28ರಂದು ಸಮುಚ್ಚಯ ಉದ್ಘಾಟನೆ, ಸನ್ಮಾನ
ಬ್ಯಾಡಗಿ: ತುಮಕೂರು ಜಿಲ್ಲೆ ಎಡೆಯೂರು ಶ್ರೀಕ್ಷೇತ್ರದಲ್ಲಿ ತೋಂಟದ ಶ್ರೀ ಸಿದ್ಧಲಿಂಗೇಶ್ವರ ಕೈಂಕರ್ಯ (ದಾಸೋಹ) ಸೇವಾ ಸಂಘದ ವತಿಯಿಂದ ನಿರ್ಮಿಸಲಾಗಿರುವ ಶ್ರೀ ಸಿದ್ಧಲಿಂಗ ಭಕ್ತರ ವಸತಿ ಸಮುಚ್ಚಯ ಉದ್ಘಾಟನೆ ಕಾರ್ಯಕ್ರಮ ಹಾಗೂ ದಾನಿಗಳಿಗೆ ಸನ್ಮಾನ ಸಮಾರಂಭ ಜು. 28ರಂದು ಬೆಳಗ್ಗೆ 10 ಗಂಟೆಗೆ ಜರುಗಲಿದೆ. ತ್ರಿವಿಧ ದಾಸೋಹ ಮೂರ್ತಿ ಕರ್ನಾಟಕ ರತ್ನ ಸಿದ್ಧಗಂಗಾ ಮಠದ ಡಾ ಶ್ರೀ ಶಿವಕುಮಾರ ಮಹಾಸ್ವಾಮಿಗಳು ಸಮುಚ್ಚಯ ಉದ್ಘಾಟಿಸಲಿದ್ದು, ಗದುಗಿನ ತೋಂಟದ ಸಿದ್ಧಲಿಂಗ ಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಸುತ್ತೂರ ಮಠದ ಡಾ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಆದಿಚುಂಚನಗಿರಿಮಠ ಶ್ರೀ ನಿರ್ಮಲಾನಂದನಾಥ ಸ್ವಾಮಿಗಳು ಅತಿಥಿಗಳಾಗಿ ಉಪಸ್ಥಿತರಿರುವರು. ಕಾರಣ ಭಕ್ತರು ಹಾಗೂ ದಾನಿಗಳು ತಪ್ಪದೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸಾಲಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಲಮನ್ನಾ ಮಾಡದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನರಗುಂದ: ರಾಜ್ಯದಲ್ಲಿ 3 ವರ್ಷದಿಂದ ಭೀಕರ ಬರಗಾಲ ಇರುವುದರಿಂದ ಎಲ್ಲ ರೈತರ ಸಾಲ ಮನ್ನಾ ಮಾಡಬೇಕು. ಇಲ್ಲವಾದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದರು. ಭಾನುವಾರ ಹುತಾತ್ಮ ರೈತ ಈರಪ್ಪ ಕಡ್ಲಿಕೋಪ್ಪ ಅವರ ವೀರಗಲ್ಲಿಗೆ ಮಾಲಾರ್ಪಣೆ ಮಾಡಿ, ನಂತರ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದರು. ಈ ರಾಜ್ಯವನ್ನು ಹೆಚ್ಚು ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರ ಆಳಿದೆ. ಈ ಸರ್ಕಾರ ಇಷ್ಟು ವರ್ಷಗಳಲ್ಲಿ ರೈತರಿಗೆ ಏನೂ ಮಾಡದೇ, ಕೇವಲ ತಮ್ಮ ವೋಟ್ ಬ್ಯಾಂಕ್ಗಾಗಿ ರೈತರನ್ನು ಬಳಸಿಕೊಳ್ಳುತ್ತಾ ಬಂದಿದ್ದಾರೆ ಎಂದು ಆರೋಪಿಸಿದರು. ಕಳಸಾ-ಬಂಡೂರಿ ಹೋರಾಟ ಸಮಿತಿ ಅಧ್ಯಕ್ಷ ವಿಜಯ ಕುಲಕರ್ಣಿ ಮಾತನಾಡಿ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕಳಸಾ ಬಂಡೂರಿ-ಹೋರಾಟ ಸಮಿತಿ ಒಂದಾಗಿ ಮುಂದಿನ ದಿನಗಳಲ್ಲಿ ಹೋರಾಟ ಮಾಡಲು ಕೂಡಿಕೊಂಡಿದ್ದೇವೆ. ಕಳಸಾ-ಬಂಡೂರಿ ಸೇರಿದಂತೆ ರಾಜ್ಯದ ಎಲ್ಲ ಭಾಗದ ರೈತರ ನೀರಾವರಿ ಯೋಜನೆಗಳ ಪರವಾಗಿ ಹೋರಾಟ ಮಾಡಲಾಗುವುದು ಎಂದರು. ಎಚ್.ಆರ್. ಬಸವರಾಜಪ್ಪ, ಅನಸೂಯಮ್ಮ, ಬಸವರಾಜ ಮಳಲಿ ಮಾತನಾಡಿದರು. ಡಾ. ಬಿ.ಎಂ. ಚಿಕ್ಕಸ್ವಾಮಿ, ಕಡಿದಾಳ ಶಾಮಣ್ಣ, ತೇರಿಕೆರೆ ಮಹೇಶ, ಕುರವ ಗಣೇಶ, ಮುನಿಯಪ್ಪ, ಬಿ.ಎಸ್. ದೇವರಾಜ್, ಕುಮಾರ ಸುಬ್ರಮಣ್ಯ ಶಾಸ್ತ್ರಿ, ಡಾ. ಚೌಕಿಮಠ, ಬಸವರಾಜ ಸಾಬಳೆ ಸೇರಿದಂತೆ ರೈತರು ಪಾಲ್ಗೊಂಡಿದ್ದರು. ರಾಜ್ಯದಲ್ಲಿ ರೈತ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ. ಪ್ರತಿ ಗ್ರಾಮದಲ್ಲಿ ಚಳವಳಿ ಪ್ರಾರಂಭ ಮಾಡಲು ರೈತ ನಾಯಕರು ತೀರ್ಮಾನ ತೆಗೆದುಕೊಂಡರು. ಕೋಲಾರ, ಬಾಗಲಕೋಟೆ, ಬೈಲಹೊಂಗಲ, ತುಮಕೂರ, ಬಿಜಾಪುರ ಇನ್ನೂ ಬೇರೆ ಜಿಲ್ಲೆಗಳಿಂದ ಸಾವಿರಾರು ರೈತರು, ರೈತ ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

