ವಿಪತ್ತು ನಿರ್ವಹಣೆ ಮಾರ್ಗದರ್ಶನ ಅಗತ್ಯ
ಹಾವೇರಿ: ನಿತ್ಯದ ಜೀವನದಲ್ಲಿ ಅನೇಕ ನೈಸರ್ಗಿಕ ಹಾಗೂ ಮಾನವ ನಿರ್ಮಿತ ಅಪಘಾತ-ಅವಘಡಗಳು ಸಂಭವಿಸುತ್ತಿದ್ದು, ಅವುಗಳನ್ನು ತಡೆಗಟ್ಟಲು, ಸಮರ್ಪಕವಾಗಿ ಎದುರಿಸಲು ಯುವಕರಿಗೆ ವಿಪತ್ತು ನಿರ್ವಹಣೆ ಕುರಿತು ತಜ್ಞರಿಂದ ಮಾರ್ಗದರ್ಶನ ಅವಶ್ಯ ಎಂದು ಹಾವೇರಿ ಉಪವಿಭಾಗಾಧಿಕಾರಿ ಕೆ. ಚನ್ನಬಸಪ್ಪ ಅಭಿಪ್ರಾಯಪಟ್ಟರು.
ಅವರು ಕೆಎಲ್ಇ ಸಂಸ್ಥೆಯ ಜಿ.ಎಚ್. ಕಾಲೇಜಿನ ಯುವ ರೆಡ್ ಕ್ರಾಸ್, ಎನ್ಎಸ್ಎಸ್, ಎನ್ಸಿಸಿ, ಸ್ಕೌಟ್ಸ್ ಗೈಡ್ಸ್ ಘಟಕಗಳು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣೆ ಕಾರ್ಯಪಡೆ ಗುಂಟೂರು ಇವರ ವತಿಯಿಂದ ಬುಧವಾರ ಜರುಗಿದ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಭೂಕಂಪ, ಬೆಂಕಿ ಅನಾಹುತ, ನೆರೆಪ್ರವಾಹ, ಬಾಂಬದಾಳಿ, ಪ್ರಕೃತಿ ವಿಕೋಪ, ದೋಣಿದುರಂತ, ಸಾಮಾನ್ಯವಾಗಿದ್ದು ಇಂತಹ ಸಮಯದಲ್ಲಿ ಕಷ್ಟದಲ್ಲಿನ ಜನರ ಜೀವ ಹಾಗೂ ಆಪತ್ತಿನಲ್ಲಿರುವ ಆಸ್ತಿ ರಕ್ಷಣೆ ಯುವಕರು ಮುನ್ನುಗ್ಗಬೇಕು ಎಂದರು.
ಪ್ರಾಚಾರ್ಯ ಡಾ. ಬಿ.ಸಿ. ಬನ್ನೂರ ಅಧ್ಯಕ್ಷತೆ ವಹಿಸಿದ್ದರು. ತಹಸೀಲದಾರ್ ಶಿವಲಿಂಗು ಪ್ರಾಸ್ತಾವಿಕ ಮಾತನಾಡಿದರು. ಎನ್. ಕೆಂಚವೀರಪ್ಪ ಸ್ವಾಗತಿಸಿದರು. ಹಬೀಬ ಖತೀಬ ವಂದಿಸಿದರು. ತಾಪಂ ಅಧ್ಯಕ್ಷೆ ರೆಹನಾ ಚಾಂದ ಶೇಖ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ದೇಶಪಾಂಡೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾರ್ಯಪಡೆಯ ಅಧಿಕಾರಿ ತ್ರಿಪಾಠಿ ಆರ್.ಪಿ. ಇದ್ದರು. ನೆರೆಪ್ರವಾಹ, ಬಾಂಬ್ ದಾಳಿ, ಪ್ರಕೃತಿ ವಿಕೋಪ ಸೇರಿದಂತೆ ಅನೇಕ ವಿಪತ್ತುಗಳು ಎದುರಾದಾಗ ಅವುಗಳನ್ನು ಯಾವ ರೀತಿ ತಡೆಗಟ್ಟಬೇಕು. ಯಾವ ರೀತಿ ಜನರ ಪ್ರಾಣ ರಕ್ಷಣೆಗೆ ಮುಂದಾಗಬೇಕೆಂಬುದನ್ನು ವಿಪತ್ತು ದಳದ ಸೈನಿಕರು ಪ್ರಾಯೋಗಿಕ ಪ್ರಾತ್ಯಕ್ಷಿಕೆ ಮೂಲಕ ತಿಳಿವಳಿಕೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

