ಹಾವೇರಿ

ರಾಮಣ್ಣ ಬ್ಯಾಡಗಿ ಬಿಜೆಪಿ ತಾಲೂಕಾಧ್ಯಕ್ಷ

Published On :

ಬ್ಯಾಡಗಿ: ಬಿಜೆಪಿ ತಾಲೂಕು ಘಟಕದ ಅಧ್ಯಕ್ಷರಾಗಿ ರಾಮಣ್ಣ ಉಕ್ಕುಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಕುರಿತು ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ರಾಮಣ್ಣ ಉಕ್ಕುಂದ ಅವರನ್ನು ಸರ್ವ ಸದಸ್ಯರು ಸರ್ವಾನುಮತದಿಂದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರು.
ಬಳಿಕ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನೆಡೆಯಾಗಿದ್ದು ತಾಲೂಕಿನಲ್ಲಿ ಬಿಜೆಪಿ ಸದೃಢವಾಗಿ ಬೆಳೆಸಿ ಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸೋಮಣ್ಣ ಬೇವಿನಮರದ ಮಾತನಾಡಿ, ಪಕ್ಷದ ಸಂಘಟನೆಗೆ ನೂತನ ಪದಾಧಿಕಾರಿಗಳು ಸಿದ್ಧರಾಗಬೇಕು.
ಮತಕ್ಷೇತ್ರದಲ್ಲಿರುವ ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವ ಮೂಲಕ ಪಕ್ಷವನ್ನು ಬಲ ಪಡಿಸುವಂತೆ ಕರೆ ನೀಡಿದರು.
ಬಿಜೆಪಿ ಮುಖಂಡ ವಿರೂಪಾಕ್ಷಪ್ಪ ಬಳ್ಳಾರಿ, ಮಾಜಿ ಅಧ್ಯಕ್ಷ ಚಂದ್ರಣ್ಣ ಮುಚ್ಚಟ್ಟಿ, ಶಂಕರಗೌಡ ಪಾಟೀಲ, ವಿರೇಂದ್ರ ಶೆಟ್ಟರ್, ಬಸವರಾಜ ಬಂಗೇರ, ಮಲ್ಲಿಕಾರ್ಜುನ ದೊಡ್ಮನಿ, ಚಿನಿವಾಗಲಗಟ್ಟಿ ಹಾಗೂ ಇನ್ನಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.