ಹಾವೇರಿ

ಸುದ್ದಿ ಸಂಕ್ಷೇಪ

Published On :

ಇಂದಿನಿಂದ 108 ಆರೋಗ್ಯ ಸೇವೆ ಸ್ಥಗಿತ
ಹಾವೇರಿ: 
ಸೇವಾಭದ್ರತೆಯೂ ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಸು
ವಂತೆ ಆಗ್ರಹಿಸಿ ಆರೋಗ್ಯ  ಕವಚ 108 ಆಂಬ್ಯುಲೆನ್ಸ್ ಚಾಲಕರು ನಾಳೆಯಿಂದ ಸೇವೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. ಈ ಕುರಿತು ಪ್ರಕಟಣೆಯೊಂದನ್ನು ನೀಡಿರುವ ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷ ಇಸ್ಮಾಯಿಲ್ ಕೊಣ್ಣೂರ ಮಾತನಾಡಿ, ಹಗಲಿರುಳೆನ್ನದೇ ಸೇವೆ ಸಲ್ಲಿಸುತ್ತಿರುವ ಚಾಲಕರು, ಶುಶ್ರೂಷಕಿಯರು ಜನರ ಸೇವೆಯಲ್ಲಿ ತೊಡಗಿದ್ದು, ಸಾವಿರಾರು ಜೀವಗಳನ್ನು ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಿದ್ದರೂ ಕೂಡ ಇಂದಿಗೂ ಅಲ್ಪ ಮೊತ್ತದ ಸಂಬಳ ನೀಡುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ. 108 ಸಿಬ್ಬಂದಿಗೆ ಸೇವಾಭದ್ರತೆ ಒದಗಿಸುವಂತೆ ಬಹು ದಿನದ ಬೇಡಿಕೆಯಾಗಿದ್ದು, ಈ ಕುರಿತು ಹಲವಾರು ಸಕರಾರಕ್ಕೆ ಮನವಿ ಸಲ್ಲಿಸಿದ್ದರೂ ಕ್ಯಾರೆ ಎನ್ನುತ್ತಿಲ್ಲ. ಅಲ್ಲದೇ ಉಸ್ತುವಾರಿ ವಹಿಸಿಕೊಂಡಿರುವ ಆಂಧ್ರ ಮೂಲದ ಜಿವಿಕೆ ಇಎಂಆರ್‌ಐ ಸಂಸ್ಥೆಯು ಅನಗತ್ಯ ಕಿರುಕುಳ ನೀಡುತ್ತಿದೆ.
ನಾಳೆಯಿಂದ ಮುಷ್ಕರ: ಸರ್ಕಾರದ ಕಮ್ರವನ್ನು ಖಂಡಿಸಿ ಜು. 27ರಂದು ಬೆಂಗಳೂರಿನ ಫ್ರಿಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಟ ಕಾಲ ಮುಷ್ಕರ ಪ್ರಾರಂಭಿಸುತ್ತಿದ್ದು, ಕಾರಣ ಸಂಬಂಧಿಸಿದ 108 ಆರೋಗ್ಯ ಕವಚದ ಸಿಬ್ಬಂದಿಯು ಸ್ವ-ಪ್ರೇರಣೆಯಿಂದ ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸಿ
ಬ್ಯಾಡಗಿ:
  ಸಮಾಜ ಸರಿದಾರಿಯಲ್ಲಿ ನಡೆಯುವಂತೆ ಮಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದ್ದು, ಸಾಮೂಹಿಕ ಜವಾಬ್ದಾರಿ ತೋರುವ ಮೂಲಕ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸುವಂತೆ ಎಸ್‌ಡಿಎಂಸಿ ಅಧ್ಯಕ್ಷ ಎಂ.ಸಿ. ಹೆಡಿಯಾಲ ಕರೆ ನೀಡಿದರು. ತಾಲೂಕಿನ ಬನ್ನಿಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವರ್ಗಾವಣೆ ಮೇರೆಗೆ ತೆರಳಿದ  ಮುಖ್ಯ ಶಿಕ್ಷಕ ವೈ.ಟಿ. ಹೆಬ್ಬಳ್ಳಿ ಅವರ ಬಿಳ್ಕೋಡುಗೆ ಸಮಾರಂಭದಲ್ಲಿ ಮಾತನಾಡಿದರು. ಇತ್ತೀಚಿಗೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಡುವೆ ಸಾಮ್ಯತೆಯ ಕೊರತೆಯಿಂದಾಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನಡುವೆ ಕಂದಕ ನಿರ್ಮಾಣವಾಗಿದೆ ಎಂದರು. ಅಭಿಮಾನ ಕಳೆದುಕೊಂಡ ವಿದ್ಯಾರ್ಥಿಗಳು ಜವಾಬ್ದಾರಿ ಕಳಚಿಕೊಂಡ ಶಿಕ್ಷಕರಿಂದಾಗಿ ಗುಣಮಟ್ಟದ ಶಿಕ್ಷಣ ಇಲ್ಲದಂತಾಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿವೆ ಎಂದರು. ನಿರಂತರ ಅಧ್ಯಯನ ಹಾಗೂ ಕ್ರೀಯಾಶೀಲತೆಯಿಂದ ಮಕ್ಕಳಿಗೆ ಸಾಮಾನ್ಯ ಜ್ಞಾನ ಹೆಚ್ಚಿಸುವ ಮೂಲಕ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸುವ ಕಾರ್ಯವಾಗಬೇಕಾಗಿದೆ ಎಂದ ಅವರು, ಈ ನಿಟ್ಟಿನಲ್ಲಿ ಶಿಕ್ಷಕ ವೈ.ಟಿ. ಹೆಬ್ಬಳ್ಳಿ ಗ್ರಾಮದ ಮಕ್ಕಳಲ್ಲಿ ಶೈಕ್ಷಣಿಕ ವಾತಾವರಣ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.  ಇದೇ ಸಂದರ್ಭದಲ್ಲಿ ವರ್ಗಾವಣೆ ಮೇರೆಗೆ ಹಾವೇರಿ ತಾಲೂಕಿನ ಕಬ್ಬೂರಿಗೆ ತೆರಳಿದ ವೈ.ಟಿ. ಹೆಬ್ಬಳ್ಳಿಯವರನ್ನು ಗ್ರಾಮಸ್ಥರು ಸನ್ಮಾನಿಸಿದರು. ಗ್ರಾಪಂ ಅಧ್ಯಕ್ಷ ಶಾಂತವ್ವ ಕರವಜ್ಜನವರ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸದಸ್ಯ ನಾಗಪ್ಪ ಎಲಿಗಾರ, ಮುಖಂಡರಾದ ಸಿ.ಸಿ. ಬುಡ್ಡನಗೌಡ್ರ, ಮಲಕಪ್ಪ ಬುಡ್ಡನಗೌಡ್ರ, ಮರಡಿ ಬಸಪ್ಪ ನೆಲೋಗಲ್, ಮುಖ್ಯ ಶಿಕ್ಷಕ ಎನ್.ಎಂ. ಪಾಟೀಲ ಇನ್ನಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.