ಹಾವೇರಿ

ಗ್ರಾಮೀಣ ಅಭಿವೃದ್ಧಿಗೆ ಖಾತ್ರಿ ಯೋಜನೆ ಪೂರಕ

Published On :

ಹಿರೇಕೆರೂರು: ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯು ಗ್ರಾಮೀಣ ಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದ್ದು, ಗ್ರಾಮದ ಜನತೆಗೆ ವರ್ಷದಲ್ಲಿ 100 ದಿನ ಉದ್ಯೋಗ ಸೃಷ್ಟಿಸುವ ಮೂಲಕ ಗ್ರಾಮಾಂತರ ಪ್ರದೇಶದ ಜನರಿಗೆ ವರದಾನವಾಗಿದೆ. ಈ ಮೂಲಕ ಗ್ರಾಮೀಣ ಜನತೆಗೆ ಅನುಕೂಲವಾಗಿದೆ ಎಂದು ಸಾಮಾಜಿಕ ಲೆಕ್ಕ ಪರಿಶೋಧಕ ಜೆ.ಪಿ. ಮಹೇಶ ತಿಳಿಸಿದರು.
ತಾಲೂಕಿನ ಕಡೂರು ಗ್ರಾಮ ಪಂಚಾಯತಿಯಲ್ಲಿ ಜರುಗಿದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಮೊದಲ ಸುತ್ತಿನ ಸಾಮಾಜಿಕ ಲೆಕ್ಕ ಪರಿಶೋಧನೆಯ ವಿಶೇಷ ಗ್ರಾಮ ಸಭೆಯನ್ನುದ್ದೇಶಿ ಮಾತನಾಡಿದರು.
ಸಾಮಾಜಿಕ ಲೆಕ್ಕ ಪರಿಶೋಧನೆಯು ಕಾಮಗಾರಿಗಳ ಕಡತಗಳ ಪರೀಶೀಲನೆ, ಜಾಬ್ ಕಾರ್ಡ್ ಪಡೆದ ಕೂಲಿ ಕಾರ್ಮಿಕರ ಮನೆಗಳ ಭೇಟಿ, ಯೋಜನೆಗಳ ಹಂತ, ಯೋಜನಾ ಕಾಮಗಾರಿ ಶ್ಯಾಂಪಲ್ ಹೊಂದಿರುವುದು ಹಾಗೂ ಯೋಜನೆಯಿಂದ ಸಾರ್ವಜನಿಕರಿಗೆ ಆಗಿರುವ ಉಪಯೋಗ ಮೊದಲಾದವನ್ನು ಪರಿಶೀಲಿಸುವುದಾಗಿದೆ ಎಂದು ತಿಳಿಸಿದರು. ಗ್ರಾಪಂ ಅಧ್ಯಕ್ಷೆ ಕಾಮಕ್ಕ ಹಿರೇಕುರುಬರ ಅಧ್ಯಕ್ಷತೆ ವಹಿಸಿದ್ದರು. ಪಿಡಿಒ ಕೆ.ಜಿ. ಅಡವೇರ, ಮಾಜಿ ಅಧ್ಯಕ್ಷ ಶೇಕಣ್ಣ ಶೇತಸನದಿ, ಎಚ್.ಎಚ್. ಪಾಟೀಲ, ಲೆಕ್ಕಿಗ ಶಿದ್ಲಿಂಗಪ್ಪ ಕೆಂಗಣ್ಣನವರ, ಪಂಚಾಯಿತಿ ಸದಸ್ಯರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.