫ್ಯಾಬ್ರಿಕೇಶನ್ನಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ ಡಿಪ್ಲೋಮಾ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್ಗೆ ಒಟ್ಟು 10 ಮತ್ತು ಡಿಪ್ಲೋಮಾ ಇನ್ ಪ್ರಿಶಿಷನ್ ಮ್ಯಾನುಫಾಕ್ಚರಿಂಗ್ಗೆ ಒಟ್ಟು 6 ಸೀಟುಗಳನ್ನು ಕಾದಿರಿಸಲಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಾತಿ ಕೂಡ ಇರುತ್ತದೆ. ಅಭ್ಯರ್ಥಿಗಳನ್ನು ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು 16 ಜುಲೈ, 2013 ಕೊನೆಯ ದಿನವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

