ಹಾವೇರಿ

ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳಿ: ರುದ್ರಪ್ಪ ಲಮಾಣಿ

Published On :

ಹಾವೇರಿ: ಉತ್ತಮ ಭವಿಷ್ಯ ರೂಪಗೊಳ್ಳಲು ವಿದ್ಯಾರ್ಥಿಗಳು ಪಠ್ಯಕ್ಕೆ ಪೂರಕವಾಗುವಂತಹ ಪಠ್ಯೇತರ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಬೇಕು ಎಂದು ಶಾಸಕ ರುದ್ರಪ್ಪ ಲಮಾಣಿ ಹೇಳಿದರು. ಅವರು ಸ್ಥಳೀಯ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜ್‌ನ ಎನ್‌ಎಸ್‌ಎಸ್ ಹಾಗೂ ಸಹ ಪಠ್ಯ ಚಟುವಟಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.  ಕೇವಲ ಪಠ್ಯ ಪುಸ್ತಕದಲ್ಲಿರುವ ವಿಷಯಗಳಿಂದ ಎಲ್ಲವನ್ನು ಸಾಧಿಸಿದಂತೆ ಆಗಲ್ಲ. ಪಠ್ಯಕ್ಕೆ ಪೂರಕವಾದಂತಹ ವಿಷಯಗಳನ್ನು ಅರಿತಾಗಲೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದರಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳ ಭವಿಷ್ಯ ರೂಪಗೊಳ್ಳಲು ಸಾಧ್ಯವಾಗುತ್ತದೆ ಎಂದರು. ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಅವಶ್ಯಕವಿರುವ ಎಲ್ಲ ಮೂಲ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವದು ಎಂದು ಭರವಸೆ ನೀಡಿದರು. ನಗರಸಭಾ ಸದಸ್ಯ ಸಂಜೀವಕುಮಾರ ನೀರಲಗಿ, ಪ್ರಸಕ್ತ ಸರ್ಕಾರಿ ಕಾಲೇಜುಗಳಲ್ಲಿ ಖಾಸಗಿ ಕಾಲೇಜುಗಳಲ್ಲಿ ಸಿಗುವ ಶಿಕ್ಷಣಕ್ಕಿಂತ ಉತ್ತಮ ಶಿಕ್ಷಣ ನೀಡುತ್ತಿವೆ. ಇಲ್ಲಿ ಸಿಗುವ ಶಿಕ್ಷಣ ಪಡೆದುಕೊಳ್ಳುವತ್ತ ಯುವ ಪೀಳಿಗೆ ಹೆಚ್ಚು ಗಮನ ಕೊಡಬೇಕೆಂದರು.  ಪ್ರಾಚಾರ್ಯ ಎಚ್.ಎಸ್. ಚಿನ್ನಿಕಟ್ಟಿ ಸ್ವಾಗತಿಸಿದರು. ಎನ್‌ಎಸ್‌ಎಸ್ ಅಧಿಕಾರಿ ಆರ್.ಕೆ. ಅಂಬೋರೆ ಪ್ರಾಸ್ತಾವಿಕ ಮಾತನಾಡಿದರು. ಎಸ್.ಬಿ. ದೊಡ್ಡಮನಿ ನಿರೂಪಿಸಿದರು. ಜಿ.ಪಿ. ಪೂಜಾರ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.