ಹಾವೇರಿ

ಜಿಟಿಜಿಟಿ ಮಳೆ: ತಾಪಂ ಕಾರ್ಯಾಲಯ ಸೋರಿಕೆ

Published On :

ಕನ್ನಡಪ್ರಭ ವಾರ್ತೆ, ರಾಣಿಬೆನ್ನೂರು, ಜು. 26
ಕಳೆದ 10 ದಿನಗಳಿಂದ ತಾಲೂಕಾದ್ಯಂತ ಬಿಡುವಿಲ್ಲದೆ ಜಿಟಿ-ಜಿಟಿಯಾಗಿ ಮಳೆ ಸುರಿಯುತ್ತಿರುವ ಕಾರಣ ಇಲ್ಲಿನ ತಾಲೂಕು ಪಂಚಾಯಿತಿ ಕಾರ್ಯಾಲಯವು ಸಂಪೂರ್ಣ ಸೋರುತ್ತಿರುವುದರಿಂದ ಕಾರ್ಯಾಲಯದಲ್ಲಿರುವ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ತಮ್ಮ ಹಾಗೂ ಸರ್ಕಾರದ ಕಾಗದ ಪತ್ರ ಮತ್ತು ಕೌಂಪ್ಯೂಟರ್ಸ್‌ಗಳ ರಕ್ಷಣೆಗಾಗಿ ತಲೆಯ ಮೇಲೆ ಪ್ಲಾಸ್ಟಿಕ್ ಹಾಳೆಗಳನ್ನು ಹೊದ್ದುಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ.
ತಾಲೂಕಿನ 108 ಹಳ್ಳಿಗಳ ಸರ್ವತೋಮುಖ ಅಭಿವೃದ್ಧಿಗಾಗಿ 35 ಗ್ರಾಮ ಪಂಚಾಯಿತಿಗಳಿಗೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳಿಗೆ ಅಭಿವೃದ್ಧಿ ಕಾರ್ಯಗಳನ್ನು ಸಾಧಿಸುವುದಕ್ಕಾಗಿ ಕೋಟ್ಯಂತರ ರುಪಾಯಿ ಹಣ ನೀಡುವ ತಾಲೂಕು ಪಂಚಾಯಿತಿ ಕಾರ್ಯಾಲಯದ ಸ್ಥಿತಿಯೇ ಹೀಗಿರುವಾಗ ತಾಲೂಕಿನ 35 ಗ್ರಾಮ ಪಂಚಾಯಿತಿಗಳ ಗತಿ ಹೇಗಿರಬಹುದು! ತಾಲೂಕು ಪಂಚಾಯಿತಿಯಿಂದ ಅಭಿವೃದ್ಧಿ ಕಾರ್ಯಗಳನ್ನು ಸಾಧಿಸುವುದಕ್ಕಾಗಿ ಹಣ ಪಡೆಯುತ್ತಿರುವ ವಿವಿಧ ಇಲಾಖೆಗಳ ಕಟ್ಟಡಗಳ ಪರಿಸ್ಥಿತಿ ಹದಗೆಟ್ಟಿದೆ.
10 ದಿನಗಳಿಂದೀಚೆಗೆ ಬಿಡುವಿಲ್ಲದೆ ಜಿಟಿ-ಜಿಟಿ ಮಳೆ ಸುರಿಯುತ್ತಿರುವ ಕಾರಣ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಕಾರ್ಯನಿರ್ವಣಾಧಿಕಾರಿಗಳ ಕೊಠಡಿಗಳು ಸೋರಿಕೆಯಾಗುತ್ತಿವೆ.
ಲೆಕ್ಕ ಅಧಿಕ್ಷಕರ ಕೊಠಡಿ, ತಾಲೂಕು ಅಕ್ಷರ ದಾಸೋಹ ಕಾರ್ಯಕ್ರಮದ ಸಹಾಯಕ ನಿರ್ದೇಶಕರ ಕೊಠಡಿ, ತಾಲೂಕು ಲೋಕ ಶಿಕ್ಷಣ ಸಮಿತಿ ಸಂಯೋಜಕರ ಕೊಠಡಿ ಹಾಗೂ ಕಂಪೂಟರ ಸೆಂಟರ್, ವ್ಯವಸ್ಥಾಪಕರ ಕೊಣೆ ಮತ್ತು ಹಳೆ ಸಭಾಭವನಗಳಲ್ಲೆಲ್ಲಾ ನೀರಿನಿಂದ ಸೋರುತ್ತಿರುವ ಕಾರಣ ತಾಲೂಕು ಪಂಚಾಯಿತಿ ಕಾರ್ಯಾಲಯವು ಕೆರೆಯಂತಾಗಿ ಮಾರ್ಪಟ್ಟಿದೆ.
ಕಾರ್ಯಾಲಯದ ಎಲ್ಲಾ ವಿಭಾಗಗಳು ಸೋರುತ್ತಿರುವ ಕಾರಣ ನೌಕರರು ಬೇಸರದಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ತಾಲೂಕು ಪಂಚಾಯ್ತಿ ಕಟ್ಟಡವು ಸಂಪೂರ್ಣ ಹಾಳಾಗಿರುವ ಕಾರಣ ಬಿಜೆಪಿ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದ ಸಿ.ಎಂ. ಉದಾಸಿ ಅವರು ಕಟ್ಟಡದ ಸ್ಥಿತಿಗತಿಗಳನ್ನು ವೀಕ್ಷಿಸಿದ ನಂತರ ಕಟ್ಟಡವನ್ನು ನೆಲಸಮಗೊಳಿಸಿ ನೂತನ ಕಟ್ಟಡ ಕಟ್ಟಲು ಕ್ರೀಯಾ ಯೋಜನೆಯೊಂದನ್ನು ಸಿದ್ದಪಡಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದರು.
ಅಲ್ಲಿಂದ ಇಲ್ಲಿಯವರೆಗೂ ಈ ಕಟ್ಟಡದ ರಿಪೇರಿಯಾಗಲಿ ನೆಲಸಮಗೊಳಿಸಿ ಹೊಸ ಕಟ್ಟಡ ಕಟ್ಟುವುದಕ್ಕಾಗಲಿ ಸರ್ಕಾರದ ಅಧಿಕಾರಿಗಳೆ ಮುಂದಾಗದಿರುವ ಕಾರಣ ಸೋರುತ್ತಿರುವ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ನೌಕರರು ಸೇವೆ ಸಲ್ಲಿಸದಂತಹ ವಾತಾವರಣ ನಿರ್ಮಾಣಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.