ಸುದ್ದಿ ಸಂಕ್ಷೇಪ
ಅರ್ಜಿ ಅವಧಿ ವಿಸ್ತರಣೆ
ಹಾವೇರಿ: ಪ್ರಸಕ್ತ ಸಾಲಿಗೆ ಜಿಲ್ಲೆಯ ಮತೀಯ ಅಲ್ಪಸಂಖ್ಯಾತರರಾದ ಮುಸ್ಲಿಂ, ಬೌದ್ಧ, ಪಾರ್ಸಿ, ಸಿಖ್, ಜೈನ್, ಕ್ರಿಶ್ಚಿಯನ್ ಹಾಗೂ ಆಂಗ್ಲೋ ಇಂಡಿಯನ್ ಜಾತಿಗೆ ಸೇರಿದ ಇಬ್ಬರು ಕಾನೂನು ಪದವಿಧರರಿಗೆ ಹಾಗೂ ಹಿಂದುಳಿದ ವರ್ಗಗಳಾದ ಪ್ರವರ್ಗ-1, ಪ್ರವರ್ಗ-2ಎ, 3ಎ ಹಾಗೂ 3ಬಿ ಮೀಸಲಾತಿಯನ್ವಯ 10 ಕಾನೂನು ಪದವಿಧರರಿಗೆ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾನೂನು ತರಬೇತಿ ನೀಡಲು ಅರ್ಜಿ ಸಲ್ಲಿಸಲು 19 ಆಗಸ್ಟ್, 2013ರವರೆಗೆ ಅವಧಿ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಹಾವೇರಿ ಜಿಲ್ಲೆಯವರಾಗಿರಬೇಕು ಹಾಗೂ ಬಾರ್ ಕೌನ್ಸಿಲ್ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಬೇಕು. ಈ ತರಬೇತಿಯು ನಾಲ್ಕು ವರ್ಷಗಳಾಗಿದ್ದು, ತರಬೇತಿಯನ್ನು ಮಧ್ಯದಲ್ಲಿ ಬಿಡುವಹಾಗಿಲ್ಲ. ತರಬೇತಿಗೆ ಅಜಿ ಸಲ್ಲಿಸಲು ನಿಗದಿಪಡಿಸಿರುವ ದಿನಾಂಕಕ್ಕೆ ಮೊದಲು 2 ವರ್ಷಗಳೊಳಗಾಗಿ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿಯೊಂದಿಗೆ ಎಸ್ಎಸ್ಎಲ್ಸಿ, ಪದವಿ ಹಾಗೂ ಕಾನೂನು ಪದವಿಯ ಅಂಕಪಟ್ಟಿ, ಜಾತಿ ಹಾಗೂ ಆದಾಯ ಪ್ರಮಾಣದ ದೃಢೀಕರಣ ಪ್ರಮಾಣ ಪತ್ರಗಳೊಂದಿಗೆ ನಿಗದಿತ ದಿನಾಂಕದೊಳಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಾವೇರಿ ಇವರಿಗೆ ಸಲ್ಲಿಸಬೇಕೆಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯಲ್ಲಿ ವೇಳೆಯಲ್ಲಿ ಸಂಪರ್ಕಿಸಬಹುದೆಂದು ತಿಳಿಸಿದ್ದಾರೆ.
ಲೆಕ್ಕ ಪರಿಶೋಧಕರ ಆಯ್ಕೆ
ಹಾವೇರಿ: ರಾಜ್ಯದಲ್ಲಿನ ಎಲ್ಲಾ ಕಾರ್ಯನಿರತ ಸಹಕಾರ ಸಂಘಗಳಿಗೆ ಪ್ರತಿ ಸಂಘಕ್ಕೆ ಮೂರು ಜನ ಲೆಕ್ಕಪರಿಶೋಧಕರ ಯಾದಿಯನ್ನು ನೀಡಲಾಗಿತ್ತು. ಈ ಕ್ರಮವನ್ನು ಪ್ರಶ್ನಿಸಿ ಕನಾಟಕ ಉಚ್ಚ ನ್ಯಾಯಾಲಯದಲ್ಲಿ ಕೆಲವೊಂದು ರಿಟ್ ಅರ್ಜಿಗಳು ದಾಖಲಾಗಿದ್ದವು. 5 ಜುಲೈ, 2013ರಂದು ಕರ್ನಾಟಕ ಉಚ್ಚ ನ್ಯಾಯಾಲಯ ಧಾರವಾಡ ಪೀಠದಲ್ಲಿ ತೀರ್ಪು ನೀಡಿದೆ. ಈ ತೀರ್ಪು ಅನ್ವಯ ಹಾಗೂ 10 ಜುಲೈ, 2013ರಂದು ಪ್ರಕಟಿಸಲಾಗಿರುವ ಸಹಕಾರಿ ಸಂಘಗಳ ನಿಯಮಗಳ ನಿಯಮ 29(ಬಿ)(3)ರನ್ವಯ ಸಹಕಾರ ಸಂಘಗಳು ಆಯಾ ಗುಂಪಿನ ಅರ್ಹ ಲೆಕ್ಕಪರಿಶೋಧಕರಲ್ಲಿ ಒಬ್ಬರನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ನೀಡಲಾಗಿರುತ್ತದೆ. ರಾಜ್ಯದಲ್ಲಿನ ಸಹಕಾರ ಸಂಘಗಳನ್ನು ಎ,ಬಿ ಮತ್ತು ಸಿ ಗುಂಪುಗಳನ್ನಾಗಿ, ಅದೇ ಪ್ರಕಾರ ಆಯಾ ಗುಂಪಿನ ಸಹಕಾರ ಸಂಘಗಳನ್ನು ಲೆಕ್ಕ ಪರಿಶೋಧನೆ ಮಾಡಲು ಅರ್ಹ ಲೆಕ್ಕ ಪರಿಶೋಧಕರ ಪಟ್ಟಿಯನ್ನು ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟಿಸಲು ಕ್ರಮ ತೆಗೆದುಕೊಳ್ಳಲಾಗಿರುತ್ತದೆ. ರಾಜ್ಯದಲ್ಲಿನ ಎಲ್ಲಾ ಸಹಕಾರ ಸಂಘಗಳು ಈ ಪಟ್ಟಿಯ ಪ್ರಕಾರವಾಗಿ ತಮ್ಮ ಸಂಸ್ಥೆಯ ಲೆಕ್ಕ ಪರಿಶೋಧನೆಯನ್ನು ನಿರ್ವಹಿಸಲು ಲೆಕ್ಕ ಪರಿಶೋಧಕರನ್ನು ಆಯ್ಕೆ ಮಾಡಿಕೊಂಡು ನಿಗದಿತ ಅವಧಿಯೊಳಗಾಗಿ ತಮ್ಮ ಸಂಸ್ಥೆಯ ಲೆಕ್ಕ ಪರಿಶೋಧನೆಯನ್ನು ಮುಕ್ತಾಯಗೊಳಿಸಬೇಕೆಂದು ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

