ಹಾವೇರಿ

ರಾಣಿಬೆನ್ನೂರು: ವಿಕಲಚೇತನರಿಗೆ ಸಾಧನಗಳ ವಿತರಣಾ ಕಾರ್ಯಕ್ರಮ

Published On :

ರಾಣಿಬೆನ್ನೂರು: ಅಂಗವಿಕಲರು ಆತ್ಮವಿಶ್ವಾಸದಿಂದ ಸಮಾಜದಲ್ಲಿ ಸಾಮಾನ್ಯರಂತೆ ಬದುಕುವುದನ್ನು ರೂಢಿಸಿಕೊಂಡಲ್ಲಿ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಜಿಲ್ಲಾ ನ್ಯಾಯಾಧೀಶ ಎಚ್.ಪಿ. ಸಂದೇಶ ನುಡಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವಕೀಲರ ಸಂಘ, ವಿಕಾರ್ಡ್ ಸಂಸ್ಥೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ನಗರದ ತಾಪಂ ಸಭಾ ಭವನದಲ್ಲಿ ಅಂಗವಿಕಲರಿಗೆ ಹಾಗೂ ಮಾನಸಿಕ ಅಸ್ವಸ್ಥ ವ್ಯಕ್ತಿಗಳಿಗಾಗಿ ಏರ್ಪಡಿಸಿದ್ದ ಕಾನೂನು ಅರಿವು-ನೆರವು ಶಿಬಿರದಲ್ಲಿ ಅರ್ಹ ವಿಕಲಚೇತನರಿಗೆ ಸಾಧನಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಕೆ.ಬಿ. ಅಸೋದೆ, ವಿಕಲತೆ ದೇಹಕ್ಕೆ ಅಂಟಿಕೊಂಡಿರಬಹುದು ಮನಸ್ಸಿಗಲ್ಲ. ವಿಕಲಚೇತನರು ಪರಸ್ಪರ ಸಹಕಾರ ಮನೋಭಾವದಿಂದ ಕಾರ್ಯನಿರ್ವಹಿಸಿದಲ್ಲಿ ಜೀವನದಲ್ಲಿ ಧೈರ್ಯದಿಂದ ಮುನ್ನುಗ್ಗಲು ಸಾಧ್ಯ ಎಂದು ಹೇಳಿದರು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಡಿ.ಎಚ್. ಲಲಿತಾ, ಅಂಗವಿಕಲರ ಸಂಘದ ರಾಜ್ಯಾಧ್ಯಕ್ಷ ಅಲ್ಲಭಕ್ಷ ಸಿ. ಹರಿಹರ ಮಾತನಾಡಿದರು. ಜಿಲ್ಲಾ ಮಹಿಳಾ ಮಕ್ಕಳ ಕಲ್ಯಾಣಾಧಿಕಾರಿ ಚನ್ನಮ್ಮ ಹೊಳೆಹೊಸೂರು ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ, ನ್ಯಾಯಾಧೀಶ ಎನ್.ಪಿ. ಕೋಪರ್ಡೆ, 1ನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಬಾಳಪ್ಪ ಅಣ್ಣಪ್ಪ ಜರಗು, ತಾಲೂಕು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಂ.ಎಸ್. ಬೆಲ್ಲದ, ಉಪಾಧ್ಯಕ್ಷ ಮಂಜುನಾಥ ಗೌಡಪ್ಪಗೌಡ್ರ, ಕಾರ್ಯದರ್ಶಿ ಎಸ್.ಎಸ್. ಕುಬಸದ, ನೋಟರಿ ಏಕಾಂತ ಮುದಿಗೌಡರ, ಸಹಾಯಕ ಸರ್ಕಾರಿ ಅಭಿಯೋಜಕಿ ಸಿ.ಕೆ. ಶ್ರೀವಾಣಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.