ಹಾವೇರಿ

ಕಾಲೇಜುಗಳಿಗೆ ಸೌಲಭ್ಯ ಕಲ್ಪಿಸಿ

Published On :

ಹಾವೇರಿ: ಜಿಲ್ಲೆಯ ಸರ್ಕಾರ ಪದವಿಪೂರ್ವ, ಪದವಿ ಕಾಲೇಜುಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿಗಳು ನಗರದ ಮುನ್ಸಿಪಲ್ ಮೈದಾನದಲ್ಲಿರುವ ಸರ್ಕಾರಿ ಪಿಯು ಕಾಲೇಜಿನಿಂದ ಮೆರವಣಿಗೆ ಆರಂಭಿಸುವ ಮೂಲಕ ಪ್ರತಿಭಟನೆ ನಡೆಸಿ ಉಪತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ರವಾನಿಸಲಾಯಿತು.
ಜಿಲ್ಲಾ ಕೇಂದ್ರವಾದ ಹಾವೇರಿ ನಗರದಲ್ಲಿ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ಸ್ವಂತ ಕಟ್ಟಡ, ಅಗತ್ಯ ಮೂಲಸೌಲಭ್ಯಗಳಾದ ಕುಡಿಯುವ ನೀರು, ಶೌಚಾಲಯ, ಬೋಧಕ, ಬೋಧಕೇತರ ಸಿಬ್ಬಂದಿ ಕೊರತೆಯಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಸ್ವಂತ ಕಟ್ಟಡವಿದ್ದರೂ ಇಲ್ಲದಂತಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಈ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ 38 ಸಾವಿರ ಶಿಕ್ಷಕರ ಹುದ್ದೆ ಮತ್ತು ಶೇ. 27ರಷ್ಟು ಕಾಲೇಜು ಹಾಗೂ ವಿ.ವಿ. ಪ್ರಾಧ್ಯಾಪಕರ ಹುದ್ದೆಗಳು ಖಾಲಿ ಇವೆ. ಶೇ. 68 ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳಿಲ್ಲ. ಕುಡಿಯುವ ನೀರು, ಗ್ರಂಥಾಲಯ, ಆಟದ ಮೈದಾನಗಳಿಲ್ಲದೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಡ್ಡಿಯಾಗಿದೆ. ರಾಜ್ಯದ 11 ಲಕ್ಷ ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದಿದ್ದಾರೆ. ಆದ್ದರಿಂದ ರಾಜ್ಯದ ಎಲ್ಲ ಶಾಲಾ, ಕಾಲೇಜು, ವಿವಿ ಹಾಗೂ ಹಾಸ್ಟೆಲ್‌ಗಳಿಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಮುಂದಾಗಬೇಕು. ರಾಜ್ಯದಲ್ಲಿ ಅರ್ಜಿ ಹಾಕಿದ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಸಿಗುತ್ತಿಲ್ಲ. ಹಾಸ್ಟೆಲ್‌ಗಳಲ್ಲಿ ಕನಿಷ್ಠ ಮೂಲಸೌಕರ್ಯಗಳಿಲ್ಲ. ಪೌಷ್ಟಿಕ ಆಹಾರ ಸಿಗುತ್ತಿಲ್ಲ. ಹಾಸ್ಟೆಲ್ ವಿದ್ಯಾರ್ಥಿಗಳ ಆಹಾರ ಭತ್ಯೆಗೆ ಸರ್ಕಾರ ಕಡಿಮೆ ಹಣ ನೀಡುತ್ತಿದೆ. ಸಮರ್ಪಕವಾಗಿ ವಿದ್ಯಾರ್ಥಿ ವೇತನ ಬಿಡುಗಡೆಯಾಗುತ್ತಿಲ್ಲ. ಹೀಗಾಗಿ ಹಾಸ್ಟೆಲ್ ವಿದ್ಯಾರ್ಥಿಗಳು ಸಂಕಷ್ಟಗಳಲ್ಲಿದ್ದಾರೆ. ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಹೇಳಿದರು.
ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಪೂಜಾರ, ವಿನಾಯಕ ವೈ, ಮಾಲತೇಶ ಗಿರಿಯಪ್ಪನವರ, ಶಾಂತಾ, ಕಾಲೇಜು ಘಟಕದ ಪದಾಧಿಕಾರಿಗಳಾದ ಮೃತ್ಯುಂಜಯ ಕುಲಕರ್ಣಿ, ಅಭಿಷೇಕ ಹೂಗಾರ, ಶ್ರೀಕಾಂತ ಮಲ್ಲಾಡದ, ಕಿರಣ ನೀರಲಗಿ, ಗಣೇಶ ಬಿಸೆ, ಮಂಜುನಾಥ ಕೋರಿ, ಗೋವಿಂದರಾಜ ಹಾಲಗಿ, ಡಿಳ್ಳೆಪ್ಪ ಯಲಗಚ್, ನಾಗರಾಜ ಬಾರ್ಕಿ, ಶಂಕ್ರಪ್ಪ ಲಮಾಣಿ, ವಿಜಯ ಕಾಂಬ್ಳೆ ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.