ಜಾನುವಾರು: ಲಸಿಕೆ ಹಾಕಿಸಿ
ಹಾವೇರಿ: ರೈತರು ಜಾನುವಾರುಗಳಿಗೆ ಗಂಟಲು ಬೇನೆ, ಚಪ್ಪಿಬೇನೆ ಹಾಗೂ ಕರಳು ಬೇರೆ ರೋಗಗಳು ಬಾರದಂತೆ ಮುಂಜಾಗ್ರತಾ ಕ್ರಮವಾಗಿ ಲಸಿಕೆ ಹಾಕಿಸಬೇಕೆಂದು ಪಶುಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ಸಹಾಯಕ ನಿರ್ದೇಶಕ ಡಾ. ರಾಜು ಕೊಲೇರ ಸೂಚನೆ ನೀಡಿದ್ದಾರೆ. ಈ ಲಸಿಕೆಯು ಉಚಿತವಾಗಿದ್ದು, ಕೂಡಲೇ ರೈತರು ತಮ್ಮ ಜಾನುವಾರುಗಳನ್ನು ಪ್ರಾಣಾಪಾಯದಿಂದ ರಕ್ಷಿಸಿಕೊಳ್ಳಬೇಕು. ಆಯಾ ಗ್ರಾಮಕ್ಕೆ ಸಂಬಂಧಿಸಿದ ಪಶು ವೈದ್ಯ ಸಂಸ್ಥೆಗಳ ಅಧಿಕಾರಿ ಹಾಗೂ ಸಿಬ್ಬಂದಿಯಿಂದ ಜಾನುವಾರು, ಕುರಿ ಹಾಗೂ ಮೇಕೆಗಳಿಗೆ ಲಸಿಕೆ ಹಾಕಿಸಬೇಕೆಂದು ತಿಳಿಸಿದ್ದಾರೆ.
19ರಂದು ಗ್ರಾಮ ಸಭೆ
ಹಾವೇರಿ: ಪ್ರಸಕ್ತ ಸಾಲಿನ ಮೊದಲನೇ ತ್ರೈಮಾಸಿಕ ಗ್ರಾಮ ಸಭೆ ಜು.19ರಂದು ಬೆಳಗ್ಗೆ 11ಕ್ಕೆ ಅಗಡಿ ಗ್ರಾಮ ಪಂಚಾಯಿತಿ ಆವರಣ ಹಾಗೂ ಮಧ್ಯಾಹ್ನ 2ಕ್ಕೆ ಜಂಗಮನಕೊಪ್ಪ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಜರುಗಲಿದೆ ಎಂದು ಗ್ರಾಪಂ ಅಭಿವೃದ್ಧಿ ಅಧಿಕಾರಿ ಕೆ.ವಿ. ಕಳ್ಳೇರ ತಿಳಿಸಿದ್ದಾರೆ.
ನಾಳೆ ವಿದ್ಯುತ್ ವ್ಯತ್ಯಯ
ಹಾವೇರಿ: ಗುತ್ತಲ 110 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವದರಿಂದ ಜು. 17ರಂದು ಬೆಳಗ್ಗೆ 9ರಿಂದ ಸಂಜೆ 5ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಗುತ್ತಲದಿಂದ ವಿದ್ಯುತ್ ಪೂರೈಕೆಯಾಗುವ ನೀರಲಗಿ ಹಾಗೂ ನೀರಲಗಿ ಸುತ್ತ ಮುತ್ತಲಿನ ಗ್ರಾಮಗಳು, ಹೊಸರಿತ್ತಿ ಹಾಗೂ ಹೊಸರಿತ್ತಿ ಸುತ್ತಲಿನ ಗ್ರಾಮಗಳು, ಗುತ್ತಲ ಹಾಗೂ ಗುತ್ತಲ ಸುತ್ತಲಿನ ಗ್ರಾಮಗಳು ಮತ್ತು ಹಾವೇರಿ ಕುಡಿಯುವ ನೀರಿನ ಸ್ಥಾವರ, ಲಕ್ಷ್ಮೇಶ್ವರ ಕುಡಿಯುವ ನೀರಿನ ಸ್ಥಾವರಗಳಿಗೆ ವಿದ್ಯುತ್ ಸರಬರಾಜು ಇರುವದಿಲ್ಲ. ಸಾರ್ವಜನಿಕರು ಹಾಗೂ ಸದರಿ ಫೀಡರಗಳ ವ್ಯಾಪ್ತಿಗೆ ಬರುವ ಎಲ್ಲ ಗ್ರಾಹಕರು ಸಹಕರಿಸಬೇಕೆಂದು ಹೆಸ್ಕಾಂನ ಹಾವೇರಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಓ.ಎಸ್. ಶಶಿಧರ ವಿನಂತಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

