ಗ್ರಾಮೀಣರನ್ನು ಸಾಕ್ಷರನ್ನಾಗಿಸಿ
ರಾಣಿಬೆನ್ನೂರು: ತಾಲೂಕಿನ ಗ್ರಾಮೀಣ ಪ್ರದೇಶದ ಅನಕ್ಷರಸ್ಥರನ್ನು ಸಾಕ್ಷರರನ್ನಾಗಿಸಲು ಹಾಗೂ ಅವರಲ್ಲಿರುವ ಕೌಶಲ್ಯ ಗುರುತಿಸಿ ಆರ್ಥಿಕಾಭಿವೃದ್ಧಿಗಾಗಿ ವಿವಿಧ ರೀತಿಯ ತರಬೇತಿ ಕಾರ್ಯಕ್ರಮಗಳನ್ನು ಏರ್ಪಡಿಸುವ ಮಹತ್ವದ ಜವಾಬ್ದಾರಿ ಹೊಂದಿರುವ ಗ್ರಾಪಂ ಸಾಕ್ಷರ ಪ್ರೇರಕರು, ಕಾಲಹರಣ ಮಾಡದೆ ಕರ್ತವ್ಯದಲ್ಲಿ ನಿರತರಾಗಬೇಕೆಂದು ತಾಪಂ ಉಪಾಧ್ಯಕ್ಷ ಗಣೇಶ ಬಿಲ್ಲಾಳ ಹೇಳಿದರು.
ತಾಪಂ ಮತ್ತು ತಾಲೂಕು ಲೋಕ ಶಿಕ್ಷಣ ಸಮಿತಿ ಆಶ್ರಯದಲ್ಲಿ ತಾಲೂಕಿನ 35 ಗ್ರಾಪಂ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಕ್ಷರತಾ ಸಂಯೋಜಕರಿಗಾಗಿ ತಾಪಂ ಸಭಾ ಭವನದಲ್ಲಿ ಏರ್ಪಡಿಸಿದ್ದ ಮಾಸಿಕ ಸಮಾಲೋಚನೆ ಹಾಗೂ ಪ್ರಗತಿ ಪರಿಶಿಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಕ್ಷರತಾ ಪ್ರೇರಕರು ಮತ್ತು ಪಂಚಾಯಿತಿ ಸಂಯೋಜಕರು, ತಾಲೂಕಿನ ಗ್ರಾಮಾಂತರ ಪ್ರದೇಶದ ಅನಕ್ಷರಸ್ಧರ ಹಾಗೂ ಬಡವರ, ಅಲ್ಪಸಂಖ್ಯಾತರರ, ಹಿಂದುಳಿದವರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಮಹತ್ವವನ್ನು ಯೋಜನೆಯ ಲಾಭವನ್ನು ಅವರಿಗೆ ಮಟ್ಟಿಸುವ ಕಾರ್ಯ ಮತ್ತು ಯೋಜನೆಯ ಕುರಿತು ಮಾಹಿತಿ ನೀಡುವ ಮಹತ್ವದ ಕಾರ್ಯ ಮಾಡಬೇಕು. ಈಗಾಗಲೆ ಗುರುತಿಸಿರುವ ಮಹಿಳಾ ಅನಕ್ಷರಸ್ಥರನ್ನು ಸಾಕ್ಷರರನ್ನಾಗಿಸಿ, ವೃತ್ತಿ ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ಏರ್ಪಡಿಸಿ ಬಡವರ ಆರ್ಥಿಕಾಭಿವೃದ್ಧಿ ಹೆಚ್ಚಿಸಲು ಸಾಕ್ಷರತಾ ಪ್ರೇರಕರು ಶ್ರಮಿಸಬೇಕೆಂದು ಗಣೇಶ ಬಿಲ್ಲಾಳ ಹೇಳಿದರು.
ತಾಪಂ ಅಧ್ಯಕ್ಷೆ ಹೂವಕ್ಕ ನಾಗೂರು ಸಭೆ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಲೋಕ ಶಿಕ್ಷಣ ಸಮಿತಿ ಸಂಯೋಜಕ ಆರ್.ಡಿ. ಹೊಂಬರಡಿ, ತಾಲೂಕು ಲೋಕ ಶಿಕ್ಷಣ ಸಮಿತಿಯಿಂದ 2013-14ನೇ ಸಾಲಿನಲ್ಲಿ ಕೈಗೊಂಡಿರುವ ಕಾರ್ಯಕ್ರಮಗಳ ಕುರಿತು ವಿವರಿಸಿದರು. ಮೇಡ್ಲೆರಿ ಗ್ರಾಮ ಪಂಚಾಯಿತಿ ಸದಸ್ಯ ಈರಪ್ಪ ಹಾದಿಮನಿ, ಚಳಗೇರಿ ಮಾದರಿ ಕೇಂದ್ರ ಶಾಲೆಯ ನಿವೃತ್ತ ಪ್ರಧಾನ ಗುರುಗಳಾದ ನಾಗೂರು, ಸಂಯೋಜಕ ಕೀರ್ತಿನಾಥ ಕರಿಯಲ್ಲಪ್ಪನವರ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

